Home ಉತ್ತರ ಕನ್ನಡ

Category: ಉತ್ತರ ಕನ್ನಡ

Post

ಸಂಕಷ್ಟದಲ್ಲಿರೊ 21 ಬಡ ಕುಟುಂಬಗಳಿಗೆ ಧನಸಹಾಯ ಮಾಡಿದ ಟಿಬೇಟಿಯನ್ ಲಾಮಾ..!

ಮುಂಡಗೋಡ-ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಕುಟುಂಬಗಳಿಗೆ ಟಿಬೇಟಿಯನ್ ಸಕ್ಯಾ ಪಾರ್ಟಿಯ ಬೌದ್ದ ಸನ್ಯಾಸಿ ಒಬ್ಬರು ಸಹಾಯ ಮಾಡಿದ್ದಾರೆ. ಸಂಕಷ್ಟದಲ್ಲಿದ್ದ 21 ಬಡ ಕುಟುಂಬಗಳಿಗೆ ತಲಾ 500 ರೂಪಾಯಿ ಹಣ ಸಹಾಯ ಮಾಡಿದ್ದು , ಹಣವನ್ನು ಇಂದು ಗ್ರಾಮ ಪಂಚಾಯತಿ ಸದಸ್ಯರು ವಿತರಿಸಿದ್ರು. ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು..

Post

ಯಲ್ಲಾಪುರ: ಬಾವಿಗೆ ಹಾರಿದ ಮಾನಸಿಕ ಅಸ್ವಸ್ಥೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ..!

ಯಲ್ಲಾಪುರ: ಬಾವಿಗೆ ಬಿದ್ದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ ಘಟನೆ ಯಲ್ಲಾಪುರ ಪಟ್ಟಣದ ಉದ್ಯಮನಗರದಲ್ಲಿ ನಡೆದಿದೆ. ಸುನಂದ ಪಟಗಾರ್(34) ಅನ್ನೋ ಮಹಿಳೆಯೇ ರಕ್ಷಣೆಗೊಳಗಾದವಳಾಗಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಹೊರಬಂದ ಮಹಿಳೆ ಏಕಾ ಏಕಿ ಸಾರ್ವಜನಿಕ ಬಾವಿಗೆ ಹಾರಿದ್ದಾಳೆ. ಈ ಸಂದರ್ಭದಲ್ಲಿ ಅದೃಷ್ಟವಶಾತ್ ಬಾವಿಯಲ್ಲಿ ಆಳವಿಲ್ಲದೇ ಇದ್ದಿದ್ದರಿಂದ ಆಕೆ ಬದುಕುಳಿದಿದ್ದು ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಬಾವಿಯಲ್ಲೇ ಚೀರಾಡಿದ್ದಾಳೆ. ಈ ವೇಳೆ ಮನೆಯಲ್ಲಿ ಈಕೆ ಇರದುದ್ದನ್ನು ಗಮನಿಸಿ ಹೊರಬಂದು ನೋಡಿದಾಗ, ಈಕೆ ಚೀರಾಡುವ ಧ್ವನಿ...

Post
ಮುಂಡಗೋಡ: ತಾಲೂಕಿನಲ್ಲಿಂದು19 ಪಾಸಿಟಿವ್ ದೃಢ, 57 ಗುಣಮುಖ, ಒಂದು ಸಾವು..!

ಮುಂಡಗೋಡ: ತಾಲೂಕಿನಲ್ಲಿಂದು19 ಪಾಸಿಟಿವ್ ದೃಢ, 57 ಗುಣಮುಖ, ಒಂದು ಸಾವು..!

ಮುಂಡಗೋಡ-ತಾಲೂಕಿನಲ್ಲಿ ಇಂದು 19 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 57 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 291 ಸಕ್ರೀಯ ಪ್ರಕರಣಗಳಿದ್ದು, 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 204 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 25 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ಪಟ್ಟಣದ ಗಾಂಧಿನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 65 ಕ್ಕೆ...

Post

ಕಾರವಾರ ಜಿಪಂ ಅಭಿಲೇಖಾಲಯ ಕಛೇರಿಯಲ್ಲಿ ಬೆಂಕಿ ಅವಘಡ: 3 ಅಂತಸ್ತಿನ ಕಟ್ಟಡಕ್ಕೆ ವ್ಯಾಪಿಸಿದ ಬೆಂಕಿ..!

ಕಾರವಾರ: ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಜಿಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿಗಳು ನಿರತರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಹೊತ್ತಿಕೊಂಡಿರೋ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಕಚೇರಿಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಡಿಸಿ ಮುಲೈ ಮುಹಿಲನ್, ಸಿಇಒ ಪ್ರಿಯಾಂಗ ಭೇಟಿ ನೀಡಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Post
ಸನವಳ್ಳಿಯಲ್ಲಿ ಹಲವು ಮನೆಯೊಳಗೆ ಹೊಕ್ಕ‌ ಮಳೆ ನೀರು: ರಾತ್ರಿಯಿಡೀ ಪರದಾಟ..!

ಸನವಳ್ಳಿಯಲ್ಲಿ ಹಲವು ಮನೆಯೊಳಗೆ ಹೊಕ್ಕ‌ ಮಳೆ ನೀರು: ರಾತ್ರಿಯಿಡೀ ಪರದಾಟ..!

ಮುಂಡಗೋಡ-ತಾಲೂಕಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿತ್ತು. ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಮಳೆಯ ಕಾರಣಕ್ಕೆ ಕೆಲವು ಗ್ರಾಮಸ್ಥರು ರಾತ್ರಿಯಿಡಿ ನಿದ್ದೆಗೆಡುವಂತಾಯಿತು. ಸನವಳ್ಳಿ ಗ್ರಾಮದಲ್ಲಿ ವ್ಯವಸ್ಥಿತವಾದ ಗಟಾರಗಳು ಇಲ್ಲದ ಕಾರಣ, ಗ್ರಾಮದ ಹಲವು ಮನೆಗಳಿಗೆ ಮಳೆಯ ನೀರು ಒಳಗೆ ನುಗ್ಗಿತ್ತು. ಹೀಗಾಗಿ, ಮನೆ ಮಂದಿಯೆಲ್ಲ ಮಳೆ ನೀರು ಹೊರಹಾಕಲು ಹರಸಾಹಸ ಪಡಬೇಕಾಯ್ತು. ಪುಟ್ಟ ಪುಟ್ಟ ಮಕ್ಕಳು ಸೇರಿದಂತೆ ಮನೆಯ ಮಂದಿಯೆಲ್ಲ ಮಳೆ ನೀರು ಹೊರ ಹಾಕುವಲ್ಲಿ ನಿರತರಾಗಿದ್ರು. ಇನ್ನು ಮಳೆ ನೀರು ಮನೆಯ ಒಳಗೆ ಹೊಕ್ಕ...

Post
ಹುಲಿಹೊಂಡ ಗ್ರಾಮದಲ್ಲಿ ಮರಕ್ಕೆ ಬಡಿದ ಸಿಡಿಲು: ಮರದ ಕೆಳಗೆ ನಿಂತಿದ್ದ 9 ಜನರಿಗೆ ಗಾಯ..!

ಹುಲಿಹೊಂಡ ಗ್ರಾಮದಲ್ಲಿ ಮರಕ್ಕೆ ಬಡಿದ ಸಿಡಿಲು: ಮರದ ಕೆಳಗೆ ನಿಂತಿದ್ದ 9 ಜನರಿಗೆ ಗಾಯ..!

ಮುಂಡಗೋಡ- ತಾಲೂಕಿನಲ್ಲಿ ಮಳೆಯ ಅವಾಂತರಗಳು ಶುರುವಾಗಿದೆ. ಶುಕ್ರವಾರ ತಾಲೂಕಿನ ಹುಲಿಹೊಂಡ ಗ್ರಾಮದ ಗದ್ದೆಯಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ಪರಿಣಾಮ, ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದ 9 ಜನರಿಗೆ ಸಿಡಿಲಿನ ಶಾಖ ತಟ್ಟಿ ಚಿಕ್ಕ ಪುಟ್ಟ ಗಾಯವಾದ ಘಟನೆ ನಡೆದಿದೆ. ಹುಲಿಹೊಂಡ ಗ್ರಾಮದ ರಾಮಪ್ಪ ಬಸಪ್ಪ ಕಬ್ಬೇರ್ ಎಂಬುವವರು ತಮ್ಮ ಜಮೀನಿನಲ್ಲಿ ನಿನ್ನೆ ಶುಕ್ರವಾರ ಗೋವಿನ ಜೋಳ ಬೀಜ ಬಿತ್ತನೆ ಮಾಡುತ್ತಿದ್ದರು. ಈ ವೇಳೆ ಮಳೆ ಬಂದ ಕಾರಣ ಮಳೆಯ ಹನಿಯಿಂದ ತಪ್ಪಿಸಿಕೊಳ್ಳಲು ಬೀಜ ಬಿತ್ತನೆಯಲ್ಲಿ ತೊಡಗಿದ್ದ...

Post
VRDM ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸೆಪ್ಟಿ ಕಿಟ್ ವಿತರಣೆ..!

VRDM ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸೆಪ್ಟಿ ಕಿಟ್ ವಿತರಣೆ..!

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದೇಶಪಾಂಡೆ ರೂಡ್ ಸೆಟಿ ವತಿಯಿಂದ ಇಂದು ಮೆಡಿಕಲ್ ಸೆಪ್ಟಿ ಕಿಟ್ ವಿತರಿಸಲಾಯಿತು. ತಾಲೂಕಿನ ಹುನಗುಂದ ಗ್ರಾಮದ ವಿರಕ್ತ ಮಠದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ಉದ್ಘಾಟಿಸಿ ಮಾತನಾಡಿದ್ರು. ಹುನಗುಂದ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಕುನ್ನೂರ್, ಉಪಾಧ್ಯಕ್ಷ ತುಕಾರಾಮ್ ಹೊನ್ನಳ್ಳಿ, ಕಾಂಗ್ರೆಸ್ ಯುವ ಮುಖಂಡ ಧರ್ಮರಾಜ್ ನಡಗೇರಿ, ಗ್ರಾಪಂ ಸದಸ್ಯರಾದ ಈಶ್ವರಗೌಡ ಅರಳಿಹೊಂಡ ಸೇರಿ ದೇಶಪಾಂಡೆ ರೂಡಸೆಟಿಯ ಸಂಚಾಲಕರು ಉಪಸ್ತಿತರಿದ್ದರು.

Post
ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!

ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!

ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ದೇಹಳ್ಳಿ, ಆನಗೋಡ ಹಾಗೂ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳ, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ,ಗ್ರಾಮಗಳಲ್ಲಿ ಕೊರೊನಾ ಸೋಂಕನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಸ್ಥರನ್ನು ಭೇಟಿಯಾಗಿ ಕೋವಿಡ್ 19 ಸೋಂಕಿನ ಕುರಿತು ಜಾಗೃತಿ ಮೂಡಿಸಿ,ಕೋವಿಡ್ ನ...

Post
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!

ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!

ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.

Post
12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!

12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!

ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು. ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.