ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಹಾವೇರಿ
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ...
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
ಹಾವೇರಿ; ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಸಾವು ಕಂಡ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ನಡೆದಿದೆ. ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ ಸಿಲುಕಿ ಸಾವು ಕಂಡ ದುರ್ಧೈವಿಗಳು. ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು, ಮಾಧ್ಯಾಹ್ನದ ವೇಳೆ ಊಟ ಮಾಡಿ ರೂಲರ್ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಬೇಟಿ ನೀಡಿ,...
ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!
ಹಾನಗಲ್: ಟ್ಯ್ರಾಕ್ಟರ್ ಇಂಜಿನ್ ಮತ್ತು ಟ್ರೆಲರ್ ಮಧ್ಯ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಆಡೂರ ಗ್ರಾಮದಲ್ಲಿ ನಡೆದಿದೆ. ಬಂಕಾಪೂರ ಗ್ರಾಮದ ಯಲ್ಲಪ್ಪ ಉಳಿವೆಪ್ಪ ವಳಗೇರಿ (40) ಮೃತ ದುರ್ದೈವಿಯಾಗಿದ್ದಾನೆ. ಈತ ಬಂಕಾಪೂರ ಗ್ರಾಮದಿಂದ ಆಡೂರ ಗ್ರಾಮಕ್ಕೆ ಟ್ರ್ಯಾಕ್ಟರ್ ನಲ್ಲಿ ಎಂ.ಸ್ಯಾಂಡ್ ಉಸುಕು ತಂದಿದ್ದ. ಗ್ರಾಮದಲ್ಲಿರುವ ಗುಡ್ಡವನ್ನ ಹತ್ತಿಸುವ ವೇಳೆ ಅವಘಡ ನಡೆದಿದೆ. ಏಕಾಏಕಿ ಟ್ರ್ಯಾಕ್ಟರ್ ಇಂಜಿನ್ ಮೆಲಕ್ಕೆ ಹಾರಿದ ಪರಿಣಾಮ ಇಂಜಿನ್ ಮತ್ತು ಟ್ರೆಲರ್ ನಡುವೆ ಟ್ರ್ಯಾಕ್ಟರ್ ಚಾಲಕ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಆಡೂರ ಪೊಲೀಸ್...
ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು
ಹಾವೇರಿ: ಪಂಪ್ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (50) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (26) ಎಂದು ಗುರುತಿಸಲಾಗಿದೆ. ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್ ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ...
ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!
ಶಿಗ್ಗಾವಿ ಪಟ್ಟಣದಲ್ಲಿ ಶ್ರೀ ಶರಣ ಹಡಪದ ಅಪ್ಪಣ್ಣನವರ 890ನೇ ಜಯಂತ್ಯೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ನಂತರ, ಶಿಗ್ಗಾವಿ-ಸವಣೂರ ತಾಲೂಕಿನಿ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಹಾವೇರಿ ಜಿಲ್ಲಾ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಅನ್ನದಾನಿಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಹಾಗೂ ಸಾನಿದ್ಯವನ್ನು ಶ್ರೀ ಮ ನಿ ಪ್ರ ಸಂಗನಬಸವ ಮಹಾಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ...
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!
ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ...
ಹಾವೇರಿಯಲ್ಲಿ ಭೀಕರ ಅವಘಡ, ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಹರಿದ ಬಸ್, ತಲೆ ಪೀಸ್, ಪೀಸ್..!
ಹಾವೇರಿ: ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಗೆ ಸಿಕ್ಕು ಮಹಿಳೆ ದಾರುಣ ಸಾವು ಕಂಡ ಘಟನೆ, ಹಾವೇರಿ ನಗರದ ವಾಲ್ಮೀಕಿ ವೃತ್ತದ ಬಳಿ ನಡೆದಿದೆ. ಹುಬ್ಬಳ್ಳಿ ಯಿಂದ ಹಾವೇರಿಯತ್ತ ಬರುತ್ತಿದ್ದ ಸಾರಿಗೆ ಬಸ್ ಗೆ, ಹಾವೇರಿಯ ಇಜಾರಿ ಲಕಮಾಪುರದ ನಿವಾಸಿ ಜಯಮ್ಮ ಕೂಳೇನೂರ (31) ಎಂಬುವವರು ಸಾವು ಕಂಡಿದ್ದಾರೆ. ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡ್ತಿದ್ದ ಮೃತ ಮಹಿಳೆ, ಪತಿ ರಸ್ತೆ ಪಕ್ಕ ನಿಂತು ಕರೆದ ಹಿನ್ನಲೆ ರಸ್ತೆ ದಾಟಲು ಹೋಗಿದ್ದರು. ಹೀಗಾಗಿ,...
ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!
ಹಾವೇರಿ: 18 ವರ್ಷದ ಬಾಲಕನೊಬ್ಬ ಬೈಕ್ ಕೊಡಿಸು ಅಂತಾ ಹಠ ಹಿಡಿದು, ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ತಾಯಿಯೂ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹದ್ದೊಂದು ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಧನರಾಜ ಸುರೇಶ ನಾಯಕ್ (18) ಹಾಗೂ ಈತನ ತಾಯಿ ಬಾಗ್ಯಮ್ಮ ನಾಯಕ (43) ಎಂದು ತಿಳಿದು ಬಂದಿದೆ. ಧನರಾಜ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ...