ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಗಾಟಿಸಿದ್ರು.. ಇಂದೂರು ಗ್ರಾಮದ ಶ್ರೀ ಗುರು ಗೋವಿಂದ ಸಂತ ಶಿಶುನಾಳ ಶರೀಫರ ಮಠದ ಆವರಣದಲ್ಲಿ ಆಯೋಜನೆಗೊಂಡಿರೋ ಸಮ್ಮೇಳನದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಸಹದೇವಪ್ಪ ನಡಗೇರ್ ಅವರನ್ನು ಸಚಿವರು ಸನ್ಮಾನಿಸಿ ಅಭಿನಂದಿಸಿದರು ಹಾಗೂ ಸಮ್ಮೇಳನಾಧ್ಯಕ್ಷರ ಹಿತ ನುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಮ್ಮೇಳನದಲ್ಲಿ, ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಜಿಲ್ಲಾಪಂಚಾಯತ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಚುಸಾಪ ಜಿಲ್ಲಾಧ್ಯಕ್ಷ ಜೆ.ಯು.ನಾಯಕ, ತಾಲೂಕಾ ಘಟಕದ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಉತ್ತರ ಕನ್ನಡ
ಫೆ. 1 ರಿಂದ ಸವದತ್ತಿ ಯಲ್ಲಮ್ಮದೇವಸ್ಥಾನ ಓಪನ್- 11ತಿಂಗಳ ನಂತ್ರ ಮತ್ತೆ ಏಳುಕೊಳ್ಳದಲ್ಲಿ ಮೊಳಗಲಿದೆ ಉದೋ..ಉದೋ..
ನಿತ್ಯವೂ ಪ್ರತಿಧ್ವನಿಸುತ್ತಿದ್ದ ಉದೋ.. ಉದೋ..ಯಲ್ಲಮ್ಮ.. ನಾಮಸ್ಮರಣೆ ಕೇಳಿ ಬರೋಬ್ಬರಿ 11ತಿಂಗಳೇ ಗತಿಸಿದೆ..ರಾಜ್ಯ ಹೊರ ರಾಜ್ಯಗಳ ಲಕ್ಷಾಂತರ ಭಕ್ತರಿಗೆ ಸವದತ್ತಿಯ ಯಲ್ಲಮ್ಮದೇವಿಯ ದರ್ಶನವೇ ಸಿಗದೇ ನಿತ್ಯವೂ ಚಡಪಡಿಸುತ್ತಿದ್ದಾರೆ..ಯಾವಾಗ ದೇವಿ ದರ್ಶನ ಸಿಗುತ್ತೆ ಅಂತ ಭಕ್ತರು ತುದಿಗಾಲ ಮೇಲೆ ನಿಂತು ಕಾಯುತ್ತಿದ್ದರು.. ಕೊನೆಗೂ ಭಕ್ತರ ನಿರೀಕ್ಷೆ ಕೈಗೂಡಿದೆ. ಇದೇ ಫೆಬ್ರವರಿ 1ರಿಂದ ಪ್ರಸಿದ್ಧ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನ ಭಕ್ತರಿಗೆ ತೆರೆದುಕೊಳ್ಳುತ್ತಿದೆ. ಇದಕ್ಕಾಗಿ ದೇವಸ್ಥಾನದ ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸವದತ್ತಿ ಯಲ್ಲಮ್ಮ..ಕರ್ನಾಟಕ- ಮಹಾರಾಷ್ಟ್ರ, ತಮಿಳುನಾಡಿನ ಕೋಟ್ಯಾಂತರ ಭಕ್ತರ ಆರಾದ್ಯ ದೇವತೆ..ವರ್ಷದ 9ತಿಂಗಳು...
ಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ
ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..
ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಅಪಘಾತದಲ್ಲಿ ದುರ್ಮರಣ- ಸಚಿವ ಹೆಬ್ಬಾರ್ ಸಂತಾಪ
ಯಲ್ಲಾಪುರ- ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯ್ಕ್ ಅವರ ಧರ್ಮಪತ್ನಿ ವಿಜಯಾ ಶ್ರೀಪಾದ ನಾಯ್ಕ್ ರವರ ದುರ್ಮರಣಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.. ಇಂದು ಮುಂಜಾನೆ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂತಾ ಹೆಬ್ಬಾರ್ ತಮ್ಮ ಸಂತಾಪ ಸೂಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ...
ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಪತ್ನಿ ವಿಜಯಾ ಹಾಗೂ ಆಪ್ತ ಕಾರ್ಯದರ್ಶಿ ದುರ್ಮರಣ
ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ.. ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..
ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಸಚಿವರೂ ಸೇರಿ ನಾಲ್ವರಿಗೆ ಗಾಯ
ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದೆ.. ಕೇಂದ್ರ ಆಯುಷ್ ಇಲಾಖೆ ಸಚಿವರಾಗಿರೋ ಶ್ರೀಪಾದ್ ನಾಯಕ್, ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ..ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿಗೆ ಗಂಭೀರ ಗಾಯವಾಗಿರೋ ಮಾಹಿತಿ ಕೆನರಾ ನ್ಯೂಸ್ ಹಂಟ್ ಗೆ ಲಭ್ಯವಾಗಿದೆ.. ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆಮಾಡಲಾಗಿದೆ..ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಹುನಗುಂದ ಕೈ ಕಾರ್ಯಕರ್ತರನ್ನ ಭೇಟಿ ಮಾಡಿದ ಮಾಜಿ ಸಚಿವ ಸಂತೋಷ ಲಾಡ್
ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು.. ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.. ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು.. ಈ...
ಹುನಗುಂದ ಗ್ರಾಮಕ್ಕೆ ಜಿಪಂ ಸಿಇಓ ಪ್ರಿಯಾಂಗಾ ಭೇಟಿ; ನರೇಗಾ ಕಾಮಗಾರಿಗಳ ವೀಕ್ಷಣೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮಕ್ಕೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ. ಭೇಟಿ ನೀಡಿದ್ರು.. ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ ಸಿಇಓ ಹುನಗುಂದದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಪೌಷ್ಟಿಕ ತೋಟ ಉದ್ಘಾಟಿಸಿದ್ರು.. ಇದಕ್ಕೂ ಮೊದಲು ಅಗಡಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಿಇಓ ಪ್ರಿಯಾಂಗಾ ರವರು ಅಂಗನವಾಡಿಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ್ರು.. ಈ ವೇಳೆ ತಾಲೂಕಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸೇರಿ ಹಲವರು ಸಾಥ್ ನೀಡಿದ್ರು..
2019-20 ರಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ; 7.72 ಕೋಟಿ ರೂ. ಲಾಭ- ಸಚಿವ ಹೆಬ್ಬಾರ್
ಶಿರಸಿ : 2019 – 20 ಸಾಲಿನಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದ್ದು ಈ ಬಾರಿ ಬ್ಯಾಂಕ್ ಒಟ್ಟು 7.72 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಅಂತಾ ಕಾರ್ಮಿಕ ಹಾಗು ಸಕ್ಕರೆ ಖಾತೆ ಸಚಿವ ಬ್ಯಾಂಕ್ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ತಿಳಿಸಿದ್ರು.. ಅವರು ಇಂದು ಕೆ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ 2019 – 20 ಸಾಲಿನ ಬ್ಯಾಂಕ್ ನ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿ ಸಂಕ್ಷಿಪ್ತ ವರದಿಯನ್ನು ನೀಡಿ ಮಾತನಾಡುತ್ತಿದ್ದರು.. ಬ್ಯಾಂಕು ಪ್ರಾಥಮಿಕ ಕೃಷಿ...
ಮುಂಡಗೋಡ ಪೊಲೀಸರ ಮಿಂಚಿನ ಕಾರ್ಯ; ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಟೊ ಹಾಕಿದ್ದವ ಅಂದರ್
ಮುಂಡಗೋಡ- ತಾಲೂಕಿನ ಯುವತಿಯೋರ್ವಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಬರೆದು, ಅಶ್ಲೀಲ ವಿಡಿಯೋ, ಪೋಟೋಗಳನ್ನು ಹರಿಬಿಟ್ಟ ಬೆಂಗಳೂರಿನ ಯುವಕನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.. ದಿನಾಂಕ 14-12-2020 ರಂದು ಮುಂಡಗೋಡ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದ ಯುವತಿಯೋರ್ವಳು, ಯಾರೋ ಒಬ್ಬ ವ್ಯಕ್ತಿ ತನ್ನ ಬಗ್ಗೆ ಅಶ್ಲೀಲ ವಿಡಿಯೋ ಹಾಗೂ ಪೋಟೊಗಳನ್ನು ಫೇಸ್ ಬುಕ್, ವಾಟ್ಸ್ ಅಪ್, ಇನ್ ಸ್ಟ್ರಾಗ್ರಾಂ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.. ಇದ್ರಿಂದ ನನಗೆ ಹಾಗೂ ನನ್ನ ಕುಟುಂಬದ ತೇಜೋವಧೆಯಾಗುತ್ತಿದೆ.. ಹೀಗಾಗಿ, ಕ್ರಮ ಕೈಗೊಳ್ಳಿ ಅಂತಾ ದೂರಿನಲ್ಲಿ...