ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಗುರುವಾರ ಅಗಷ್ಟ 1 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!
ನಿರಂತರ ಮಳೆ ಹಿನ್ನೆಲೆಯಲ್ಲಿ, ಮುಂಡಗೋಡ ತಾಲೂಕಿನ ಯರೆಬೈಲು ಬೇಡ್ತಿ ಹಳ್ಳದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡ ತಹಶಿಲ್ದಾರ ಶಂಕರ್ ಗೌಡಿ ಹಾಗೂ ಜಿಪಂ ಇಂಜಿನಿಯರ್ ಪ್ರದೀಪ್ ಭಟ್ಟ ಯರೆಬೈಲಿನ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡ್ರು. ಇನ್ನು, ಸ್ಥಳೀಯರಿಗೆ ಈ ಬಗ್ಗೆ ಸೂಚನೆ ನೀಡಿದ ತಹಶೀಲ್ದಾರರು, ನೀರಿನ ಪ್ರಮಾಣ ಹೆಚ್ಚಾದರೆ ತಾಲೂಕಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದ್ರು. ದನಕರುಗಳನ್ನು ಹಳ್ಳದ ನೀರಲ್ಲಿ ಬಿಡದಂತೆ ಹಾಗೂ ಜನರು ಹಳ್ಳದಲ್ಲಿ ಇಳಿಯದಂತೆ ಸೂಚಿಸಿದ್ರು. ಸ್ಥಳೀಯ ಪಿಡಿಓ ಸೇರಿದಂತೆ...
ಶಿರಸಿ ನಗರ ಠಾಣೆ ASI ಅಶೋಕ್ ರಾಥೋಡ್ ಗೆ ಪದೋನ್ನತಿ, PSI ಆಗಿ ಚಿಕ್ಕಮಗಳೂರಿಗೆ ವರ್ಗಾವಣೆ..!
ಶಿರಸಿ ನಗರ ಠಾಣೆಯ ASI ಆಗಿ ಕಾರ್ಯನಿರ್ವಹಿಸುತ್ತಿದ್ದ, ಅಶೋಕ ರಾಥೋಡ ಇವರು ಪದೋನ್ನತಿಯೊಂದಿಗೆ PSI ಆಗಿ ಚಿಕ್ಕಮಗಳೂರಿನ ಜೈಪುರ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಈ ಮೊದಲು ಅಶೋಕ್ ರಾಥೋಡ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿಯೂ ASI ಆಗಿ ಕಾರ್ಯನಿರ್ವಹಿಸಿದ್ದರು.
ಚಿಗಳ್ಳಿಯ ಸಂಗೂರಮಠರ ಮನೆಗೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಆರೋಗ್ಯ ವಿಚಾರಣೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಗೆ ಇಂದು ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ನೀಡಿದ್ರು. ಹಿರಿಯ ರಾಜಕೀಯ ಧುರೀಣ ಪಿ.ಎಸ್.ಸಂಗೂರ್ ಮಠ್ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಬ್ಬಾರ್, ಸಂಗೂರಮಠರ ಆರೋಗ್ಯ ವಿಚಾರಿಸಿದ್ರು. ಈ ವೇಳೆ ಎಚ್.ಎಂ.ನಾಯ್ಕ್, ಸಿದ್ದಪ್ಪ ಹಡಪದ, ಫಣಿರಾಜ್ ಹದಳಗಿ, ಗುಡ್ಡಪ್ಪ ಕಾತೂರು ಸೇರಿದಂತೆ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು.
ಉತ್ತರ ಕನ್ನಡದ ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ರಾಜ್ಯ ಡಕಾಯಿತರ ಬಂಧನ..!
ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ಟೀಂ ನಿಜಕ್ಕೂ ಅದ್ಭುತ ಕಾರ್ಯ ಮಾಡಿದೆ. ದರೋಡೆಗೆ ಸಂಚು ರೂಪಿಸಿ ಬಸ್ ಹತ್ತಿ ಹೊರಟಿದ್ದ, ಇಬ್ಬರು ಖತರ್ನಾಕ್ ಅಂತರ್ ರಾಜ್ಯ ದರೋಡೆಕೋರರನ್ನ ಹೆಡೆಮುರಿ ಕಟ್ಟಿದ್ದಾರೆ. ಫಿಲ್ಡಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಕ್ರಿಮಿಗಳು ಮಾತ್ರ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಅನಮೋಡ್ ಚೆಕ್ ಪೊಸ್ಟ್..! ಅಂದಹಾಗೆ, ನಿನ್ನೆ ಶನಿವಾರ, ಅಂದ್ರೆ, ಜುಲೈ 27 ರಂದು ರಾಮನಗರದ ಅನಮೋಡ್ ಅಬಕಾರಿ ಚೆಕ್ ಪೊಸ್ಟ್ ನಲ್ಲಿ ಸಿಬ್ಬಂದಿಯವ್ರು ತಪಾಸಣೆ...
ಶಿರೂರು ಗುಡ್ಡ ಕುಸಿತ, ಶೋಧ ಕಾರ್ಯ ಸ್ಥಗಿತವಾಗಿಲ್ಲ, ಆದ್ರೆ ಸದ್ಯ ಕಾರ್ಯಾಚರಣೆ ಮಾಡಲು ಸಾಧ್ಯವಾಗ್ತಿಲ್ಲ- ಮಂಕಾಳು ವೈದ್ಯ
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಪತ್ತೆ ಕಾರ್ಯಾಚರಣೆ ಸದ್ಯ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸ್ಥಗಿತವಾಗಿದೆ ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದ್ರು. ಕಳೆದ 13 ದಿನಗಳಿಂದ ಕಾರ್ಯಾಚರಣೆ ನಡೆದಿದೆ. 8 ಜನರ ಶವ ಪತ್ತೆಯಾಗಿದೆ ಇನ್ನೂ ಮೂವರ ಶವ ಪತ್ತೆಯಾಗಬೇಕಿದೆ. ಆದ್ರೆ ,ಇದು ಅಂದಾಜು ಮಾತ್ರ ಇನ್ನೂ ಎಷ್ಟು ಜನರ ಶವ ಇದೆಯೋ ಗೊತ್ತಿಲ್ಲ. ನಾವು ಪ್ರಾಮಾಣಿಕವಾಗಿ ಕಾರ್ಯಾಚರಣೆ ಮಾಡಿದ್ದಿವಿ, ಇಲ್ಲಿನ ಶಾಸಕರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ನಾನೂ ಕೂಡ ಆರು...
“ಅಣಬೆ ಪಲ್ಯ, ಬಿಸಿ ರೊಟ್ಟಿ ಮಾಡಿ ಇಡ್ರಿ, ಬಂದು ಉಣ್ತಿನಿ” ಅಂತ ಹೇಳಿ ಹೋದ ಹುಡುಗ ಹೆಣವಾಗಿ ಬಿಟ್ಟ..! ಪಾಳಾ ಯುವಕನ ಆತ್ಮಹತ್ಯೆ ಹಿಂದೆ ಹಲವು ಅನುಮಾನ..?
ಮುಂಡಗೋಡ ತಾಲೂಕಿನ ಪಾಳಾದ ಹುಡುಗ ರವಿ ಅಕ್ಕಸಾಲಿ ಸಾವಿನ ಹಿಂದೆ ಅನುಮಾನ ಇದೆಯಾ..? ಹುಡೇಲಕೊಪ್ಪದ ಮಾವಿನ ಗಿಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ರವಿಯ ಸಾವಿನ ಸುತ್ತ ಹತ್ತಾರು ಪ್ರಶ್ನೆಗಳು ಎದ್ದಿವೆ. ವಯಸ್ಸಲ್ಲದ ವಯಸ್ಸಲ್ಲಿ ಆತನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ದರ್ದಾದ್ರೂ ಏನಿತ್ತು ಅನ್ನೋದು ಕೆಲವರ ಪ್ರಶ್ನೆ..! ಅಣಬೆ ತಂದಿದ್ದ..! ಅಸಲು, ನಿನ್ನೆ ಇಡೀ ದಿನವೂ ಲವಲವಿಕೆಯಿಂದಲೇ ಇದ್ದ ರವಿ, ಮದ್ಯಾನ ಮನೆಗೆ ಕಾಡಿನಿಂದ ತಾಜಾ ಮಶರೂಮ್ (ಅಣಬೆ) ತಂದಿದ್ದ. ನಿಮಗೆ ಗೊತ್ತಿರಲಿ, ಉತ್ತರ ಕನ್ನಡದ ಕಾಡಲ್ಲಿ ಈ...
ಶಿರೂರು ಗುಡ್ಡ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
ಅಂಕೋಲಾ : ಶಿರೂರು ಗುಡ್ಡಕುಸಿತವಾಗಿ ಇಂದಿಗೆ 13ದಿನಗಳು ಕಳೆದಿವೆ. ದುರಂತದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ನಿರಂತರ 13 ದಿನಗಳಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 8 ಜನರ ಶವ ಹೊರ ತೆಗೆಯಲಾಗಿದ್ದು, ಇನ್ನುಳಿದ ಮೂವರಿಗಾಗಿ ನಿರಂತರ ಶೋಧ ನಡೆಸಿದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಅಂತಾ ಖುದ್ದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಮಾಹಿತಿ ನೀಡಿದ್ದಾರೆ. ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಲೋಕೇಶ್ ನಾಯ್ಕ ಹಾಗೂ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್‌ಗಾಗಿ ತೀವ್ರ...
ಪಾಳಾ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಯುವಕನ ಶವ, ನೇಣಿಗೆ ಶರಣಾದ ಯುವಕ..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ತಾಲೂಕಿನ ಬದ್ರಾಪುರದ ರವಿ ಮಾರುತಿ ಅಕ್ಕಸಾಲಿ(25) ಎಂಬುವವನೇ ನೇಣಿಗೆ ಶರಣಾದ ಯುವಕನಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.









