ಮುಂಡಗೋಡ: ತಾಲೂಕಿನ ಅರಣ್ಯ ಲೂಟಿ ಆಗ್ತಿದೆ. ಔಷಧಿ ಸಸ್ಯಗಳೂ ಸೇರಿ ಇಲ್ಲಿನ ಅರಣ್ಯದಲ್ಲಿ ಹೇರಳವಾಗಿರೋ ಅರಣ್ಯ ಸಂಪತ್ತು ಕಳ್ಳರ ಪಾಲಾಗ್ತಿದೆ. ಹೀಗಿದ್ರೂ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಜಾಣ ಕುರುಡು ತೋರಿಸ್ತಿದಾರೆ ಅಂತಾ ಆರೋಪಿಸಿ, ಮುಂಡಗೋಡ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಪರಿಸರ ಪ್ರೇಮಿಯೊಬ್ರು ಏಕಾಂಗಿಯಾಗಿ ಧರಣಿಗೆ ಕುಳಿತಿರೋ ಅಪರೂಪದ ಘಟನೆ ನಡೆದಿದೆ. ಕರ್ನಾಟಕ ವೈಲ್ಡ್ ಲೈಫ್ ಗ್ರೂಪ್ ನ ಅಧ್ಯಕ್ಷ ಶಂಶುದ್ಧೀನ್ ಮಾರ್ಕರ್ ಎನ್ನುವವರೇ ಏಕಾಂಗಿಯಾಗಿ ಮುಂಡಗೋಡ ವಲಯ ಅರಣ್ಯಾಧಿಕಾರಿಗಳ ಕಛೇರಿ ಎದುರು ಧರಣಿ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
ದ್ವಿತೀಯ PUC ಪರೀಕ್ಷೆ ರದ್ದಾಗಿದ್ದಕ್ಕೆ ಈ ವಿದ್ಯಾರ್ಥಿನಿಯದ್ದು ಎಂಥ ದುರಂತ ನೋಡಿ..!
ಶಿರಸಿ: ಸಾಮಾನ್ಯವಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅದ್ರಲ್ಲೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಈಗಿನ ಉದ್ಯೋಗ ಕ್ಷೇತ್ರದಲ್ಲಿ ಬೇಸ್ ಅಂತಾನೆ ಪರಿಗಣಿಸಲ್ಪಟ್ಟಿದೆ. ಹಲವಾರು ವಿದ್ಯಾರ್ಥಿಗಳು ಪರೀಕ್ಷೆ ರದ್ದಾದ ಖುಷಿಯಲ್ಲಿರುತ್ತಾರೆ. ಆದ್ರೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗೆ ಅಂತಾನೆ ಊಟ, ನಿದ್ದೆ ಬಿಟ್ಟು ಓದೋ ಉದಾಹರಣೆಗಳು ಕೂಡ ಇವೆ. ಅದ್ರಲ್ಲೂ ಈ ಕೋವಿಡ್ ಅನ್ನೋದು ಬಂದಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅಧೋಗತಿಯಾಗಿದೆ. ಸರ್ಕಾರಗಳೂ ಕೂಡ ಪದೇ ಪದೇ ನಿರ್ಣಯಗಳನ್ನ ಬದಲಿಸುತ್ತಿರೋದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ...
ನಾಳೆಯಿಂದ ಪರಿಷ್ಕೃತ ಲಾಕ್ ಡೌನ್ ಜಾರಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏನಿರತ್ತೆ..? ಏನಿರಲ್ಲ..? ಇಲ್ಲಿದೆ ಸಂಪೂರ್ಣ ಡೀಟೇಲ್ಸ್..!
ಕಾರವಾರ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಪರಿಷ್ಕ್ರತ ಆದೇಶದನ್ವಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಗಸೂಚಿ ಬಿಡುಗಡೆಯಾಗಿದೆ. ನಾಳೆ ಸೋಮವಾರದಿಂದ ಜೂನ್ 21 ರವರೆಗೆ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಆಹಾರ, ದಿನಸಿ, ಹಣ್ಣುಗಳು...
ಮೂಕಪ್ರಾಣಿಗಳ ಮೂಕರೋಧನೆಗೆ ಮಿಡಿದ ಮನಗಳು: ಬಿಡಾಡಿ ದನಗಳಿಗೆ, ಶ್ವಾನಗಳಿಗೆ ಆಹಾರ..!
ಮುಂಡಗೋಡ: ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮೂಕ ಪ್ರಾಣಿಗಳೂ ಕೂಡ ಇನ್ನಿಲ್ಲದಂತೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಕೋ ಎನ್ನುತ್ತಿರೋ ಪಟ್ಟಣದ ಬೀದಿಗಳಲ್ಲಿ ಕರೆದು ಆಹಾರ ನೀಡುವವರಿಲ್ಲದೇ ಬಿಡಾಡಿ ದನಗಳು ಹಸಿವಿನಿಂದ ನರಳುತ್ತಿವೆ. ಶ್ವಾನಗಳು ತುತ್ತು ಕೂಳಿಗಾಗಿ ಅಲೆದಾಡುತ್ತಿವೆ. ಹೀಗಾಗಿ ಇದನ್ನೇಲ್ಲ ನೋಡಿದ ಕೆಲ ಯುವಕರ ಟೀಂ ಮುಂಡಗೋಡದಲ್ಲಿ ಮೂಕ ಪ್ರಾಣಿಗಳ ಹಸಿವು ನೀಗಿಸುವ ಕಾರ್ಯ ಮಾಡುತ್ತಿದ್ದಾರೆ. ನಿಮಗೆ ನೆನಪಿರಲಿ, ಈಗ್ಗೆ ಕೆಲವೇ ದಿನಗಳ ಹಿಂದೆ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಮೂಕಪ್ರಣಿಗಳ ಮೂಕ ರೋಧನದ ಬಗ್ಗೆ ವರದಿ...
ನ್ಯಾಸರ್ಗಿಯಲ್ಲಿ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರ ವಿರುದ್ಧ ಕೇಸ್..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ಮಾಡಿ 4 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೈಲಾರಿ ಮಹದೇವಪ್ಪ ಸಾಗರ, ಮಂಜುನಾಥ್ ಹನ್ಮಂತಪ್ಪ ಉಪಾದ್ಯಾಯ, ಬಸವಂತಪ್ಪ ಲಕ್ಷ್ಮಣ ಮಡ್ಡಿ ಹಾಗೂ ಮಂಜುನಾಥ ನಾಗಪ್ಪ ಧರ್ಮೋಜಿ ಎಂಬುವ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ದಾಳಿ ವೇಳೆ 2,200 ರೂ.ನಗದು ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಭಾರಿ ಮಳೆಯಿಂದ ಶೇಂಗಾ ಬೆಳೆ ಮಣ್ಣುಪಾಲು; ಮನನೊಂದ ರೈತ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಕಾಡಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇವೇಂದ್ರಪ್ಪ ಈರಪ್ಪ ತೆಗ್ಗಳ್ಳಿ(60) ಎಂಬುವ ರೈತನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. 4 ಎಕರೆ ಜಮೀನು ಹೊಂದಿರೋ ರೈತ ಈ ವರ್ಷ 1ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿ ಶೇಂಗಾ ಬೆಳೆದಿದ್ದ. ಆದ್ರೆ ಇತ್ತಿಚೆಗೆ ಸುರಿದ ಭಾರೀ ಮಳೆಯಿಂದ ಬೆಳೆದಿದ್ದ ಶೇಂಗಾ ಎಲ್ಲಾ ಹಾಳಾಗಿತ್ತು. ಹೀಗಾಗಿವಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆ ಕೈಕೊಟ್ಟ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ...
ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?
ನಿಜ, ಮಮ್ಮಲ ಮರುಗುತ್ತಿದೆ ಇಡೀ ಮುಂಡಗೋಡ..! ಹಾಗೇ ಒಮ್ಮೆ ಕಲ್ಪಿಸಿಕೊಳ್ಳಿ, ಆ ಕಂದಮ್ಮ ಸಾವು ಬದುಕಿನ ಮದ್ಯೆ ಹೋರಾಡುತ್ತ, ಹುಬ್ಬಳ್ಳಿಯ ಕಿಮ್ಸ್ ICU ಬೆಡ್ಡಿನ ಮೇಲೆ ನರಳಿತ್ತಿರೋ ಸಂದರ್ಭ, ಆ ಹೆತ್ತ ಕರುಳುಗಳು ಪಟ್ಟಿರೋ ಸಂಕಟ ಎಷ್ಟಿರಬಹುದು ಅಲ್ವಾ..? ಇದೇಲ್ಲ ಸಾಕ್ಷಿ ಕೇಳುವವರಿಗೆ ಯಾಕೆ ಅರ್ಥವಾಗ್ತಿಲ್ಲ..? ಇದು, ಮುಂಡಗೋಡ ತಾಲೂಕಿನ ಜನರ ಮಿಲಿಯನ್ ಡಾಲರ್ ಪ್ರಶ್ನೆ. ಸಾಕ್ಷಿ ಬೇಕಂತೆ..? ಎಲ್ಲಿಂದ ನಗಬೇಕೋ ಅರ್ಥವೇ ಅಗುತ್ತಿಲ್ಲ ಕಣ್ರಿ, ಆ ಮುಗ್ದ ಕಂದಮ್ಮನ ಸಾವಿಗೆ ಕಾರಣನಾದ ವೈದ್ಯನ ವಿರುದ್ಧ ಕ್ರಮ...
ಪೆಟ್ರೊಲ್ ಬೆಲೆ ಏರಿಕೆಗೆ ಖಂಡನೆ: ಮುಂಡಗೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!
ಮುಂಡಗೋಡ: ಕೇಂದ್ರ ಸರ್ಕಾರ ಪದೇ ಪದೇ ತೈಲ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಶೀಘ್ರವೇ ಪೆಟ್ರೊಲ್ ದರ ಕಡಿಮೆ ಮಾಡುವಂತೆ ಆಗ್ರಹಿಸಿದ್ರು. ಈ ಸಂದರ್ಭದಲ್ಲಿ ಮುಂಡಗೋಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯಕ್ ಮುಂಡಗೋಡ ಉಸ್ತುವಾರಿಗಳಾದ ಸುರೇಶ್ ಸವಣೂರು, ಎಂ ಎನ್...
ಅಗಲಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ, ಕಳೆದ ವರ್ಷ ಬನವಾಸಿಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಿದ್ದ ಕ್ಷಣ ಇನ್ನೂ ಅಚ್ಚ ಹಸಿರು..!
ಶಿರಸಿ: ಇಂದು ನಾಡಿನ ಹಿರಿಯ ಸಾಹಿತಿ, ದಲಿತ ಕವಿ, ಡಾ. ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಹಿರಿಯ ಕವಿಯ ನಿಧನಕ್ಕೆ ನಾಡಿನೆಲ್ಲೆಡೆ ಸಂತಾಪ ವ್ಯಕ್ತವಾಗಿದೆ. ಅಂದಹಾಗೆ, ದಲಿತ ಕವಿ ಸಿದ್ದಲಿಂಗಯ್ಯನವರಿಗೆ ಕಳೆದ ವರ್ಷವಷ್ಟೇ ಶಿರಸಿಯ ಬನವಾಸಿ ಕದಂಬೋತ್ಸವದಲ್ಲಿ ಪಂಪ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಳೆದ ವರ್ಷ ಫೆಬ್ರವರಿ 8, 2020ರಲ್ಲಿ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದ್ದ ಕದಂಬೋತ್ಸವದಲ್ಲಿ ಡಾ.ಸಿದ್ದಲಿಂಗಯ್ಯ ಪಂಪ ಪ್ರಶಸ್ತಿ ಸ್ವೀಕರಿಸಿದ್ದರು. ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಾಹಿತಿ ಇಂದು ಅಗಲಿದ್ದು ಬನವಾಸಿಯಲ್ಲಿ...
ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ









