Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
5 ಕೋಟಿ ರೂ‌. ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ ಪಡೆದ ಪೊಲೀಸರು‌‌..!

5 ಕೋಟಿ ರೂ‌. ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ ಪಡೆದ ಪೊಲೀಸರು‌‌..!

ಶಿರಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೋಟಿ ಕೋಟಿ ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್( ತಿಮಿಂಗಿಲ ವಾಂತಿ) ವಶಕ್ಕೆ ಪಡೆದಿದ್ದಾರೆ‌. ಜೊತೆಗೆ ಇಬ್ಬರನ್ನು ಬಂದಿಸಿದ್ದಾರೆ. ಬೆಳಗಾವಿಯಿಂದ ತಂದು ಶಿರಸಿಯಲ್ಲಿ ಮಾರಾಟಕ್ಕೆ ಯತ್ನ ಮಾಡುತ್ತಿದ್ದ, ಪ್ರಮುಖ ಆರೋಪಿ ಬೆಳಗಾವಿಯ ಸಂತೋಷ್ ಕಾಮತ್ ಮತ್ತು ಶಿರಸಿಯ ರಾಜೇಶ್ ಪೂಜಾರಿಯನ್ನು ತಡರಾತ್ರಿ ಬಂಧಿಸಲಾಗಿದೆ‌. ಬಂಧಿತರಿಂದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ 5 ಕೆಜಿ, ನಿಷೇಧಿತ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ ) ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಇದು ಉತ್ತರ...

Post
ಅಗಡಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ..!

ಅಗಡಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಗರ್ಭಿಣಿಯೋರ್ವಳು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, 108 ಅಂಬ್ಯಲೆನ್ಸ್ ಗೆ ಕರೆ ಮಾಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ 108 ಸಿಬ್ಬಂದಿಗಳು, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮನೆಯ ಹತ್ತಿರ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಹೆಣ್ಣು ಮಗುವಿಗೆ ಜನ್ಮನೀಡಿರೋ ಗೀತಾ ಪ್ರಭು ನಾಯಕ ಎಂಬ ಮಹಿಳೆ ಆರೋಗ್ಯವಾಗಿದ್ದಾರೆ‌. ಹೆರಿಗೆಯ ನಂತರ ಸೂಕ್ತ ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರು ಹಾಗೂ ಚಾಲಕ...

Post
ಹಾನಗಲ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ; ಸಚಿವ ಹೆಬ್ಬಾರ್ ವಿಶ್ವಾಸದ ನುಡಿ..!

ಹಾನಗಲ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ; ಸಚಿವ ಹೆಬ್ಬಾರ್ ವಿಶ್ವಾಸದ ನುಡಿ..!

ಶಿರಸಿ: ಹಾನಗಲ್ ನಲ್ಲಿ ನೂರಕ್ಕೆ ನೂರರಷ್ಟು ವಿಜಯ ನಮ್ಮದೇ ಅಂತಾ ಸಚಿವ ಹಾಗೂ ಹಾನಗಲ್ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತ ಪಡಿಸಿದ್ರು. ಶಿರಸಿಯಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ಹಲವಾರು ಜನ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ, ತಾವೇ ಗೆದ್ದು ಬಿಡ್ತೀವಿ ಅಂತ ಮಾತನಾಡುತ್ತಿದ್ದಾರೆ, ಆದ್ರೆ, 25 ಸಾವಿರದಷ್ಟು ದೊಡ್ಡ ಅಂತರದಲ್ಲಿ ಹಾನಗಲ್ ನಲ್ಲಿ ಬಿಜೆಪಿ ಜಯ ಸಾಧಿಸಲಿದೆ ಅಂತಾ ವಿಶ್ವಾಸದ ನುಡಿ ಹೇಳಿದ್ರು. ಹಾನಗಲ್ ಹಾಗೂ ಸಿಂದಗಿ ಸೇರಿ ಎರಡೂ ಕ್ಷೇತ್ರಗಳಲ್ಲಿ ನಾವು ಜಯ...

Post
ಹಾನಗಲ್ ಉಪ ಕದನದಲ್ಲಿ ಮುಂಡಗೋಡ ಬಿಜೆಪಿಗರ ಪ್ರಚಾರ ಭರಾಟೆ..!

ಹಾನಗಲ್ ಉಪ ಕದನದಲ್ಲಿ ಮುಂಡಗೋಡ ಬಿಜೆಪಿಗರ ಪ್ರಚಾರ ಭರಾಟೆ..!

ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ. ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಮುಂಡಗೋಡ ಬಿಜೆಪಿಯ...

Post
ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಣ್ಣನ ಆಕ್ರೋಶ..! ಕಂಪನಿ ಮಾಲೀಕಗೆ ಪತ್ರ ಬರೆದ ಹಿಂದು ಹುಲಿ..!!

ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಣ್ಣನ ಆಕ್ರೋಶ..! ಕಂಪನಿ ಮಾಲೀಕಗೆ ಪತ್ರ ಬರೆದ ಹಿಂದು ಹುಲಿ..!!

ಶಿರಸಿ: ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಾಹೀರಾತು ಪ್ರಶ್ನಿಸಿ ಸಿಎಟ್ ಟೈಯರ್ ಕಂಪನಿ ಮಾಲೀಕ ಅನಂತ ವರಧನ್ ಗೆ ಪತ್ರ ಬರೆದಿದ್ದಾರೆ. ಸಿಎಟ್ ಜಾಹೀರಾತಿನಲ್ಲಿ ಹಿಂದುಗಳ ಆಚರಣೆಗಳನ್ನು ನಟ ಅಮೀರ್ ಖಾನ್ ಹೀಯಾಳಿಸಿರುವ ಕುರಿತು ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಜಾಹಿರಾತಿನಲ್ಲಿ ಹಿಂದುಗಳ ಭಾವನೆಯನ್ನು ತುಳಿಯುವ ಕ್ಷುಲ್ಲಕ ಕುತಂತ್ರ ಎಂದು ಆರೋಪಿಸಿರುವ ಅನಂತಕುಮಾರ್ ಹೆಗಡೆ, ಆಮೀರ್ ಖಾನ್ ನಟಿಸಿರುವ ಜಾಹಿರಾತಿನಲ್ಲಿ ಹಿಂದುಗಳು ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ ಆದರೆ, ಅಮೀರ್...

Post
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಕಿಮ್ಸ್ ಗೆ ದಾಖಲು..!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಕಿಮ್ಸ್ ಗೆ ದಾಖಲು..!

ಮುಂಡಗೋಡ: ವಿಷ ಸೇವಿಸಿದ ಮಹಿಳೆಯೋರ್ವಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಕೋಡಂಬಿಯಲ್ಲಿ ನಡೆದಿದೆ. ಪ್ರೇಮಾ ಕೃಷ್ಣಪ್ಪ ಕೊರಗರ್ ಎಂಬುವ ಗೃಹಿಣಿಯೇ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವಳಾಗಿದ್ದಾಳೆ‌‌. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಮುಂಡಗೋಡಿನ 108 ಅಂಬ್ಯುಲೆನ್ಸ್ ಸಿಬ್ಬಂದಿ, ತಾಲ್ಲೂಕು ಆಸ್ಪತ್ರೆ ಮುಂಡಗೋಡಿಂದ ಹುಬ್ಬಳ್ಳಿ ಕಿಮ್ಸ್ ಗೆ,108 ಅಂಬ್ಯುಲೆನ್ಸ್ ಮುಖಾಂತರ ದಾಖಲಿಸಿದ್ದಾರೆ. 108 ಅಂಬ್ಯುಲೆನ್ಸ್ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಸಿ. ಬಳೂರು, ಚಾಲಕ ಕೆಂಚೇಶ್ ಇ. ಎನ್ ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ...

Post
ಮಾಜಿ ಗ್ರಾಪಂ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ವಿಧಿವಶ, ಗ್ರಾಮಸ್ಥರ ಕಂಬನಿ..!

ಮಾಜಿ ಗ್ರಾಪಂ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ವಿಧಿವಶ, ಗ್ರಾಮಸ್ಥರ ಕಂಬನಿ..!

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಮಾಜಿ ಗ್ರಾಮ ಪಂಚಾಯತ ಸದಸ್ಯ ಮರಿಯಪ್ಪ ಮೇತ್ರಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ. ಮಂಗಳವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವ್ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ರೈತರ ಬೋರವೆಲ್ ರಿಪೇರಿ ಮಾಡುತ್ತಿದ್ದ ಮರಿಯಪ್ಪ ಮೇತ್ರಿ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Post
ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನವರಾತ್ರಿ ಸಂಭ್ರಮ, ಆಂಜನೇಯ ಸ್ವಾಮಿಗೆ ಹೋಮ, ಹವನ..!

ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನವರಾತ್ರಿ ಸಂಭ್ರಮ, ಆಂಜನೇಯ ಸ್ವಾಮಿಗೆ ಹೋಮ, ಹವನ..!

ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತು ನವರಾತ್ರಿಯ ಸಂಭ್ರಮದಲ್ಲಿ, ಮಂತ್ರ ಘೋಷಗಳ ಸದ್ದು ರಿಂಗಣಿಸಿದೆ. ನವರಾತ್ರಿಯ ವಿಶೇಷ ಸಂದರ್ಭದಲ್ಲಿ, ಅದ್ರಲ್ಲೂ ಶನಿವಾರದ ದಿನ ಇಲ್ಲಿನ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಹೋಮ, ಹವನ ನಡೆಸಲಾಗಿದೆ. ನೂತನವಾಗಿ ಅಧಿಕಾರ ವಹಿಸಿಕೊಂಡಿರೋ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು ಸೇರಿದಂತೆ ಠಾಣೆಯ ಎಲ್ಲಾ ಸಿಬ್ಬಂದಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ರು.    

Post
ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!

ಮುಂಡಗೋಡ ತಾಲೂಕಿನಲ್ಲಿ ಎಲ್ಲೆಂದರಲ್ಲಿ ಮಟ್ಕಾ ದಂಧೆ..! “ಕ್ರಮ ಕೈಗೊಳ್ಳಿ ಸಾಹೇಬ್ರೇ” ಅಂತಾ ಎಸ್ಪಿಗೆ ದೂರು..!!

ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಮನೆ ಮಾತಾಗಿದೆ. ಹಳ್ಳಿ, ಹಳ್ಳಿಗಳಲ್ಲಿ ಹೆಜ್ಜೆಗೊಬ್ರು ಮಟ್ಕಾ ಬುಕ್ಕಿಗಳು ತಲೆ ಎತ್ತಿದ್ದಾರೆ, ಆದ್ರೆ ಇದನ್ನೇಲ್ಲ ಕಂಟ್ರೋಲ್ ಮಾಡಬೇಕಿದ್ದ ಪೊಲೀಸರು ಮಾತ್ರ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ.. ಹಾಗಂತ, ನಾವು ಹೇಳ್ತಿಲ್ಲ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಂಡಗೋಡಿನ ಯುವ ಪಡೆ ಲಿಖಿತವಾಗಿ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಿದೆ. ಯಸ್, ಮುಂಡಗೋಡ ಭಜರಂಗದಳದ ಕಾರ್ಯಕರ್ತ ಮಂಜುನಾಥ್ ಪವಾರ್ ಇಂತಹದ್ದೊಂದು ದೂರನ್ನು ಎಸ್ಪಿ ಸಾಹೇಬ್ರಿಗೆ ಸಲ್ಲಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಅನ್ನೋದು ಬಡ ಜನರ ಜೀವ...

Post
ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!

ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!

ಮುಂಡಗೋಡ: ತಾಲೂಕಿನ ಚೌಡಳ್ಳಿಯ ಹಲವು ಯುವಕರು ಸಿಡಿದು ನಿಂತಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ, ಮಹಿಳಾ ಸದಸ್ಯರುಗಳ ಪತಿ, ಅಥವಾ ಸಂಬಂಧಿಕರೇ ದರ್ಬಾರು ನಡೆಸ್ತಿದಾರೆ ಅಂತಾ ಆರೋಪಿಸಿ ದೂರು ನೀಡಿದ್ದಾರೆ. ಯಸ್, ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಪಂಚಾಯತ್ ಸದಸ್ಯರ ಪರವಾಗಿ, ಅವರ ಸಂಬಂಧಿಕರು ಹಾಗೂ ಮಹಿಳಾ ಸದಸ್ಯರ ಪತಿ, ಹೀಗೆ ಕುಟುಂಬಸ್ಥರು ಪಂಚಾಯತ್ ಕೆಲಸಕಾರ್ಯಗಳಲ್ಲಿ ತಾವು ಅವರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದ್ದು, ಇದನ್ನ ಖಂಡಿಸಿ ಗ್ರಾಮದ ವಿದ್ಯಾಧರ್ ಶಿವಾಜಿ...

error: Content is protected !!