ಹಾವೇರಿ: ನಗರದ ಹೊರವಲಯದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಅಪಘಾತವಾದ ಲಾರಿಯಲ್ಲಿ ಚಾಲಕ ಸಿಲುಕಿಕೊಂಡು ಒಂ ದು ಗಂಟೆಗೂ ಹೆಚ್ಚು ಕಾಲ ನರಳಾಡಿದ್ದಾನೆ. ಹೌದು,ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಪೆಟ್ರೋಲ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ಗೆ ಹಿಂದಿನಿಂದ ಟ್ಯಾಂಕರ್ ಡಿಕ್ಕಿಯಾಗಿದೆ. ಪರಿಣಾಮ ಚಾಲಕನ ಎಡಗಾಲು ಸಂಪೂರ್ಣ ನುಜ್ಜು ಗುಜ್ಜಾಗಿದ್ದ ಲಾರಿಯಡಿಯೇ ಸಿಲುಕಿಕೊಂಡಿದೆ. ಹೀಗಾಗಿ ಚಾಲಕ ನೋವಿನಿಂದ ಚೀರಾಡಿದ್ದಾನೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನರಳಾಡಿದ್ದಾನೆ. ಈ ವೇಳೆ ಹಾವೇರಿ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಹಾವೇರಿ
ಇದೇ ತಿಂಗಳು ಮದುವೆಯಿತ್ತು..! ಆದ್ರೆ ಮದುಮಗ ಮಾತ್ರ ಇವತ್ತು ರೈಲಿಗೆ ತಲೆ ಕೊಟ್ಟು ಬಿಟ್ಟ..! ಯಾಕೆ ಹೀಗಾಯ್ತು..?
ಹಾವೇರಿ: ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗಬೇಕಿದ್ದ ಯುವಕ ರೈಲು ಹಳಿಗೆ ಬಿದ್ದು ಸಾವು ಕಂಡ ಘಟನೆ ಹಾವೇರಿ ನಗರದ ಹೊರವಲಯದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಹಾವೇರಿ ಬಸವೇಶ್ವರ ನಗರದ ನಿವಾಸಿ, ವೀರೇಶ್ ಬೆನಕಪ್ಪನವರ (36), ಮೃತ ಯುವಕನಾಗಿದ್ದು ಇತ್ತೀಚೆಗಷ್ಟೇ ಮದುವೆ ನಿಶ್ಚಿತಾರ್ಥವಾಗಿತ್ತು. ಈ ತಿಂಗಳು 28 ರಂದು ಹಾವೇರಿಯಲ್ಲಿ ಮದವೆ ಕೂಡ ನಿಶ್ಚಯವಾಗಿತ್ತು. ಆದ್ರೆ ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ...
ಉದಾಸಿ ಅಂತಿಮ ದರ್ಶನದ ವೇಳೆ ಮೊಬೈಲ್ ಕಳ್ಳರ ಕೈಚಳಕ: ಸಿಕ್ಕಿಬಿದ್ದು ಒದೆ ತಿಂದ ಯುವಕ.!
ಹಾನಗಲ್: ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ. ಈ ವೇಳೆ ಜೇಬುಗಳ್ಳರು ಕೈ ಚಳಕ ತೋರಿದ್ದಾರೆ. ಎಷ್ಟೊ ಜನರ ಮೊಬೈಲ್ ಎಗರಿಸಿದ್ದಾರೆ. ಇನ್ನು ಹೀಗೆ ಜೇಬಿಗೆ ಕತ್ತರಿ ಹಾಕುತ್ತಿರುವಾಗಲೇ, ರೆಡ್ ಹ್ಯಾಂಡ್ ಆಗಿ ಓರ್ವ ಖತರ್ನಾಕ ಜೇಬುಗಳ್ಳ ತಗಲಾಕ್ಕೊಂಡಿದ್ದ. ಜೇಬು ಕತ್ತರಿಸುವಾಗಲೆ ಕಳ್ಳನನ್ನು ಹಿಡಿದು ಸಾರ್ವಜನಿಕರು ಛಳಿ ಬಿಡಿಸಿದ್ದಾರೆ. ನಂತರ ಪೊಲೀಸರಿಗೆ ಕಳ್ಳನನ್ನು ಒಪ್ಪಿಸಿದ್ದಾರೆ. ಹಾನಗಲ್ ಪೊಲೀಸ್ರು ಕಳ್ಳನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಜನಸಂದಣಿಯಲ್ಲಿ ಜೇಬಿಗೆ ಕತ್ತರಿ ಹಾಕಿಸಿಕೊಂಡವರ ಗೋಳು...
ಸಿ.ಎಂ.ಉದಾಸಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಅಭಿಮಾನಿಗಳು..!
ಹಾನಗಲ್: ಮಾಜಿ ಸಚಿವ, ಬಿಜೆಪಿ ಹಿರಿಯವಹಾಲಿ ಶಾಸಕ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆ ಅವ್ರ ಪಾರ್ಥೀವ ಶರೀರದ ದರ್ಶನಕ್ಕೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹಾನಗಲ್ ಕುಮಾರೇಶ್ವರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅಪಾರ ಅಭಿಮಾನಿಗಳು ತನ್ನ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಹೂಮಾಲೆ ಹಿಡಿದು ಸಾಲು ಸಾಲಾಗಿ ಬರುತ್ತಿರೋ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಇನ್ನು ಸಿ.ಎಂ.ಉದಾಸಿ ಪುತ್ರ ಸಂಸದ ಶಿವಕುಮಾರ್ ಉದಾಸಿ, ತಂದೆಯ ಪಾರ್ಥೀವ ಶರೀರದ ಪಕ್ಕದಲ್ಲೇ ನಿಂತು ಕಂಬನಿ ಮಿಡಿಯುತ್ತಿದ್ದಾರೆ.
ಹಾವೇರಿಗೆ ಆಗಮಿಸಿದ ಉದಾಸಿ ಪಾರ್ಥೀವ ಶರೀರ, ಅಭಿಮಾನಿಗಳಿಂದ ಅಂತಿಮ ದರ್ಶನ..!
ಹಾವೇರಿ: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ. ಎಂ. ಉದಾಸಿ ನಿಧನ ಹಿನ್ನಲೆ, ಹಾವೇರಿ ನಗರಕ್ಕೆ ಪಾರ್ಥೀವ ಶರೀರ ಆಗಮಿಸಿದೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ಬಳಿ ಶಾಸಕರು ಹಾಗೂ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ್ರು. ಹಾವೇರಿಯಲ್ಲಿ ನೂರಾರು ಆಭಿಮಾನಿಗಳ ಅಂತಿಮ ದರ್ಶನದ ಬಳಿಕ ಹಾನಗಲ್ ಕಡೆಗೆ ಪಾರ್ಥೀವ ಶರೀರ ಸಾಗಿಸಲಾಗುತ್ತಿದೆ.
ಸಿ.ಎಂ.ಉದಾಸಿ ವಿಧಿವಶ ಹಿನ್ನೆಲೆ: ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಇಂದು ಅಂತ್ಯಕ್ರಿಯೆ..!
ಹಾನಗಲ್: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ. ಎಂ.ಉದಾಸಿ ನಿಧನರಾದ ಹಿನ್ನಲೆಯಲ್ಲಿ ಇಂದು ಹುಟ್ಟೂರು ಹಾನಗಲ್ಲಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ, ಅಂತ್ಯಕ್ರಿಯೆಯಲ್ಲಿ ವಿವಿಧ ಗಣ್ಯ ಮಠಾಧೀಶರು ಸಾನಿಧ್ಯವಹಿಸಲಿದ್ದಾರೆ. ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರಸಿದ್ದ ರಾಜಯೋಗೆಂದ್ರ ಸ್ವಾಮೀಜಿ, ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಣೆ, ಕ್ರೀಯಾ ಸಮಾಧಿಯ ವೇಳೆ ಮೋಕ್ಷ ಮಂತ್ರಪಠಣ ಉಚ್ಚರಿಸಲಿದ್ದಾರೆ. ಕುಮಾರೇಶ್ವರ ಮಠದ ಹಿಂಭಾಗದ ರುದ್ರಭೂಮಿಯಲ್ಲಿ ಸಿ.ಎಂ.ಉದಾಸಿ ಸಮಾಧಿ ಕಾರ್ಯ ನಡೆಯಲಿದ್ದು,...
ಬೆಂಗಳೂರಿನಿಂದ ಹಾನಗಲ್ ಗೆ ಬರುತ್ತಿರೋ ಉದಾಸಿ ಪಾರ್ಥೀವ ಶರೀರ..! ಸಾರ್ವಜನಿಕ ದರ್ಶನಕ್ಕೆ ಸಕಲ ಸಿದ್ಧತೆ..!
ಹಾನಗಲ್: ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಹಿರಿಯ ಶಾಸಕ ಸಿ. ಎಂ. ಉದಾಸಿ ನಿಧನರಾದ ಹಿನ್ನೆಲೆಯಲ್ಲಿ ಇಂದು ಹುಟ್ಟೂರು ಹಾನಗಲ್ ಗೆ ಪಾರ್ಥಿವ ಶರೀರ ಬರಲಿದೆ. ಈಗಾಗಲೇ ಬೆಳಿಗ್ಗೆ 6 ಗಂಟೆಗೆ ಬೆಂಗಳೂರು ಬಿಟ್ಟಿರುವ ಸಿ ಎಮ್ ಉದಾಸಿ ಪಾರ್ಥಿವ ಶರೀರ, ಜಿಲ್ಲೆಯ ಮೊದಲ ಗ್ರಾಮ ಕುಮಾರಪಟ್ಟಣಂ ಗೆ ಆಗಮಿಸಲಿದೆ. ಅಲ್ಲಿಯ ಕಾರ್ಯಕರ್ತರಿಂದ ಅಂತಿಮ ದರ್ಶನ, ನಂತರ ರಾಣೇಬೆನ್ನೂರು, ಮೋಟೆಬೆನ್ನೂರು, ಹಾವೇರಿಯಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಗ ಮಧ್ಯದ ಗ್ರಾಮಗಳ ಕಾರ್ಯಕರ್ತರಿಗೆ ಅಂತಿಮ ದರ್ಶನಕ್ಕೆ ಸಿದ್ಧತೆ...
ಬಿಜೆಪಿ ಹಿರಿಯ ಶಾಸಕ ಉದಾಸಿ ಅಸ್ತಂಗತ: ಹಾನಗಲ್ ನಲ್ಲಿ ಬುಧವಾರ ಸಂಜೆ 4 ಕ್ಕೆ ಅಂತ್ಯಕ್ರಿಯೆ
ಹಾನಗಲ್: ಬಿಜೆಪಿಯ ಹಿರಿಯ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆಯಲ್ಲಿ, ನಾಳೆ ಬುಧವಾರ ಸಂಜೆ 4 ಗಂಟೆಗೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಅಂತಾ ಆಪ್ತ ಮೂಲಗಳು ತಿಳಿಸಿವೆ. ನಾಳೆ ಮಧ್ಯಾಹ್ನ 12 ಗಂಟೆಗೆ ಹಾನಗಲ್ ಪಟ್ಟಣಕ್ಕೆ ಆಗಮಿಸಲಿರೋ ಶಾಸಕ ಉದಾಸಿಯವರ ಪಾರ್ಥೀವ ಶರೀರವನ್ನು, ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಗೌಳಿ ಗಲ್ಲಿಯಲ್ಲಿರೋ ಅವರ ನಿವಾಸಕ್ಕೆ ತರಲಾಗುತ್ತದೆ. ಮದ್ಯಾಹ್ನ 2 ಗಂಟೆ ನಂತರ ಪಟ್ಟಣದ ವಿರಕ್ತಮಠದ ಆವರಣದಲ್ಲಿ ಪಾರ್ಥೀವ...
ಹಿರಿಯ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ..!
ಹಾನಗಲ್- ಹಿರಿಯ ಬಿಜೆಪಿ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ(86) ವಿಧಿವಶವಾಗಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿಯವರನ್ನು ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಅಂತಲೇ ಖ್ಯಾತಿ ಪಡೆದಿದ್ದ ಸಿ.ಎಂ.ಉದಾಸಿಯ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5 ನ್ಯೂಸ್ ವೀಕ್ಷಿಸಲು ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. https://youtu.be/712rEAKhVeE
ಬೀಜ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ-ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ: : ಕಳಪೆ ಬಿತ್ತನೆ ಬೀಜ ದಾಸ್ತಾನು, ಮಾರಾಟ ಹಾಗೂ ಅನಧಿಕೃತವಾಗಿ ಬಿತ್ತನೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ವಿಶೇಷ ಅಭಿಯಾನ ಕೈಗೊಂಡು ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು. ಹಾವೇರಿ ಪ್ರವಾಸಿ ಮಂದಿರದಲ್ಲಿ ಮುಂಗಾರು ಬಿತ್ತನೆ ಬೀಜ ಹಾಗೂ ಗೊಬ್ಬರದ ದಾಸ್ತಾನು ವ್ಯವಸ್ಥೆ ಕುರಿತಂತೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕಳಪೆ...








