Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!

ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!

ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತದ ಕಳಕಿಕಾರೆ ಮಜಿರೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಬಹುತೇಕ‌ ಇಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಸಂಕಟ ಒಂದೆಡೆಯಾದ್ರೆ, ಗ್ರಾಮಸ್ಥರಿಗೆ ನೀರು ಪೂರೈಸಲು ಮೈನಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಪರದಾಡುವ ಸ್ಥಿತಿಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಅಂದಹಾಗೆ, ಮೈನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಕೀಕಾರೆಯಲ್ಲಿ RWS ಇಲಾಖೆಯಿಂದ ಬೋರ್ವೆಲ್ ಕೊರೆದಿದ್ದಾರೆ. ಆದ್ರೆ, ಜೀವಜಲ ಮಾತ್ರ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿನ ಜನ್ರಿಗೆ ಕುಡಿಯುವ...

Post
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ

ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ

ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಆಃಖಿ) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ .ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಅದರಂತೆ ಫೆಬ್ರವರಿ-2025...

Post
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್

ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್

ಕಾರವಾರ: ಕಾರವಾರ ಅಂಕೋಲಾ ವಿಭಾಗದಲ್ಲಿ ಈ ವರ್ಷ ಇದುವರೆಗೆ 2500 ಕ್ಕೂ ಅಧಿಕ ಆಲಿವ್ ರಿಡ್ಲೆ ಕಡಲಾಮೆಗಳನ್ನು ಸಮುದ್ರಕ್ಕೆ ಬಿಡಲಾಗಿದ್ದು, 111 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ. ಕಳೆದ ವರ್ಷ 188 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್ ತಿಳಿಸಿದರು. ಅವರು ಶುಕ್ರವಾರ ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ಸಮಾರು 150 ಆಲಿವ್ ರಿಡ್ಲೆ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಎರಡು...

Post
SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!

SSLC ಪರೀಕ್ಷೆಗಳು ವ್ಯವಸ್ಥಿತ ಮತ್ತು ಪಾರದರ್ಶಕವಾಗಿರಲಿ, ಪೂರ್ವಭಾವಿ ಸಭೆಯಲ್ಲಿ ಡೀಸಿ ಲಕ್ಷ್ಮಿಪ್ರಿಯ ಅಧಿಕಾರಿಗಳಿಗೆ ತಾಕೀತು..!

ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತ ಮತ್ತು ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ನು ಕಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ದತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯಲ್ಲಿ 20035 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಯಾವುದೇ ವಿದ್ಯಾರ್ಥಿಗಳು...

Post
ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಹುನಗುಂದದಲ್ಲಿ ರೇಣುಕಾಚಾರ್ಯರ ಜಯಂತಿ ಉತ್ಸವ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವೀರಶೈವ ಧರ್ಮ ಸಂಸ್ಥಾಪಕ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. 2024-25 ಸಾಲಿನಯುಗಮಾನೋತ್ಸವ ಹಿನ್ನೆಲೆಯಲ್ಲಿ ಹುನಗುಂದ ಗ್ರಾಮದ ಮಂತ್ರವಾಡಿ ಮಠದ ಶ್ರೀ ರೇಣುಕ ಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬ್ಯಾಹಟ್ಟಿಯ ಉಜ್ಜಯಿನಿ ಶಾಖಾ ಹಿರೇಮಠದ ಶ್ರೀ ಷ ಬ್ರ ಮರುಳ ಸಿದ್ಧ ಶಿವಾಚಾರ್ಯ ಮಹಾ ಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುನಗುಂದ ಸರ್ವಧರ್ಮದ ಗುರು ಹಿರಿಯರು, ಜಂಗಮ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

Post
ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಬಂಕಾಪುರ ಬಳಿ ಮುಡಸಾಲಿ ವ್ಯಕ್ತಿಯ ಅನುಮಾನಾಸ್ಪದ ಸಾವು..? ಅಪಘಾತವಾ..? ಕೊಲೆಯಾ..?

ಹಾವೇರಿ ಜಿಲ್ಲೆಯ ಬಂಕಾಪುರ ಬಳಿ ಮುಂಡಗೋಡಿನ ವ್ಯಕ್ತಿ ಭೀಕರ ಸಾವು ಕಂಡಿದ್ದಾನೆ. ತನ್ನದೇ ಬೈಕ್ ಪಕ್ಕದಲ್ಲಿ ಸಾವನ್ನಪ್ಪಿರೋ ವ್ಯಕ್ತಿ ಅನುಮಾನಾಸ್ಪದವಾಗಿ ಹೆಣವಾಗಿದ್ದಾನೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಮಂಜುನಾಥ್ ಜಾಧವ್(45) ಅಲಿಯಾಸ್ ಮಂಜು ಮೂಡಸಾಲಿ ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿ ಅಂತಾ ಅನುಮಾನಿಸಲಾಗಿದೆ. ಅಸಲು, KA 31 E F 3587 ನೋಂದಣಿ ಸಂಖ್ಯೆಯ ಪಲ್ಸರ್ ಬೈಕ್ ನ ಪಕ್ಕದಲ್ಲೇ ರಕ್ತಸಿಕ್ತವಾಗಿ ಬಿದ್ದಿರೋ ವ್ಯಕ್ತಿ, ಮಂಜುನಾಥ್ ಜಾಧವ್ ಅಂತ ಹೇಳಲಾಗ್ತಿದೆ. ಬಂಕಾಪುರ ಪಟ್ಟಣದ ಹೊರವಲಯದ ರಸ್ತೆ ಪಕ್ಕದಲ್ಲಿ ಘಟನೆ ನಡೆದಿದೆ....

Post
ಹುನಗುಂದ ಗ್ರಾಪಂ PDO ಮಂಜುನಾಥ್ ಗೆ  “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು, ಮಂಜುನಾಥ ಅವರಿಗೆ ಫೆಬ್ರವರಿ 2025 ಮಾಹೆಯ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು‌. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ...

Post
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮಾರ್ಚ್ 9 ರಂದು ಬೆಳಿಗ್ಗೆ 6 ಗಂಟೆಗೆ ಕಾರವಾರ ರವೀಂದ್ರನಾಥ ಟಾಗೋರ ಕಡಲ ತೀರದಿಂದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ” Drugs & Cyber Crime free Karnataka & Fitness for All” ಥೀಮ್‌ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟವನ್ನು ಆಯೋಜಿಸಲಾಗಿದೆ. ಪೊಲೀಸ್ ರನ್ -2025 ರ ಮ್ಯಾರಾಥಾನ್ 5K ಓಟದಲ್ಲಿ...

Post
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಸಿದ್ದಾಪುರ : ಮಾಧ್ಯಮ ಕ್ಷೇತ್ರದಲ್ಲಿ ಕಳೆದ‌ ಎರಡು ದಶಕದಿಂದ‌ ಕಾರ್ಯ‌ ನಿರ್ವಹಿಸುತ್ತಿದ್ದ ಶಿವಶಂಕರ್ ಕೋಲಸಿರ್ಸಿ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 44 ವರ್ಷ ವಯಸ್ಸಾಗಿದ್ದು, ಅವರು Tv-9, ನ್ಯೂಸ್ ನಲ್ಲಿ ಕೆಲ‌ ವರ್ಷಗಳ‌ ಕಾಲ ಉತ್ತರಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕನ್ನಡ ಜನಾಂತರಂಗ, ಕನ್ನಡ ಪ್ರಭ, ಕರಾವಳಿ ಮುಂಜಾವು ಸೇರಿದಂತೆ ಅನೇಕ ಮಾಧ್ಯಮದಲ್ಲಿ ಕಾರ್ಯ‌ ನಿರ್ವಹಿಸಿದ್ದರು, ಸದ್ಯ ರಾಜ್ ನ್ಯೂಸ್ ‌ನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಸಹ ವರದಿಗಾರಿಕೆಗೆ ತೆರಳಿದ್ದರು.‌ ಆರೋಗ್ಯದಲ್ಲಿ ಯಾವುದೇ ಏರುಪೇರು...

Post
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ದಿನಾಂಕ:02.03 2025 ರ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಈ ಕೆಳಗೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಮುನ್ನಚ್ಚರಿಕೆ ಪಾಲಿಸಿ..! ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ,...