Heavy rains forecast; ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. , ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
KDCC ELECTION; ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ KDCC ಬ್ಯಾಂಕ್ ಚುನಾವಣೆಯಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಟೀಂ ಗೆ ನಿರಾಸೆಯಾಗಿದೆ. ಶಾಸಕ ಹಾಗೂ ಹಾಲಿ KDCC ಅಧ್ಯಕ್ಷ ಶಿವರಾಮ್ ಹೆಬ್ಬಾರರ ಬಣ ಸಧ್ಯಕ್ಕೆ ಸ್ಪಷ್ಟ ಮುನ್ನಡೆ ಸಾಧಿಸಿದಂತಾಗಿದೆ. ಅಂದಹಾಗೆ, ಕೆಡಿಸಿಸಿ ಬ್ಯಾಂಕ್ನ ನಿರ್ದೇಶಕ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ನಡೆದ ಸ್ಪರ್ಧೆಯಲ್ಲಿ, ಈವರೆಗೆ ಏಳು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಉಳಿದ ಕ್ಷೇತ್ರಗಳ ಮತ ಎಣಿಕೆ ಕುರಿತ ವಿಚಾರ ಕೋರ್ಟಿನಲ್ಲಿದೆ....
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
 Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Accident News; ಮುಂಡಗೋಡ ತಾಲೂಕಿನ ಸನವಳ್ಳಿ ಪ್ಲಾಟ್ ಹತ್ತಿರ ಕಾರ್ ಹಾಗೂ ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಯಾರು ಅನ್ನೋದು ಇನ್ನೂ ಗುರುತು ಸಿಕ್ಕಿಲ್ಲ. ಸದ್ಯ ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ್ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾದಂತಾಗಿದೆ. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ ಸೇರಿದ್ದ ನೂತನ ಸದಸ್ಯರ ಸಭೆಯಲ್ಲಿ, ಅಧ್ಯಕ್ಷರನ್ನಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರನ್ನಾಗಿ ಬಾಬಣ್ಣ ಲಾಡನವರ್ ರನ್ನು ಅವಿರೋಧವಾಗಿ ಆಯ್ಕೆ...
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
Valmiki Jayanti News: ಮುಂಡಗೋಡ:ಮಹಾಪುರುಷರ ಜಯಂತಿಗಳನ್ನು ಎಲ್ಲಾ ಸಮುದಾಯದವರು ಸೇರಿ ಒಟ್ಟಾಗಿ ಆಚರಣೆ ಮಾಡಬೇಕು ಬಹುತೇಕ ಎಲ್ಲ ಸಮುದಾಯದ ಜನಾಂಗಗಳಲ್ಲಿ ಮಹಾತ್ಮರು ಹುಟ್ಟಿ ಸಮಾಜ ಸುಧಾರಣೆಗಾಗಿ ತಮ್ಮ ಜೀವನ ಮುಡಿಪಾಗಿ ಇಟ್ಟಿದ್ದಾರೆ ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ ಹೇಳಿದರು. ಪಟ್ಟಣದ ಟೌನ್ ಹಾಲ್ ನಲ್ಲಿ ಮಂಗಳವಾರ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಜೀವನದಲ್ಲಿ ಸಾಧನೆ ಮುಖ್ಯ. ಅನೇಕ ಮಹಾಪುರುಷರು ಬಡತನದಲ್ಲಿ ಹುಟ್ಟಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಾಧನೆ ಮಾಡಿದ್ದಾರೆ....
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
 Boycott Anganwadi; ಸ್ಥಳೀಯರನ್ನು ಬಿಟ್ಟು ಬೇರೆ ಗ್ರಾಮದವರನ್ನು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ನೇಮಕ ಮಾಡಿರೋ ಕಾರಣಕ್ಕೆ, ಮುಂಡಗೋಡ ತಾಲೂಕಿನ ನಂದಿಪುರ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳಿಸದೇ ಬಹಿಷ್ಕರಿಸಿದ್ದಾರೆ. ಹೀಗಾಗಿ, ಕಳೆದ ನಾಲ್ಕೈದು ದಿನಗಳಿಂದ ನಂದಿಪುರದ ಅಂಗನವಾಡಿ ಕೇಂದ್ರ ಮಕ್ಕಳಿಲ್ಲದೇ ಇಂದು ಬೀಕೋ ಎನ್ನುತ್ತಿತ್ತು. ಅಂದಹಾಗೆ, ನಂದಿಪುರದ ಅಂಗನವಾಡಿಯಲ್ಲಿ ಕಾರ್ಯಕರ್ತೆಯ ಹುದ್ದೆ ಖಾಲಿಯಾಗಿತ್ತು. ಹೀಗಾಗಿ, ನೂತನವಾಗಿ ಕಾರ್ಯಕರ್ತೆಯ ಆಯ್ಕೆ ನಡೆದಿದೆ. ಈ ವೇಳೆ ಗ್ರಾಮದಿಂದ ಸುಮಾರು ಆರು ಕೀಮಿ ದೂರವಿರೋ ಮಹಿಳೆಯೊಬ್ಬರಿಗೆ ಅಂಗನವಾಡಿ ಕಾರ್ಯಕರ್ತೆಯ...
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









