ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಡ್ಯಾಂ ನಲ್ಲಿ ಈಜಲು ನೀರಿಗೆ ಇಳಿದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟ ಮಗನ ಕಣ್ಣೇದುರೇ ತಂದೆ ನೀರಲ್ಲಿ ಮುಳುಗಿ ಸಾವು ಕಂಡಿದ್ದು ಧಾರುಣವಾಗಿದೆ. ಲಕ್ಷ್ಮಣ ಭೀಮಣ್ಣ ಬೋವಿ (42) ಈಜಲು ಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವನು ಮದ್ಯಾನ ನ್ಯಾಸರ್ಗಿ ಡ್ಯಾಂ ನಲ್ಲಿ ಸ್ನಾನ ಮಾಡಲೆಂದು, ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಈ ವೇಳೆ ನೀರಲ್ಲಿ ಈಜಾಡುತ್ತಿರುವಾಗಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ತಂದೆ ನೀರಲ್ಲಿ ಕಣ್ಮರೆಯಾಗುತ್ತಲೇ ಆತಂಕಗೊಂಡ ಮಗ ಸ್ಥಳೀಯರಿಗೆ...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: ಮುಂಡಗೋಡ ಸುದ್ದಿ
ರಣದಲ್ಲಿ ಗೆದ್ದು ಬಂದ ಮುಂಡಗೋಡಿನ ಸ್ಪರ್ಧಾ ಹೋರಿಗಳು, ಭೀಷ್ಮ, ವೀರಭದ್ರನಿಗೆ ಸಂಭ್ರಮದ ಸ್ವಾಗತ..!
ಮುಂಡಗೋಡಿನ ಹೋರಿ ಅಭಿಮಾನಿಗಳ ಪಾಲಿಗೆ ಸಂಭ್ರಮವೋ ಸಂಭ್ರಮ..! ಯಾಕಂದ್ರೆ ಮುಂಡಗೋಡಿನ ಆ ಎರಡು ಸ್ಪರ್ಧಾ ಹೋರಿಗಳು ಇಡೀ ತಾಲೂಕಿನ ಕೀರ್ತಿ ಪತಾಕೆ ಹಾರಿಸಿವೆ. ಅದ್ರಲ್ಲೂ, ಇಡಿ ಇಡಿಯಾಗಿ ಸಾವಿರಾರು ಸಂಖ್ಯೆಯ ಅಭಿಮಾನಿಗಳ ಎದುರು ಛಲದಂಕಮಲ್ಲರಂತೆ ಅಬ್ಬರಿಸಿ ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಬಹುಮಾನ ಬಾಚಿಕೊಂಡಿವೆ.. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಂದಾಪುರದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಟ್ಟಣದ “ಮುಂಡಗೋಡ ಭೀಷ್ಮ” ಹಾಗೂ “ಮುಂಡಗೋಡ ವೀರಭದ್ರ” ಎಂಬುವ ಹೋರಿಗಳು ಜಯಭೇರಿ ಸಾಧಿಸಿವೆ. ಹೀಗಾಗಿ, ಎರಡೂ ಹೋರಿಗಳಿಗೆ ಎರಡು ಬೈಕ್...
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?
ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....
ಮುಂಡಗೋಡಿನಲ್ಲಿ ಮಾ.20 ರ ಸೋಮವಾರ ಬಿಜೆಪಿ ಸುನಾಮಿ ಏಳಲಿದೆ- ಗುಡ್ಡಪ್ಪ ಕಾತೂರ್
ಮುಂಡಗೋಡ: ಮಾರ್ಚ 20 ರ ಸೋಮವಾರ ಮುಂಡಗೋಡಿನಲ್ಲಿ ಬಿಜೆಪಿ ಸುನಾಮಿ ಏಳಲಿದೆ, ಆ ಸುನಾಮಿಯಲ್ಲಿ ಎದುರಾಳಿಗಳು ಕೊಚ್ಚಿ ಹೋಗಲಿದ್ದಾರೆ ಅಂತಾ ಬಿಜೆಪಿ ಮುಖಂಡ ಗುಡ್ಡಪ್ಪ ಕಾತೂರ ವಿಶ್ವಾಸ ವ್ಯಕ್ತ ಪಡಿಸಿದ್ರು. ಅವ್ರು ಕರಗಿನಕೊಪ್ಪದ ಬಳಿ ಬಿಜೆಪಿ ಸಮಾವೇಶದ ಮೈದಾನದಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ರು. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಮಾಡಿರೋ ಅಭಿವೃದ್ಧಿ ಪರ ಕಾರ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇದೇ ಬರುವ ಸೋಮವಾರ ಮಾರ್ಚ 20 ರಂದು ಬಿಜೆಪಿ ಕಾರ್ಯಕರ್ತರ...
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...
ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!
ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಕಳೆದ ಮೂರು...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಮುಂಡಗೋಡಿಗೆ ಕರಾಳ ದಿನವಾಯ್ತು ಗುರುವಾರ, ಮಡಿದ ಮೂವರೂ ಯುವಕರಿಗೆ ಸ್ನೇಹಿತರ ಅಶ್ರುತರ್ಪಣ..!
ನಿಜಕ್ಕೂ ಮುಂಡಗೋಡಿಗರ ಪಾಲಿಗೆ ಇವತ್ತು ಕರಾಳ ದಿನ. ಆಡಾಡುತ್ತಲೇ ಮನೆ ಮಕ್ಕಳನ್ನು ಕಳೆದುಕೊಂಡ ಕೆಟ್ಟ ದಿನ. ಬಹುಶಃ ಇವತ್ತು ಮುಂಡಗೋಡಿನಲ್ಲಿ ಯಾರೊಬ್ಬರ ಮುಖದಲ್ಲಿ ನಗು ಅಪರೂಪವಾಗಿತ್ತು. ಬರೀ ಆತಂಕ, ನಮ್ಮವರನ್ನು ಕಳೆದುಕೊಂಡ ನೋವಿನ ಛಾಯೆ ತುಂಬಿತ್ತು. ಆ ನೋವಿನಲ್ಲೇ ಇಲ್ಲಿನ ಶಿವಾಜಿ ಸರ್ಕಲ್ ನಲ್ಲಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ, ಮೂವರೂ ಯುವಕರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಜಾತ್ರೆಗೆ ಹೋಗಿದ್ದವರು..! ಜಾತ್ರೆಗೆ ಹೋಗಿದ್ದ ಆ ಐದು ಸ್ನೇಹಿತರು ಅದ್ಯಾವ ಗಳಿಗೆಯಲ್ಲಿ ಮನೆಯಿಂದ ಹೊರಗೆ ಹೆಜ್ಜೆ ಹಾಕಿದ್ದರೋ ಗೊತ್ತಿಲ್ಲ....
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...
ಶಂಕ್ರಯ್ಯ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾನೆ, ದಯವಿಟ್ಟು ತಪ್ಪು ಮಾಹಿತಿಯ ಸ್ಟೇಟಸ್ ಬೇಡ ಗೆಳೆಯರೆ, ಎಲ್ಲರೂ ಆತನಿಗಾಗಿ ಪ್ರಾರ್ಥಿಸೋಣ..!
ಮುಂಡಗೋಡಿನ ಪಾಳಾ ಸಮೀಪ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಯುವಕ ಶಂಕರಯ್ಯನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಆದ್ರೆ, ಇನ್ನೇನೂ ಬೇರೆಯ ರೀತಿಯ ಅನಾಹುತ ಸಂಭವಿಸಿಲ್ಲ. ತಜ್ಞ ವೈದ್ಯರು ನಿರಂತರವಾಗಿ ಶಂಕರಯ್ಯನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ಕಿಮ್ಸ್ ನ ವೈದ್ಯರಿಂದ ಮಾಹಿತಿ ಲಭ್ಯವಾಗಿದೆ. ಆತ ಬದುಕಿದ್ದಾನೆ. ಹೀಗಾಗಿ, ತಪ್ಪು ಮಾಹಿತಿ ಹರಡಬೇಡಿ ಅಂತಾ ಕುಟುಂಬಸ್ಥರು ಮನವಿ ಮಾಡಿದ್ದಾರೆ.. ಬದುಕಿ ಬಾ ತಮ್ಮಾ..! ಅಷ್ಟಕ್ಕೂ, ನಿನ್ನೆ ನಡೆದ ಭೀಕರ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರೋ ಶಂಕ್ರಯ್ಯ ಮಲ್ಲಯ್ಯ...








