ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....
ಬೆಳಿಗ್ಗೆ ಬಿಜೆಪಿ, ರಾತ್ರಿ ಕಾಂಗ್ರೆಸ್ ಅನ್ನೋ “ಶಕುನಿ” ಲೀಡರ್ಸ್ ನಮಗೆ ಬೇಕಾಗಿಲ್ಲ: ರವಿಗೌಡ ಪಾಟೀಲ್ ಖಡಕ್ ಮಾತು..!
ಬೆಳಿಗ್ಗೆ ಬಿಜೆಪಿಯಲ್ಲಿ ಚಹಾ ಕುಡಿದು, ರಾತ್ರಿಯಾದಂತೆ ಕಾಂಗ್ರೆಸ್ ಜೊತೆ ಚೀಯರ್ಸ್ ಹೇಳೊ, ಬೆನ್ನಿಗೆ ಚೂರಿ ಹಾಕೊ ಕಾರ್ಯಕರ್ತರು, ಮುಖಂಡರು ನಮಗೆ ಬೇಕಾಗಿಲ್ಲ. ಅಂತಹ ಮನಸ್ಥಿತಿಯವರು ಇದ್ರೆ ಈಗಲೇ ಈ ಸಭೆಯಿಂದಲೇ ಎದ್ದು ಹೋಗಿ ಅಂತಾ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲ್ ಖಡಕ್ಕಾಗೇ ಎಚ್ಚರಿಸಿದ್ರು. ಅವ್ರು, ಮುಂಡಗೋಡ ತಾಲೂಕಿನ ಇಂದೂರಿನ ಕಲ್ಮೇಶ್ವರ ದೇವಸ್ಥಾನದಲ್ಲಿ ನಡೆದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ರು. ಕೊಪ್ಪರಿಗೆ ಹಾಲಿನಲ್ಲಿ ಒಂದು ಸಣ್ಣ ಉಪ್ಪಿನ...
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ, ಇಬ್ಬರ ಮೃತ ದೇಹ ಪತ್ತೆ..!
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಮಲುಗಿದ್ದಾಗ ಗುಡ್ಡ ಕುಸಿದು ನಾಲ್ವರು ಮನೆಯ ಅಡಿಯಲ್ಲ ಸಿಲುಕಿದ್ದರು, ಹೀಗಾಗಿ, ಸದ್ಯ ಇಬ್ಬರ ಶವವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆಗಿದ್ದಾರೆ. ಲಕ್ಷ್ಮಿ ನಾಯ್ಕ ಎನ್ನುವವರ ಮನೆಯ ಮೇಲೆ ಗುಡ್ಡ ಕುಸಿತ ವಾಗಿತ್ತು. ಲಕ್ಷ್ಮೀ ನಾಯ್ಕ, ಆಕೆಯ ಪುತ್ರಿ ಲಕ್ಷ್ಮೀ ನಾಯ್ಕ, ಪುತ್ರ ಅನಂತ ನಾಯ್ಕ (32) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಗುಡ್ಡ ಕುಸಿತದಿಂದ...
ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!
ಮುಂಡಗೋಡ: ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚೌಡಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಾದಿಯ ಫೈಟ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ನೇತ್ರಾವತಿ ಬಿಸವಣ್ಣವರ್ ರಾಜೀನಾಮೆಯಿಂದ ಖಾಲಿಯಾಗಿದ್ದ ಅಧ್ಯಕ್ಷ ಖುರ್ಚಿಗೆ ಮಂಜುನಾಥ್ ಕಟಗಿ ನೂತನ ಅಧ್ಯಕ್ಷರಾಗಿ ಪಟ್ಟಕ್ಕೆ ಏರೋದು ಬಹುತೇಕ ಕನ್ಫರ್ಮ್ ಆದಂತಾಗಿದೆ. ಅವಿರೋಧ ಆಯ್ಕೆನಾ..? ಬಿಜೆಪಿಯಲ್ಲೇ ಎರಡೆರಡು ಬಣಗಳಾಗಿ ಕಚ್ಚಾಡಿಕೊಂಡಿದ್ದ ಚೌಡಳ್ಳಿ ಪಂಚಾಯತಿಯ ಅಧಿಕಾರದ ತಿಕ್ಕಾಟ, ಇಡೀ ತಾಲೂಕಿನ ಬಿಜೆಪಿ ಮುಖಂಡರುಗಳಿಗೆ ಮುಜುಗರ ತಂದಿಟ್ಟಿತ್ತು. ಕೋರ್ಟ್ ಅಂಗಳಕ್ಕೂ ಹೋಗಿ ಬಂದಿದ್ದ ಅಧ್ಯಕ್ಷರ ಬದಲಾವಣೆ ಪ್ರಹಸನಗಳು ಖುದ್ದು ಸಚಿವ ಶಿವರಾಮ್...
ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಂತೆ, ಭಟ್ಕಳ ತಾಲೂಕಿನಲ್ಲಿ ಮಹಾಮಳೆ ಆತಂಕದ ಛಾಯೆ ಮೂಡಿಸಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಘಡಗಳು ಉಂಟಾಗಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಹೀಗೆ ಕುಸಿದ ಗುಡ್ಡದ ಅಡಿಯಲ್ಲಿ ಇರುವ ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ. ಲಕ್ಷ್ಮೀ ನಾಯ್ಕ, ಅವರ ಮಗಳು ಲಕ್ಷ್ಮೀ, ಮಗ ಅನಂತ್ ನಾಯ್ಕ್ (32),...
ತಾಲೂಕಿನಲ್ಲಿ ಮತ್ತೆ ಮಹಾಮಳೆ ಕಂಟಕ, ಬಡ್ಡಿಗೇರಿ ಹಳ್ಳದ ಬ್ರಿಡ್ಜ್ ಜಲಾವೃತ, ಸಂಚಾರ ಬಂದ್..!
ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.









