ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ,...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಮಳೆ ಅವಾಂತರ
ಶಿರೂರು ಗುಡ್ಡ ಕುಸಿತ ಪ್ರಕರಣ: ಸಡಗೇರಿ ಗ್ರಾಮ ಗ್ಯಾಸ್ ಸೋರಿಕೆ ಅಪಾಯದಿಂದ ಮುಕ್ತ : ಜಿಲ್ಲಾಧಿಕಾರಿ ಲಕ್ಷೀಪ್ರಿಯ
ಕಾರವಾರ: ಸಗಡೇರಿ ಗ್ರಾಮದ ಬಳಿ ಗಂಗಾವಳಿ ನದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿನದ್ದ ಸುಮಾರು 15 ಟನ್ ಗ್ಯಾಸ್ ನ್ನು ಹೆಚ್,ಪಿ.ಸಿ.ಎಲ್, ಬಿ.ಪಿ.ಸಿಎಲ್, ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ತಂಡಗಳ ನೆರವಿನಿಂದ ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಈ ಪ್ರದೇಶವನ್ನು ವಾಸಯೋಗ್ಯಕ್ಕೆ ಮುಕ್ತಗೊಳಿಸಲಾಗಿದ್ದು, ಗ್ರಾಮಸ್ಥರು ತಮ್ಮ ಮನೆಗಳಿಗೆ ವಾಪಸ್ ಬರಬಹುದಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯ ತಿಳಿಸಿದ್ದಾರೆ. ಅವರು ಶುಕ್ರವಾರ ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು. ಮಣ್ಣು ತೆರವು ಕಾರ್ಯಾಚರಣೆ..! ಅಂಕೋಲ ಶಿರೂರು...
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ, ತಹಶೀಲ್ದಾರ್ ಪರಿಶೀಲನೆ..!
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರಗಳಿ ಸೃಷ್ಟಿಯಾಗಿವೆ. ನಿರಂತರ ಮಳೆಯಿಂದ ತಾಲೂಕಿನಲ್ಲಿ ಹಲವು ಮನೆಗಳು ಹಾನಿಗೊಳಗಾಗಿದ್ದು ತಹಶೀಲ್ದಾರ್ ಶಂಕರ್ ಗೌಡಿ ಮತ್ತವರ ಟೀಂ ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನ ಸನವಳ್ಳಿ, ಬೆಡಸಗಾಂವ್, ಕಾತೂರು, ಅಗಡಿ, ಹುನಗುಂದ ಸೇರಿದಂತೆ ಕೆಲವು ಕಡೆ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ.
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!
ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ...
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ; ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ ನೀಡಲಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗದ ಜನರು ಹಲವು ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಏನು ಎಚ್ಚರಿಕೆ.? ಏನದು ಪ್ರಕಟಣೆ? ಶಿಥಿಲಾವಸ್ಥೆಯ ಮನೆಯಲ್ಲಿ ವಾಸ ಬೇಡ..! ತಾಲೂಕಾಧ್ಯಂತ, ಸದ್ಯ ನಿರಂತರ ಮಳೆ ಆಗುತ್ತಿರುವ ಕಾರಣ ತಾಲ್ಲೂಕಿನ ಗ್ರಾಮಗಳ ಮತ್ತು ಮುಂಡಗೋಡ ಪಟ್ಟಣದ ಸಾರ್ವಜನಿಕರು ನಿಮ್ಮ ಮನೆ ಮಳೆಯಿಂದ ಸೋರುವ, ಬೀಳುವ ಹಂತದಲ್ಲಿ ಇದ್ದರೆ, ಶಿಥಿಲ ಸ್ಥಿತಿಯಲ್ಲಿ ಇದ್ದಲ್ಲಿ ಅಂತಹ ಮನೆಯಲ್ಲಿ...
ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಅಪಾಯಕಾರಿ ಆಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ...
ಉ.ಕನ್ನಡ ಜಿಲ್ಲೆಯಲ್ಲಿ ನಾಳೆ ಶುಕ್ರವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಸಂಕಷ್ಟ ತಂದೊಡ್ಡಿದೆ. ಹೀಗಾಗಿ, ಜಿಲ್ಲೆಯ 12 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ,ನಾಳೆ ಶುಕ್ರವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ,...
ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ
ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ...
ಜಿಲ್ಲೆಯಲ್ಲಿ ಆರ್ಭಟಿಸುತ್ತಿರುವ ಮಳೆ, 26 ಕಾಳಜಿ ಕೇಂದ್ರಗಳಲ್ಲಿ 2368 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ: ಜಿಲ್ಲೆಯಲ್ಲಿ ವರುಣ ಎಡಬಿಡದೇ ಆರ್ಭಟಿಸುತ್ತಿದ್ದು, ಮಂಗಳವಾರ ಸಂಜೆಯ ವೇಳೆಗೆ ಕಾರವಾರ ತಾಲೂಕಿನಲ್ಲಿ 6, ಕುಮಟಾ ತಾಲೂಕಿನಲ್ಲಿ 6 ಮತ್ತು ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ ಒಟ್ಟು 26 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಇವುಗಳಲ್ಲಿ 2368 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ...
ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!
ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್‌ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ...