ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಕಾಡಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇವೇಂದ್ರಪ್ಪ ಈರಪ್ಪ ತೆಗ್ಗಳ್ಳಿ(60) ಎಂಬುವ ರೈತನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. 4 ಎಕರೆ ಜಮೀನು ಹೊಂದಿರೋ ರೈತ ಈ ವರ್ಷ 1ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿ ಶೇಂಗಾ ಬೆಳೆದಿದ್ದ. ಆದ್ರೆ ಇತ್ತಿಚೆಗೆ ಸುರಿದ ಭಾರೀ ಮಳೆಯಿಂದ ಬೆಳೆದಿದ್ದ ಶೇಂಗಾ ಎಲ್ಲಾ ಹಾಳಾಗಿತ್ತು. ಹೀಗಾಗಿವಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆ ಕೈಕೊಟ್ಟ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?
ನಿಜ, ಮಮ್ಮಲ ಮರುಗುತ್ತಿದೆ ಇಡೀ ಮುಂಡಗೋಡ..! ಹಾಗೇ ಒಮ್ಮೆ ಕಲ್ಪಿಸಿಕೊಳ್ಳಿ, ಆ ಕಂದಮ್ಮ ಸಾವು ಬದುಕಿನ ಮದ್ಯೆ ಹೋರಾಡುತ್ತ, ಹುಬ್ಬಳ್ಳಿಯ ಕಿಮ್ಸ್ ICU ಬೆಡ್ಡಿನ ಮೇಲೆ ನರಳಿತ್ತಿರೋ ಸಂದರ್ಭ, ಆ ಹೆತ್ತ ಕರುಳುಗಳು ಪಟ್ಟಿರೋ ಸಂಕಟ ಎಷ್ಟಿರಬಹುದು ಅಲ್ವಾ..? ಇದೇಲ್ಲ ಸಾಕ್ಷಿ ಕೇಳುವವರಿಗೆ ಯಾಕೆ ಅರ್ಥವಾಗ್ತಿಲ್ಲ..? ಇದು, ಮುಂಡಗೋಡ ತಾಲೂಕಿನ ಜನರ ಮಿಲಿಯನ್ ಡಾಲರ್ ಪ್ರಶ್ನೆ. ಸಾಕ್ಷಿ ಬೇಕಂತೆ..? ಎಲ್ಲಿಂದ ನಗಬೇಕೋ ಅರ್ಥವೇ ಅಗುತ್ತಿಲ್ಲ ಕಣ್ರಿ, ಆ ಮುಗ್ದ ಕಂದಮ್ಮನ ಸಾವಿಗೆ ಕಾರಣನಾದ ವೈದ್ಯನ ವಿರುದ್ಧ ಕ್ರಮ...
ಪೆಟ್ರೊಲ್ ಬೆಲೆ ಏರಿಕೆಗೆ ಖಂಡನೆ: ಮುಂಡಗೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!
ಮುಂಡಗೋಡ: ಕೇಂದ್ರ ಸರ್ಕಾರ ಪದೇ ಪದೇ ತೈಲ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಶೀಘ್ರವೇ ಪೆಟ್ರೊಲ್ ದರ ಕಡಿಮೆ ಮಾಡುವಂತೆ ಆಗ್ರಹಿಸಿದ್ರು. ಈ ಸಂದರ್ಭದಲ್ಲಿ ಮುಂಡಗೋಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯಕ್ ಮುಂಡಗೋಡ ಉಸ್ತುವಾರಿಗಳಾದ ಸುರೇಶ್ ಸವಣೂರು, ಎಂ ಎನ್...
ಅಗಲಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ, ಕಳೆದ ವರ್ಷ ಬನವಾಸಿಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಿದ್ದ ಕ್ಷಣ ಇನ್ನೂ ಅಚ್ಚ ಹಸಿರು..!
ಶಿರಸಿ: ಇಂದು ನಾಡಿನ ಹಿರಿಯ ಸಾಹಿತಿ, ದಲಿತ ಕವಿ, ಡಾ. ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಹಿರಿಯ ಕವಿಯ ನಿಧನಕ್ಕೆ ನಾಡಿನೆಲ್ಲೆಡೆ ಸಂತಾಪ ವ್ಯಕ್ತವಾಗಿದೆ. ಅಂದಹಾಗೆ, ದಲಿತ ಕವಿ ಸಿದ್ದಲಿಂಗಯ್ಯನವರಿಗೆ ಕಳೆದ ವರ್ಷವಷ್ಟೇ ಶಿರಸಿಯ ಬನವಾಸಿ ಕದಂಬೋತ್ಸವದಲ್ಲಿ ಪಂಪ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಳೆದ ವರ್ಷ ಫೆಬ್ರವರಿ 8, 2020ರಲ್ಲಿ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದ್ದ ಕದಂಬೋತ್ಸವದಲ್ಲಿ ಡಾ.ಸಿದ್ದಲಿಂಗಯ್ಯ ಪಂಪ ಪ್ರಶಸ್ತಿ ಸ್ವೀಕರಿಸಿದ್ದರು. ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಾಹಿತಿ ಇಂದು ಅಗಲಿದ್ದು ಬನವಾಸಿಯಲ್ಲಿ...
ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ
ಮುಂಡಗೋಡ ತಾಲೂಕಿನಲ್ಲಿ ಶನಿವಾರ ಕರೆಂಟು ಇರಲ್ಲ..! ಎಲ್ಲೇಲ್ಲಿ..?
ಮುಂಡಗೋಡ: ಪಟ್ಟಣದಲ್ಲಿ ಹಾಗೂ ಟಿಬೇಟಿಯನ್ ಕಾಲೋನಿಗಳಲ್ಲಿ ನಾಳೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಹೆಸ್ಕಾಂ ಮುಂಡಗೋಡ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಮುಂಡಗೋಡ ಉಪವಿಭಾಗದ 110/11 ಕೆ.ವಿ.ವಿದ್ಯುತ್ ಕೇಂದ್ರದಿಂದ ಮುಂಡಗೋಡ ಪಟ್ಟಣ ಹಾಗೂ ಟಿಬೇಟಿಯನ್ ಕಾಲೋನಿಗಳಿಗೆ ಹೊರಡುವ 11 ಕೆ.ವಿ.ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರೋ ಕಾರಣ, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!
ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.
ಬ್ರಾಹ್ಮಣರ ವಿರುದ್ಧ ನಟ ಚೇತನ್ ಹೇಳಿಕೆ: ಸಚಿವ ಶಿವರಾಮ್ ಹೆಬ್ಬಾರ್ ಖಂಡನೆ..!
ಯಲ್ಲಾಪುರ: ಕನ್ನಡ ಚಿತ್ರ ನಟ ಚೇತನ್, ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ತೀವ್ರ ಖಂಡನಾರ್ಹ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಸಚಿವ್ರು, ಚೇತನ್ ಹೇಳಿಕೆ ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್...
ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..! ಯಾರು ಹೊಣೆ..???
ಮುಂಡಗೋಡ: ನಿನ್ನೆ ರಾತ್ರಿಯಷ್ಟೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ತಾಲೂಕಿನ ಬಾಲಕಿಯೊಬ್ಬಳ ಸಾವು ಬದುಕಿನ ಮದ್ಯೆ ಹೋರಾಡ್ತಿರೋ ಘಟನೆಯ ಸಂಪೂರ್ಣ ಸುದ್ದಿ ನಿಮ್ಮ ಮುಂದಿಟ್ಟಿತ್ತು. ಬಹುಶಃ ತಾವೇಲ್ಲರೂ ಆ ಪುಟ್ಟ ಕಂದಮ್ಮ ಬದುಕಿ ಬರಲಿ ಅಂತಾ ಅದೇಷ್ಟು ಪ್ರಾರ್ಥಿಸಿದ್ದಿರೋ ಗೊತ್ತಿಲ್ಲ. ಆದ್ರೆ ಆ ಎಲ್ಲ ಹಾರೈಕೆಗಳು ಫಲಿಸಲೇ ಇಲ್ಲ. ಹುಬ್ಬಳ್ಳಿಯ ಕಿಮ್ಸ್ ನ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಕಂದಮ್ಮ ಬದುಕಿ ಬರಲೇ ಇಲ್ಲ. ನಿನ್ನೆ ತಡರಾತ್ರಿ ಕಂದಮ್ಮನ ಪ್ರಾಣ ಪಕ್ಷಿ ಹಾರಿಹೋಗಿದೆ. ಕುಟುಂಬಸ್ಥರ ಆಕ್ರಂಧನ...
ಮುಂಡಗೋಡಿನಲ್ಲಿ ಸರ್ಕಾರಿ ವೈದ್ಯನ ಖಾಸಗಿ ದರ್ಬಾರ್..? ಆಗಿರೋ ಅವಾಂತರಕ್ಕೆ ಹೊಣೆ ಯಾರು..?
ಮುಂಡಗೋಡ: ವೈದ್ಯ ನಾರಾಯಣೋ ಹರಿಃ ಅಂತಾರೆ, ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ತಮ್ಮ ಜೀವ ಪಣಕ್ಕಿಟ್ಟು ಹಗಲು ರಾತ್ರಿ ಎನ್ನದೇ ಸೋಂಕಿತರ ಸೇವೆಯಲ್ಲಿ ಬಹುತೇಕ ವೈದ್ಯರುಗಳು ನಿರತರಾಗಿದ್ದಾರೆ. ಇನ್ನು ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಹಾಗೂ ಮತ್ತವರ ತಂಡ, ತಾಲೂಕಿನಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಇನ್ನಿಲ್ಲದ ಪರಿಶ್ರಮ ಪಟ್ಟಿದ್ದಾರೆ, ಪಡುತ್ತಿದ್ದಾರೆ.. ಮಹಾಮಾರಿಯನ್ನು ಕಟ್ಟಿ ಹಾಕುವಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಆ ಕಾರಣಕ್ಕಾಗಿ ಪಬ್ಲಿಕ್ ಫಸ್ಟ್ ನ್ಯೂಸ್ ಟೀಂ ವತಿಯಿಂದ ತಾಲೂಕಿನ ವೈದ್ಯ ದೇವರುಗಳಿಗೆ...








