Home ಹುಬ್ಬಳ್ಳಿ ಧಾರವಾಡ

Category: ಹುಬ್ಬಳ್ಳಿ ಧಾರವಾಡ

Post
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...

Post
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!

ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....

Post
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಳಿ ಸಮಯ ಕೇಳಿರೋ ಮಾಜಿ ಸಿಎಂ ಶೆಟ್ಟರ್ ಗೆ ಬೆಳಿಗ್ಗೆ 10.30 ಕ್ಕೆ ಬರುವಂತೆ ಕಾಗೇರಿ ತಿಳಿಸಿರೋ ಹಿನ್ನೆಲೆಯಲ್ಲಿ ಶಿರಸಿ ಕಡೆಗೆ ಪ್ರಯಾಣ ಬೆಳಿಸಿದ್ದಾರೆ.  ಮಾಜಿ ಸಿಎಂ ಶೆಟ್ಟರ್ ಹೇಳಿದ್ದಿಷ್ಟು..! ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸದ್ಯ ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ...

Post
ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಲಿಂಗೈಕ್ಯ..!

ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಲಿಂಗೈಕ್ಯ..!

ಧಾರವಾಡ: ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಧಾರವಾಡ ತಾಲೂಕಿನ ಗರಗದ ಪ್ರಸಿದ್ಧ ಮಠವಾಗಿರೋ ಮಡಿವಾಳೇಶ್ವರ ಮಠದಲ್ಲಿ ಕಳೆದ 55 ವರ್ಷಗಳಿಂದ ಶ್ರೀಗಳು ಮಠದಲ್ಲಿ‌ದ್ದರು. ಅನಾರೋಗ್ಯದ ಹಿನ್ನೆಲೆ ಇಂದು ನಿಧನರಾಗಿದ್ದಾರೆ. ಇನ್ನು, ಕಳೆದ ವಾರವಷ್ಟೇ ಗರಗದ ಮಡಿವಾಳೇಶ್ವರರ ಜಾತ್ರೆ ಅದ್ದೂರಿಯಾಗಿ ನಡೆದಿತ್ತು. ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

Post
ಕಬ್ಬಿಗೆ FRP ದರ ನಿಗದಿಗೊಳಿಸುವಂತೆ ಆಗ್ರಹ, ಕಲಘಟಗಿ ಶಾಸಕರ ನಿವಾಸದೆದುರು  ಕಬ್ಬುಬೆಳೆಗಾರರ ಪ್ರತಿಭಟನೆ..!

ಕಬ್ಬಿಗೆ FRP ದರ ನಿಗದಿಗೊಳಿಸುವಂತೆ ಆಗ್ರಹ, ಕಲಘಟಗಿ ಶಾಸಕರ ನಿವಾಸದೆದುರು ಕಬ್ಬುಬೆಳೆಗಾರರ ಪ್ರತಿಭಟನೆ..!

ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕಬ್ಬು ಬೆಳೆಗಾರರು ಇವತ್ತು ಆಕ್ರೋಶಗೊಂಡಿದ್ರು. ಕಬ್ಬಿಗೆ ಎಫ್ಆರ್ಪಿ ಬೆಲೆಯನ್ನು ಹೆಚ್ಚುಗೊಳಿಸುವಂತೆ ಆಗ್ರಹಿಸಿ ಶಾಸಕರ ನಿವಾಸದ ಎದುರು ಧರಣಿ ಕುಳಿತಿದ್ರು. ಅಂದಹಾಗೆ, ಕಲಘಟಗಿ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು. ಅಂದಹಾಗೆ, ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ರೈತರು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ 14 ದಿನದಿಂದ ಅಹೋ ರಾತ್ರಿ ಧರಣಿ’ ಚಳುವಳಿ ನಡೆಸುತ್ತಿದ್ದರು ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಪ್ರಕಟಿಸಿದೆ ಕಬ್ಬು ಬೆಳೆದ ರೈತರನ್ನ...

Post
ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ

ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ

ಧಾರವಾಡ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುವಾಗ ಭಯಾನಕ ದುರ್ಘಟನೆ ನಡೆದಿದೆ.  ರಸ್ತೆ ದಾಟಿ ಹೋಗುತ್ತಿದ್ದ ಬೈಕ್ ಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬ್ಲಾಕ್ ಕಲರ್ ಕಾರ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಮೇಲಿದ್ದ ಮಹಿಳೆ 10 ಅಡಿ ಹಾರಿ ಹೋಗಿ ಬಿದ್ದಿದ್ದಾಳೆ. ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!

ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!

ಕಲಘಟಗಿ: ತಾಲೂಕಿನ ಅಸ್ತಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಓರ್ವ ಯುವತಿ ಬಲಿಯಾಗಿದ್ದಾಳೆ. ಕು.ಲಕ್ಷ್ಮೀ ವಿರೂಪಾಕ್ಷಪ್ಪ ಪಾಟೀಲ್(18) ಸಿಡಿಲಿಗೆ ಬಲಿಯಾದವಳಾಗಿದ್ದಾಳೆ‌. ನಿನ್ನೆ ರಾತ್ರಿ ಸುರಿದ ಗುಡುಗು, ಸಿಡಿಲು, ಮಿಂಚು ಸಹಿತ ಭಾರೀ ಮಳೆಗೆ ಯುವತಿ ಬಲಿಯಾಗಿದ್ದು ದುರಂತ ಸಾವು ಕಂಡಿದ್ದಾಳೆ. ಅಂದಹಾಗೆ, ಮೃತ ಲಕ್ಷ್ಮೀ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದಳು. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯ ಒಳಗೆ ಇದ್ದಾಗ, ಏಕಾಏಕಿ ಲಕ್ಷ್ಮೀಯ ಎದೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ‌. ಹೀಗಾಗಿ, ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ಕಳೆದ ಮೂರು...

Post
ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ..!

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ..!

ಧಾರವಾಡ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆದಿದೆ. ನಮ್ಮ ಹುಡುಗಿಗೆ ಕಾಡಿಸುತ್ತೀರಾ, ಲೈಂಗಿಕ ದೌರ್ಜನ್ಯ ಎಸಗಿದ್ದಿರಾ ಅಂತಾ ಧಿಡೀರ್ ಜಗಳ ತೆಗೆದ ಮೂವರು ಆರೋಪಿಗಳು ಮನೋಜ್ ಕರ್ಜಗಿ ಹಾಗೂ ಅಯಾನ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮನೋಜ್ ಗುಡದೂರ್, ಆನಂದ ತಳವಾರ್, ಹಾಗೂ ಉದಯ್ ಕೆಲಗೇರಿ ಎನ್ನುವ ಯುವಕರು ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಚಾಕುವಿನಿಂದ ಅಯಾನ್ ಮೇಲೆ ಹಲ್ಲೆ ಮಾಡಿದ್ದಾರೆ....

Post
ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!

ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!

 ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ‌. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Post
ಹುಬ್ಬಳ್ಳಿ ತಾರಿಹಾಳದಲ್ಲಿ ಭೀಕರ ಅಗ್ನಿ ದುರಂತ, ಮೂರಕ್ಕೇರಿದ ಮೃತರ ಸಂಖ್ಯೆ..!

ಹುಬ್ಬಳ್ಳಿ ತಾರಿಹಾಳದಲ್ಲಿ ಭೀಕರ ಅಗ್ನಿ ದುರಂತ, ಮೂರಕ್ಕೇರಿದ ಮೃತರ ಸಂಖ್ಯೆ..!

 ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆಯಲ್ಲಿ ನಿನ್ನೆ ನಡೆದಿದ್ದ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕಿಮ್ಸ್ ನಲ್ಲಿ ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಸಾವು ಕಂಡಿದ್ದಾರೆ. ಗೌರಮ್ಮ ಹಾಗೂ ಮಾಲೇಶ್ ಮೃತ ದುರ್ದೈವಿಗಳಾಗಿದ್ದು, ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಒಟ್ಟು ಮೂವರು ಸಾವನ್ನಪ್ಪಿರೋದಾಗಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ. ಇನ್ನುಳಿದ ಐವರು ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ...