Death News: ಮುಂಡಗೋಡಿನ ಹಿರಿಯ ಕಾಷ್ಟ ಕಲಾವಿದ, ರಥಶಿಲ್ಪಿ ವಿರೂಪಾಕ್ಷಪ್ಪ ಶಿವಪ್ಪ ಬಡಿಗೇರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವ್ರು ಗುರುವಾರ ನಿಧನರಾಗಿದ್ದು, ವಿಶ್ವಕರ್ಮ ಸಮುದಾಯದ ಮುಖಂಡರು ಕಂಬನಿ ಮಿಡಿದಿದ್ದಾರೆ. ಮೃತ ವಿರೂಪಾಕ್ಷಪ್ಪ ಬಡಿಗೇರ್ ಪಟ್ಟಣದ ಗ್ರಾಮದೇವಿ ದೇವಸ್ಥಾನದ ರಥವನ್ನು ನಿರ್ಮಿಸಿದ್ದರು. ಅಲ್ಲದೇ ಕಟ್ಟಿಗೆಯಲ್ಲಿ ಸೂಕ್ಷ್ಮ ಕುಸೂರಿ ಕೆತ್ತನೆಯಲ್ಲಿ ಪರಿಣಿತಿ ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಇಂದು ಶುಕ್ರವಾರ ನಡೆಯಲಿದೆ ಅಂತಾ ಮೃತರ ಪುತ್ರ ಚಿದಾನಂದ ವಿರೂಪಾಕ್ಷಪ್ಪ ಬಡಿಗೇರ ತಿಳಿಸಿದ್ದಾರೆ.
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
Death News: ಮುಂಡಗೋಡ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ರಾಮಣ್ಣ ಕುನ್ನೂರ್(69) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಮಣ್ಣ ಕುನ್ನೂರ್ ರನ್ನು ನಿನ್ನೆ ಬುಧವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ.
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ.
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
Students Protest; ಮುಂಡಗೋಡ ತಾಲೂಕಿನ ಪಾಳಾದಲ್ಲಿ ಸಮರ್ಪಕ ಬಸ್ ಕಲ್ಪಿಸುವಂತೆ ಆಗ್ರಹಿಸಿ, ಶಾಲಾ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ, ಶಿರಸಿ-ಹುಬ್ಬಳ್ಳಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹತ್ತಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಳಿಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಗ್ರಾಮಸ್ಥರು, ಪೋಷಕರು ವಿದ್ಯಾರ್ಥಿಗಳ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರಲೇ ಬೇಕು ಅಂತಾ ಹಠ ಹಿಡಿದು ಪ್ರತಿಭಟನೆ ಮುಂದುವರೆಸಿದ್ರು. ಅಸಲು, ಮುಂಡಗೋಡ ತಾಲೂಕಿನ ಹಲವು ಹಳ್ಳಿಗಳಿಗೆ...
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
Accident News; ಮುಂಡಗೋಡ ಹುಬ್ಬಳ್ಳಿ ರಸ್ತೆಯ, ವಡಗಟ್ಟಾ ಸಮೀಪದ ತಡಸ ತಾಯವ್ವನ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರಿಗೆ ಗಾಯವಾಗಿರೋ ಘಟನೆ ನಡೆದಿದೆ. ಇನ್ನಷ್ಟು ಮಾಹಿತಿ ಬರಬೇಕಿದೆ.. ಅಪಡೇಟ್ ಮಾಡಲಾಗುವುದು.
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
Heavy rains forecast; ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. , ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ...
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
KDCC ELECTION; ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ KDCC ಬ್ಯಾಂಕ್ ಚುನಾವಣೆಯಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಟೀಂ ಗೆ ನಿರಾಸೆಯಾಗಿದೆ. ಶಾಸಕ ಹಾಗೂ ಹಾಲಿ KDCC ಅಧ್ಯಕ್ಷ ಶಿವರಾಮ್ ಹೆಬ್ಬಾರರ ಬಣ ಸಧ್ಯಕ್ಕೆ ಸ್ಪಷ್ಟ ಮುನ್ನಡೆ ಸಾಧಿಸಿದಂತಾಗಿದೆ. ಅಂದಹಾಗೆ, ಕೆಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ನಡೆದ ಸ್ಪರ್ಧೆಯಲ್ಲಿ, ಈವರೆಗೆ ಏಳು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಉಳಿದ ಕ್ಷೇತ್ರಗಳ ಮತ ಎಣಿಕೆ ಕುರಿತ ವಿಚಾರ ಕೋರ್ಟಿನಲ್ಲಿದೆ....
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Accident News; ಮುಂಡಗೋಡ ತಾಲೂಕಿನ ಸನವಳ್ಳಿ ಪ್ಲಾಟ್ ಹತ್ತಿರ ಕಾರ್ ಹಾಗೂ ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಯಾರು ಅನ್ನೋದು ಇನ್ನೂ ಗುರುತು ಸಿಕ್ಕಿಲ್ಲ. ಸದ್ಯ ಗಾಯಗೊಂಡವರನ್ನು ಮುಂಡಗೋಡ ತಾಲೂಕಾಸ್ಪತ್ರೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









