Mundgod School Holiday: ಮುಂಡಗೋಡ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನಾಳೆ ಮುಂಡಗೋಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ, ಜಿಲ್ಲಾಧಿಕಾರಿಗಳು ಆದೇಶಿಸಿರುವಂತೆ ಜಿಲ್ಲೆಯ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕುಗಳಿಗೆ ನಿನ್ನೆಯಿಂದಲೂ ಮಳೆಯ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿರಲಿಲ್ಲ. ಆದ್ರೆ, ಸಂಜೆ ಜಿಲ್ಲಾಧಿಕಾರಿಗಳು ಮತ್ತೆ ಮುಂಡಗೋಡ ಹೊರತು ಪಡಿಸಿ,...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ, ಅಗಷ್ಟ 19 ರಂದು ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಹಳಿಯಾಳ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ...
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
Yallapur Accident News; ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಸಮೀಪದ ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ನೀಲವ್ವಾ (38), ಗಿರಿಜವ್ವಾ (43) ಹಾಗೂ ಇನ್ನೋರ್ವ ಪುರುಷ ಎಂದು ಗುರುತಿಸಲಾಗಿದ್ದು, ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಅಮ್ಮನಗುಡ್ಡದಿಂದ ಮಂಗಳೂರಿಗೆ ಹೊರಟಿತ್ತು ಎನ್ನಲಾಗಿದೆ. ಹೆದ್ದಾರಿ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿಯಾಗಿದೆ....
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ED Raid; ಕಾರವಾರ -ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಸದಾಶಿವಗಡದಲ್ಲಿರುವ ಮನೆಯ ಮೇಲೆ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ದಾಳಿಯ ಸಮಯದಲ್ಲಿ ಶಾಸಕ ಸತೀಶ್ ಸೈಲ್ ಅವರು ಅಧಿವೇಶನಕ್ಕಾಗಿ ಬೆಂಗಳೂರಿಗೆ ತೆರಳಿದ್ದ ಕಾರಣ ಮನೆಯಲ್ಲಿ ಇರಲಿಲ್ಲ. ಇಡಿ ಅಧಿಕಾರಿಗಳ ತಂಡವು 4-6 ಕಾರುಗಳಲ್ಲಿ ಬಂದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ, ಮತ್ತು ಮನೆಯ ಮುಂಭಾಗದಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು...
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ. ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









