ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ನಡೆದ ದಲಿತ ವ್ಯಕ್ತಿಯ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಕರಣ ಸಂಬಂಧ ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮೃತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಅಲ್ದೆ, ಪರಿಹಾರದ ಚೆಕ್ ವಿತರಿಸಿದ್ರು. ಅಮಾನುಷ ಘಟನೆ..! ಕಳೆದ ಸೆ. 17 ರಂದು ನಡೆದಿದ್ದ ಜಗಳದಲ್ಲಿ ನ್ಯಾಸರ್ಗಿಯ ದಲಿತ ವ್ಯಕ್ತಿ ಮಂಜುನಾಥ್ ಬೋವಿ ವಡ್ಡರ ಮೇಲೆ ಅದೇ ಗ್ರಾಮದ ಮತ್ತೋರ್ವ ವ್ಯಕ್ತಿ ಕುರುಬರ್ ಮಾರಣಾಂತಿಕ ಹಲ್ಲೆ ಮಾಡಿದ್ದ, ಹೀಗಾಗಿ, ತೀವ್ರ ಗಾಯಗೊಂಡಿದ್ದ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!
ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ನಂ 1 ರ ಟಿಬೇಟಿಗರ ಮನೆಯೊಂದರಲ್ಲಿ 2019 ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಅಪರಾಧಿಗಳಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮುಂಡಗೋಡಿನ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೋಳಂಕಿ ಮತ್ತು ಮಧುಸಿಂಗ್ ಗಂಗಾರಾಮಸಿಂಗ್ ರಜಪೂತ ಎಂಬುವವರಿಗೆ ಶಿಕ್ಷೆಯಾಗಿದೆ. 2019...
ಮುಂಡಗೋಡ ಶಿಂಗನಳ್ಳಿ ಡ್ಯಾಂ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ನೇಣು ಬಿಗಿದ ಸ್ಥಿತಿಯಲ್ಲಿರೋ ಶವದ ಸುತ್ತ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಶಿಂಗನಳ್ಳಿ ಜಲಾಶಯದ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ, ಕೊಳೆತು ದುರ್ನಾತ ಬೀರುತ್ತಿದೆ. ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಕೊಳೆತು ವಿಕಾರವಾಗಿದೆ. ಕಾಡಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡಿರೋ ಸ್ಥಿತಿಯಲ್ಲಿರೋ ಶವದ ಬಲಗೈ ಕಟ್ ಆಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಅನ್ನೋ ಬಗ್ಗೆ ಇನ್ನಷ್ಟೇ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ,...
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪತ್ರಕರ್ತರಿಂದ ಮುಖ್ಯಮಂತ್ರಿಗೆ ರಕ್ತ ‘ಸಹಿ’ತ ಮನವಿ..!
ಕಾರವಾರ : ಜೀವದ ಹಂಗು ತೊರೆದು ಹಗಲು, ರಾತ್ರಿ ಸಮಾಜದ ಒಳಿತಿಗೋಸ್ಕರ ದುಡಿಯುತ್ತಿರುವ ಪತ್ರಕರ್ತ ಸಮೂಹಕ್ಕೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಉ. ಕ. ಜಿಲ್ಲಾಧ್ಯಕ್ಷ ಸದಾನಂದ ದೇಶಭಂಡಾರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ದೊರೆತು 77 ವರ್ಷ ಕಳೆದಿವೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಸರ್ಕಾರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ...
ಸೆ.17 ರಂದು ಹಲ್ಲೆಗೊಳಗಾಗಿದ್ದ ನ್ಯಾಸರ್ಗಿಯ ದಲಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು..! ಬೀದಿಯಲ್ಲಿ ನಡೆದ ಜಗಳ ಸಾವಿನಲ್ಲಿ ಅಂತ್ಯವಾಯ್ತಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಸಾವು ಕಂಡಿದ್ದಾನೆ. ಕಳೆದ ಸೆಪ್ಟೆಂಬರ್ 17 ರ ರಾತ್ರಿ ನಡೆದಿದ್ದ ಹಲ್ಲೆ ಪ್ರಕರಣ ಈಗ ಸಾವಿನಲ್ಲಿ ದಿಕ್ಕು ಬದಲಿಸಿದೆ. ಹಲ್ಲೆ ನಡೆದು 13 ದಿನಗಳ ನಂತರ ಮೃತಪಟ್ಟಿದ್ದಾನೆ. ನ್ಯಾಸರ್ಗಿಯ ಮಂಜುನಾಥ ದುರ್ಗಪ್ಪ ಬೋವಿ(57) ಎಂಬುವವನೇ ಸದ್ಯ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಕಳೆದ ಸೆಪ್ಟೆಂಬರ್ 17 ರಂದು ರಾತ್ರಿ 8 ಗಂಟೆಯ ಸುಮಾರಿಗೆ ನ್ಯಾಸರ್ಗಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ರಸ್ತೆಯಲ್ಲಿ ಹನುಮಂತ ಭೀಮಣ್ಣ ಹರಪನಹಳ್ಳಿ ಹಾಗೂ ಮೃತ...
ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಕೇಳೋಕೆ ಹೋದ್ರೆ ಕೆಟ್ಟದಾಗಿ ಬೈತಾರೆ, ಮುಂಡಗೋಡ MG ಗಾರ್ಮೆಂಟ್ಸ್ ಮಾಲೀಕರ ವಿರುದ್ಧ FIR ದಾಖಲಿಸಿದ ಮಹಿಳಾ ಕಾರ್ಮಿಕರು..!
ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಮೇಲ್ಬಾಗದಲ್ಲಿರೋ ಎಂಜಿ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಮಾಲೀಕರ ಮೇಲೆ ಮಹಿಳಾ ಕಾರ್ಮಿಕರು ಮುಗಿ ಬಿದ್ದಿದ್ದಾರೆ. ತಾವು ನಿತ್ಯವೂ ಕೆಲಸ ಮಾಡಿ ಉಪವಾಸ ಬೀಳುವಂತ ಪರಿಸ್ಥಿತಿ ಬಂದೊದಗಿದೆ. ನಮಗೆ ಸಂಬಳವನ್ನೇ ನೀಡಿಲ್ಲ ಅಂತಾ ಆಕ್ರೋಶಗೊಂಡಿದ್ದಾರೆ. ಸಂಬಳ ಕೇಳಿದ್ರೆ ಅವಾಚ್ಯವಾಗಿ ನಿಂದಿಸ್ತಿರೋ ಮಾಲೀಕರು, ವ್ಯವಸ್ಥಾಪಕರು ಸೇರಿ ಮೂವರ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಗಾರ್ಮೆಂಟ್ಸ್ ಮಹಿಳೆಯರು ದೂರು ದಾಖಲಿಸಿದ್ದಾರೆ. 3ತಿಂಗಳಿಂದ ಸಂಬಳವಿಲ್ಲ..! ಅಂದಹಾಗೆ, ಗಾರ್ಮೆಂಟಿನಲ್ಲಿ ಕೆಲಸ ಮಾಡ್ತಿದ್ದ ಸುಮಾರು ಮೂವತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು, ತಮಗೆ...
ಶಿರಸಿ- ಕುಮಟಾ ರಸ್ತೆಯ, ದೇವಿಮನೆ ಘಟ್ಟದಲ್ಲಿ ಪುರುಷನ ಅಪರಿಚಿತ ಶವ ಪತ್ತೆ, ಕೊಲೆ ಮಾಡಿ ಬೀಸಾಡಿ ಹೋದ್ರಾ ಹಂತಕರು..?
ಶಿರಸಿ- ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಸ್ಥಿತಿ ಕಂಡ ಪೊಲೀಸರು ಇದೊಂದು ಮರ್ಡರ್ ಅನ್ನೋ ಅನುಮಾನ ವ್ಯಕ್ತ ಪಡಿಸ್ತಿದಾರೆ. ಅಂದಾಜು, 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಸಾವನ್ನಪ್ಪಿರುವ ವ್ಯಕ್ತಿಯ ತಲೆ ಹಿಂಬದಿಯಲ್ಲಿ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಯಾರೋ, ಎಲ್ಲಿಯೊ ಕೊಲೆ ಮಾಡಿ, ಇಲ್ಲಿ ತಂದು ಎಸೆದು ಹೋಗಿರಬಹುದಾದ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಬಿಳಿ ಶರ್ಟ ಹಾಗೂ ಲುಂಗಿ ಹಾಕಿದ್ದು, ಶರ್ಟನಲ್ಲಿ ಬಸ್...
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಯುವಕ ಆರೆಸ್ಟ್..! ತಿರಂಗಾದಲ್ಲಿ ಧಾರ್ಮಿಕ ಚಿತ್ರ ಹಾಕಿ ಅಂದರ್ ಆದ ಹುಡುಗ..!!
ಶಿರಸಿ: ಇಲ್ಲೊಬ್ಬ ಅಸಾಮಿ ಅದೇನೋ ಇರಲಾರದೇ ಇರುವೆ ಬಿಟ್ಕೊಂಡಂಗೆ ಮಾಡಿಕೊಂಡಿದ್ದಾನೆ. ಈದ್ ಮಿಲಾದ್ ಹಬ್ಬದ ದಿನ ತನ್ನ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಿ ಅವಮಾನ ಮಾಡಿದ್ದಾನೆ ಅಂತಾ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಧ್ವಜ ಹಾರಿಸಲು, ರಾಷ್ಟ್ತಧ್ವಜದಲ್ಲಿ,ಮುಸ್ಲಿಂ ಧರ್ಮದ ಮದೀನಾ ಗುಂಬಸ್ ಹಾಕಿ ಧ್ವಜಕ್ಕೆ ಅವಮಾನ ಮಾಡಿದ್ದಾನೆ. ಉಮರ್ ಫಾರೂಕ್ ಅಬ್ದುಲ್ ಖಾದರ ಶೇಖ್ (38), ಬಂಧಿತ ವ್ಯಕ್ತಿಯಾಗಿದ್ದು, ಈತ ಮನೆಯ ಮೇಲೆ ರಾಷ್ಟ್ರ ಧ್ವಜವನ್ನ ಹಾರಿಸಿದ್ದಾನೆ. ಹಾರಿಸಿರುವ ರಾಷ್ಟ್ರ ಧ್ವಜಕ್ಕೆ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯ ಸಲ್ಮಾನಖಾನ್ ಗೌನಖಾನ್ ಆಲೂರು (24), ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg...
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭೀಕರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಟ್ಟಡದಲ್ಲಿ ವಾಚಮನ್ ಆಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ ಡಂಬರ(68)ಆತ್ಮಹತ್ಯೆ ಮಾಡಿಕೊಂಡ ವಾಚಮನ್ ಆಗಿದ್ದಾನೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸಿಲ್ವರ್ ಟೌನ್ ಕಟ್ಟಡದಲ್ಲಿ ಮುಂಡಗೋಡ ತಾಲೂಕಿನ ಮರಗಡಿಯ ಮೌಲಾಲಿ ಎಂಬುವ ಯುವಕನ ಬರ್ಬರ ಹತ್ಯೆಯಾಗಿತ್ತು. ಈ ಹತ್ಯೆಯ ಹಿಂದೆ ವಾಚಮನ್ ಕೈವಾಡವಿದೆ ಅಂತಾ ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದರು. ಸದ್ಯ ಕಟ್ಟಡದಲ್ಲಿ ವಾಚಮನ್ ಆಗಿದ್ದ ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ...









