ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...
Top Stories
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
Category: ಮುಂಡಗೋಡ ಸುದ್ದಿ
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..! ಮುಂಡಗೋ: ತಾಲೂಕಿನಲ್ಲಿ ಪ್ರತಿ ವರ್ಷವೂ ನಡೆಯುವ ಜಾತ್ರೆಗಳಲ್ಲಿ ಹಲವು ಪ್ರಕಾರದ ವಸ್ತುಗಳ ವ್ಯಾಪಾರ ಮಾಡಿ ಬದುಕು ನಡೆಸೊ ಸುಡುಗಾಡು ಸಿದ್ದರು, ಹಾಗೂ ವಿವಿದ ಜನಾಂಗದ ಬಡ ವ್ಯಾಪಾರಿಗಳಿಗೆ ಕೊರೋನಾ ಸಂಕಷ್ಟ ತಂದೊಡ್ಡಿದೆ. ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಜಾತ್ರೆಗಳು ಬಂದ್ ಆಗಿರೋ ಕಾರಣಕ್ಕೆ ಈ ಬಡ ವ್ಯಾಪಾರಿಗಳಿಗೆ ವ್ಯಾಪಾರ ಇಲ್ಲದೇ ಬದುಕೇ ದುಸ್ತರವಾಗಿದೆ. ಹೀಗಾಗಿ ಸರ್ಕಾರ ಇಂತಹ ಬಡ ಕುಟುಂಬಗಳ ಬಗ್ಗೆ ಗಮನ ಹರಿಸಬೇಕಿದೆ.. ಇಂತವರಿಗಾಗಿ ಏನಾದರೂ ಸಹಾಯ ಹಸ್ತ...
ಸನವಳ್ಳಿ ಅಡಿಕೆ ತೋಟಗಳಿಗೆ ಕಾಡು ಹಂದಿಗಳ ಕಾಟ..!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಅಡಕೆ ಸಸಿಗಳನ್ನು ತಿಂದು ಕಿತ್ತು ಹಾಕುವ ಮೂಲಕ ರೈತರಿಗೆ ಅಪಾರ ಪ್ರಮಾಣದ ಹಾನಿ ಪಡಿಸುತ್ತಿರುವುದು ಕಂಡು ಬಂದಿದೆ. ಕಳೆದ ಹದಿನೈದು ದಿನಗಳಿಂದ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಹೆಚ್ಚಾಗಿ ಸಂಚರಿಸುತ್ತಿದ್ದು ರಾತ್ರಿ ವೇಳೆ ಗದ್ದೆಗಳಿಗೆ ದಾಳಿ ನಡೆಸುವ ಕಾಡು ಹಂದಿಗಳು ಅಡಿಕೆ ಸಸಿಗಳನ್ನು ಕಿತ್ತು ಹಾಕುತ್ತಿವೆ. ಎರಡ್ಮೂರು ರೈತರಿಗೆ ಸೇರಿದ ನೂರಾರು ಅಡಕೆ ಸಸಿಗಳನ್ನು ಕಿತ್ತು ಹಾಕಿವೆ ವರ್ಷವಿಡಿ ಕಷ್ಟಪಟ್ಟು ಬೆಳೆಸಿದ್ದ ಅಡಕೆ ಸಸಿಗಳು ಈಗ ಕಾಡುಹಂದಿಗಳು ನಾಶ ಪಡಿಸುತ್ತಿರುವುದು ರೈತರಿಗೆ...
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹನುಮಾಪುರ ಗ್ರಾ. ಪಂಚಾಯತಿ..!
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ. ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್ ನಲ್ಲಿ...
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.









