ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...
ಸಚಿವ ಶಿವರಾಮ್ ಹೆಬ್ಬಾರ್ ಗೆ ಜನ್ಮ ದಿನದ ಶುಭಾಶಯಗಳು
ಜಾಹೀರಾತು ಯಲ್ಲಾಪುರ ಕ್ಷೇತ್ರದ ಜನಪ್ರಿಯ ಶಾಸಕರು, ಕಾರ್ಮಿಕ ಸಚಿವರು ಶಿವರಾಮ್ ಹೆಬ್ಬಾರ್ ಇಂದು ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಹೀಗಾಗಿ, ಅಭಿಮಾನಿಗಳು ನಿನ್ನೆಯಿಂದಲೇ ಶುಭಾಶಯಗಳ ಸುರಿಮಳೆ ಸುರಿಸ್ತಿದಾರೆ. ಅದ್ರಂತೆ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರು ಆದ ಹಾಗೂ ಬಿಜೆಪಿ ಮುಖಂಡರಾದ ಸಿದ್ದಪ್ಪ ಹಡಪದ ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ಶುಭಾಶಯ ಕೋರಿದ್ದಾರೆ.
ಬಸಾಪುರದಲ್ಲಿ ರಾಣಾ ಪ್ರತಾಪ ಸಿಂಹರ ಜಯಂತಿ ಉತ್ಸವ, ಭವ್ಯ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರಾತ್ರಿಯಿಡಿ ರಾಣಾ ಪ್ರತಾಪ್ ಸಿಂಗ್ ರವರ ಜಯಂತಿ ಭವ್ಯ ಮೆರವಣಿಗೆ ನಡೆಯಿತು. ಸಮಾಜ ಬಾಂದವರು ರಾಣಾ ಪ್ರತಾಪ ಸಿಂಹರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಇಡೀ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಮೆರವಣಿಗೆ ನಡೆಸಿದ್ರು. ಭಕ್ತಿಗೀತೆಗಳನ್ನು ಹಾಕಿ ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ ಯುವಕರು, ರಾಣಾ ಪ್ರತಾಪ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಇನ್ನು ನಿನ್ನೆ ಸಂಜೆಯಿಂದಲೇ ಬಸಾಪುರ ಗ್ರಾಮದಲ್ಲಿ ” ರಾಣಾ” ಜಯಂತಿ ಆಚರಣೆ ಸಂಭ್ರಮ ಜೋರಾಗಿತ್ತು. ವಿವಿಧ ಧಾರ್ಮಿಕ ಕಾರ್ಯಕ್ರಮ...
ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!
ಮುಂಡಗೋಡ ಪೊಲೀಸರು ನಿನ್ನೆಯಿಂದ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ಬಲೆ ಬೀಸಿರೋ ಮುಂಡಗೋಡ ಪಿಎಸ್ಐ ಬಸವರಾಜು ಮಬನೂರು ಮತ್ತವರ ತಂಡ ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿ ಹಲವು ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದ್ರೊಂದಿಗೆ ಮೂರೂ ಕೇಸುಗಳಲ್ಲಿ ಒಟ್ಟೂ 10 ಸಾವಿರಕ್ಕೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ನಂಬರ್-1 ಮುಂಡಗೋಡ ತಾಲೂಕಿನ ಕಾತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ, ನಾಗರಾಜ ಅಡಿವೆಪ್ಪ ಆಡಿನವರ ಎಂಬುವವನ...
ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ. ರವಿವಾರ ದಿ.29 ರಂದು ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿರೋ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದಾರೆ. ಮೊಬೈಲ್, ಪರ್ಸ್ ಏನು ಅಂದ್ರೆ ಏನೂ ತೆಗೆದುಕೊಂಡು ಹೋಗಿಲ್ಲ. ಹೀಗಾಗಿ, ಕುಟುಂಬದವರು ಆತಂಕಗೊಂಡಿದ್ದಾರೆ. ಸಿಸಿಟಿವಿಯಲ್ಲಿ..! ಅಸಲು, ಆನಂದ್ ಕಡಗಿ ರವಿವಾರ ಬೆಳಿಗ್ಗೆ ಮಕ್ಕಳನ್ನು ಸಲೂನ್ ಶಾಪ್ ಗೆ ಕರೆದುಕೊಂಡು ಹೋಗಿ ಬಂದಿದ್ದರು. ತಾವೂ ಕೂಡ ಕಟ್ಟಿಂಗ್...
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!
ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ...
ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ. ಪಟ್ಟಣದ ಕಿಲ್ಲೆ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 45 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಸಿರಾಜ್ ಮುಲ್ಲಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪಿಎಸ್ಐ ಮತ್ತವರ ತಂಡ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದೆ. ನಂತರದಲ್ಲಿ ಮುಂಡಗೋಡ ತಹಶೀಲ್ದಾರ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ...
“ಮುಂಡಗೋಡ ಮಹಾರಾಜ್” ಸ್ಪರ್ಧಾ ಹೋರಿ ಅಸ್ತಂಗತವಾಗಿ ಒಂದು ವರ್ಷ, ಅಭಿಮಾನಿಗಳಿಂದ ವಾರ್ಷಿಕ ಪುಣ್ಯತಿಥಿ..!
ಮುಂಡಗೋಡ: ತಾಲೂಕಿನ ಮೊಟ್ಟ ಮೊದಲ ಪೀಪಿ ಹೋರಿ ಅಂತ ಹೆಸರು ಮಾಡಿದ್ದ, ಮುಂಡಗೋಡಿನ ಮನೆ ಮಗ ಅಂತಲೇ ಕರೆಸಿಕೊಂಡಿದ್ದ “ಮುಂಡಗೋಡ ಮಹಾರಾಜ್” 181 ಪಿಪಿ ಸ್ಪರ್ಧಾ ಹೋರಿಯ ಒಂದನೇ ವರ್ಷದ ಪುಣ್ಯತಿಥಿ ಕಾರ್ಯವನ್ನು ಅಭಿಮಾನಿಗಳು ನಡೆಸಿದ್ರು. ಅಸಂಖ್ಯ ಅಭಿಮಾನಿಗಳನ್ನು ಹೊಂದಿದ್ದ ಸ್ಪರ್ಧಾ ಹೋರಿ “ಮುಂಡಗೋಡ ಮಹಾರಾಜ್” ಅನಾರೋಗ್ಯದಿಂದ ಮೃತಪಟ್ಟು ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ, ಅಭಿಮಾನಿಗಳು ತಮ್ಮ ನೆಚ್ಚಿನ ಹೋರಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ರು. ಅಲ್ಲದೇ ಹೋರಿಯ ನೆನಪಿನಲ್ಲಿ ಅನ್ನ ಸಂತರ್ಪಣೆ ಮಾಡಿದ್ರು. ಆರಾಧ್ಯ...
ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ ಆತ್ಮಹತ್ಯೆ, ಕಾರಣವಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೊಪ್ಪದಲ್ಲಿ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಗ್ರಾಮದ ಚನ್ನಪ್ಪ ಬಸಪ್ಪ ಶ್ಯಾಬಾಳ್ (30) ಎಂಬುವವನೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ ಬಾನುವಾರ ಬೆಳಿಗ್ಗೆ ತನ್ನ ಗದ್ದೆಯಲ್ಲೇ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ, ತಕ್ಷಣವೇ ಆತನನ್ನು ತಾಲೂಕಾಸ್ಪತ್ರೆಗ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ ಪಟ್ಟಿದ್ದಾನೆ...









