Home ಸಂಕ್ಷಿಪ್ತ ಸುದ್ದಿ

Category: ಸಂಕ್ಷಿಪ್ತ ಸುದ್ದಿ

Post
ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

  ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಕೋವಿಡ್ ಮಾರ್ಗಸೂಚಿಯ ಅನ್ವಯ ಸರಳವಾಗಿ ಆಚರಿಸಲಾದ ಗಣೇಶೋತ್ಸವಕ್ಕೆ, ಸರಳವಾದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ನಡೆಸಲಾಯಿತು. ಅದಕ್ಕೂ ಮೊದಲು, ಇಂದು ಗಣೇಶನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಜನಾ ಪದಗಳ ಮೂಲಕ ಗಣೇಶನಿಗೆ ಜಯ ಘೋಷಗಳನ್ನು ಕೂಗಿ ಭಕ್ತಿ ಸಮರ್ಪಿಸಲಾಯಿತು..

Post
ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!

ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!

ಮುಂಡಗೋಡ: ಪಟ್ಟಣದಲ್ಲಿ ಇಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಪುರೋಹಿತರ ಬಳಗದಿಂದ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಸೇರಿದ್ದ ಪುರೋಹಿತರು ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಾರ್ಯಕರ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದ್ರು. ವೀರಭದ್ರೇಶ್ವರ ನಾಮಾವಳಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಚರ್ಚಿಸಿದ್ರು..