ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಸಹಕಾರಿ ಧುರೀಣ, ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿದ್ದಪ್ಪ ಸಣ್ಣಕಲ್ಲಪ್ಪ ಬೀರವಳ್ಳಿ(65) ಹೃದಯಾಘತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿರೋ ಸಿದ್ದಪ್ಪ ಬೀರವಳ್ಳಿ, ಮೃದುಸ್ವಭಾವದ, ಜನಾನುರಾಗಿ ವ್ಯಕ್ತಿತ್ವದವರಾಗಿದ್ದರು. ಈ ಹಿಂದೆ ವೀರೇಶ್ವರ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸಿದ್ದಪ್ಪ ಬೀರವಳ್ಳಿ, ಹಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದರು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರೋ, ಸಿದ್ದಪ್ಪ ಬೀರವಳ್ಳಿಯವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ...
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೈಕೋರ್ಟ್ ಮದ್ಯಂತರ ಆದೇಶ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ ದಿಢೀರ್ ವಾಪಸ್..!
ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ಹಾವು ಏಣಿ ಆಟ ಮುಂದುವರೆದಿದೆ. ಅಧ್ಯಕ್ಷ ಸುನಿಲ್ ವಾಗು ಸಳಕೆ ಜುಲೈ 16 ರಂದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೊಂದು ಆಟ ಶುರುವಿಟ್ಟು ಸೆಡ್ಡು ಹೊಡೆದಿದ್ದಾರೆ. ಮದ್ಯಂತರ ಆದೇಶ..! ಅಂದಹಾಗೆ, ನಾಗನೂರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯುವಂತೆ ಕೆಲವು ಸದಸ್ಯರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗದ ಸಹಾಯಕ್ ಆಯುಕ್ತರು ಜುಲೈ 25...
ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಅನ್ನೋದು ಕೋಮಾ ಸ್ಥಿತಿಗೆ ತಲಪೇ ಬಿಡ್ತಾ..? ಸದ್ಯದ ಪರಿಸ್ಥಿತಿ ನೋಡಿದ್ರೆ ಹಾಗೇ ಅನ್ನಿಸ್ತಿದೆ. ತಾಲೂಕಿನಲ್ಲಿ ಒಂದೊಳ್ಳೆ ಅವಕಾಶ ಹೊಂದಿದ್ದ ಕೈ ಪಡೆಗೆ, ಸಿಕ್ಕ ಅವಕಾಶ ಬಳಸಿಕೊಳ್ಳುವ ಯಾವೊಂದೂ ಕಾರ್ಯಗಳೂ ಜಾರಿಯಾಗಲೇ ಇಲ್ಲ ಅನ್ನೋದು ಖುದ್ದು ಅದೇ ಪಕ್ಷದ ನಿಷ್ಟಾವಂತರನ್ನು ಚಿಂತೆಗೀಡು ಮಾಡಿದೆ. ಇನ್ನು, ನಾನೇ ಅಭ್ಯರ್ಥಿ ಅಂತಾ ಗುಂಗು ಹಿಡಿಸಿ, ಅದೇಲ್ಲೋ ಕುಳಿತು ರಿಮೋಟ್ ಒತ್ತುವ ಪ್ರಶಾಂತಣ್ಣ, ಅದೇಷ್ಟೋ ದಿನಗಳಿಂದ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ. ಹೀಗಾಗಿ, ಪಕ್ಷ ಕ್ಷೇತ್ರದಲ್ಲಿ ವಿಲ ವಿಲ ಅಂತಿದೆ....
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ...
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಪಂಚಾಯತಿಯಲ್ಲಿ ಪಕ್ಷಾಂತರ, ಗ್ರಾಪಂ ಸದಸ್ಯ ರಾಜೂ ಹರಿಜನ್ ಬಿಜೆಪಿ ಸೇರ್ಪಡೆ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಸದಸ್ಯ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯ ರಾಜೂ ಫಕ್ಕೀರವ್ವ ಹರಿಜನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದ್ರೊಂದಿಗೆ, ಗ್ರಾಮ ಪಂಚಾಯತಿ ಮಟ್ಟದ ರಾಜಕೀಯ ಮೇಲಾಟ ಮತ್ತೊಂದು ಮಗ್ಗಲಿಗೆ ಹೊರಳಿದೆ. ಅಧ್ಯಕ್ಷರ ಬದಲಾವಣೆ ಎಫೆಕ್ಟ್..? ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಅನ್ನಪೂರ್ಣ ಬೆಣ್ಣಿ ಮೇಡಂ ಒಪ್ಪಂದದಂತೆ ತಮ್ಮ ಪದವಿಗೆ ರಾಜೀನಾಮೆ ನೀಡಲು ಕೊಂಚ ತಡ ಮಾಡಿದ್ರು. ಹೀಗಾಗಿ, ತಮ್ಮದೇ ಪಕ್ಷದ ಸದಸ್ಯರಲ್ಲಿ ಸಾಕಷ್ಟು ತಳಮಳಕ್ಕೆ...









