Home BIG BREAKING

Category: BIG BREAKING

Post
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!

ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಬ್ರವರಿ 14 ಮತ್ತು 15 ರಂದು ಶಾಖದ ಅಲೆಯ ವಾತಾವರಣವಿರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಈ ಕೆಳಕಂಡಂತೆ ಎಚ್ಚರವಹಿಸಲು ತಿಳಿಸಿದೆ. ಉಷ್ಣ ಅಲೆ ಸಂದರ್ಭದಲ್ಲಿ ಏನು ಮಾಡಬೇಕು..? ದಿನಪೂರ್ತಿ ಸಾಕಷ್ಟು ನೀರು ಕುಡಿಯಬೇಕು, ದಾಹವಾಗದಿದ್ದರೂ ನೀರನ್ನು ಸೇವಿಸಬೇಕು, ಓ.ಆರ್.ಎಸ್, ನಿಂಬೆ ನೀರು, ಮಜ್ಜಿಗೆ, ತೆಂಗಿನ ನೀರು ಮುಂತಾದ ದ್ರವಗಳನ್ನು ಸೇವಿಸಬೇಕು, ಹಗುರವಾದ, ತೆಳುವಾದ ಬಣ್ಣದ ಮತ್ತು ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು, ತಲೆ ಮತ್ತು ಮುಖವನ್ನು...

Post
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!

ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!

  ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್ ಬರಲಿದ್ದಾರೆ‌. ಈ ಹಿಂದೆ ಪಿಎಸ್ ಐ ಆಗಿದ್ದ ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಂಜುನಾಥ್ ಗೌಡರ್ ನಿಯುಕ್ತಿಗೊಂಡಿದ್ದಾರೆ‌. ಅಸಲು, ಕಳೆದ ಕೆಲವೇ ತಿಂಗಳುಗಳ ಹಿಂದೆ ಮುಂಡಗೋಡ ಠಾಣೆಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ಯಲ್ಲಾಲಿಂಗ್ ಕುನ್ನೂರ್ ವರ್ಗಾವಣೆಯಾಗಿ ಯಲ್ಲಾಪುರದಿಂದ ಬಂದಿದ್ದರು.ಆದ್ರೆ, ತೀವ್ರ ಅನಾರೋಗ್ಯದಿಂದ ಬಳಲಿದ ಅವ್ರು ಕಳೆದ ಮಂಗಳವಾರ ನಿಧನರಾಗಿದ್ದರು. ಹೀಗಾಗಿ, ಖಾಲಿ ಇದ್ದ ಹುದ್ದೆಗೆ ಮಂಜುನಾಥ್ ಗೌಡರ್ ರನ್ನು ನೇಮಕಗೊಳಿಸಿ ಪಶ್ಚಿಮ...

Post
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!

“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!

ಶ್ರೀ ಕ್ಷೇತ್ರ ಮೈಲಾರ: ಸಂಪಾಯಿತಲೇ ಪರಾಕ್. ಇದು ನಾಡಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ಜಾತ್ರೆಯ 125ನೇ ಕಾರ್ಣಿಕೋತ್ಸವ ನುಡಿ. ಮೈಲಾರಲಿಂಗೇಶ್ವರ ಸ್ವಾಮಿ ಮೈಲಾರ ಪುಣ್ಯ ಭೂಮಿ ಡೆಂಕಣ ಮರಡಿಯಲ್ಲಿ ಲಕ್ಷಾಂತರ ಭಕ್ತರ ಸಮೂಹದ ಮಧ್ಯೆ ತುಪ್ಪ ಸವರಿದ 20 ಅಡಿ ಎತ್ತರದ ಐತಿಹಾಸಿಕ ಬಿಲ್ಲನ್ನೇರಿದ ಗೊರವಯ್ಯ ಕಾರ್ಣಿಕದ ರಾಮಣ್ಣ ದಶ ದಿಕ್ಕುಗಳತ್ತ ನೋಡುತ್ತ ಸದ್ದಲೇ.. ಎಂದು ಕೂಗಿದ ಕೂಡಲೇ ಕಾರ್ಣಿಕದ ಸ್ಥಳದ ಡೆಂಕಣ ಮರಡಿಯಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು, ಸೇರಿದಂತೆ ಪಶು, ಪಕ್ಷಿಗಳೆಲ್ಲ ಕ್ಷಣ ಕಾಲ ಮೌನವಾಗಿದ್ದವು. ಆಗ...

Post
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!

ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!

ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ವಿಧಿವಶರಾಗಿದ್ದಾರೆ ಅನ್ನೋ ಶಾಕಿಂಗ್ ಮಾಹಿತಿ ಸಿಕ್ಕಿದೆ‌. 33 ವರ್ಷ ವಯಸ್ಸಿನ ಅವ್ರು ಈಗ್ಗೆ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ರು. ಹೀಗಾಗಿ, ಅವ್ರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮುಂಡಗೋಡಿಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ವರ್ಗಾವಣೆಗೊಂಡು ಬಂದಿದ್ದ, ಯಲ್ಲಾಲಿಂಗ್ ಕುನ್ನೂರ್ ಜನಾನುರಾಗಿಯಾಗಿದ್ದರು. ಅದಕ್ಕೂ ಮೊದಲು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಹೊರಬೀಡು ದಿನದಂದು ಪಟ್ಟಣದ ಅಂಬೇಡ್ಕರ್ ಓಣಿಯ ಬಸವರಾಜ ಮಲ್ಲಪ್ಪ ಚಲವಾದಿ ಎಂಬುವವರ ಮನೆ ಕಳ್ಳತನ ಮಾಡಿದ್ದ, ಅಂತರ ಜಿಲ್ಲಾ ಕಳ್ಳನನ್ನು ಹೆಡೆ ಮುರಿಕಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದ ಹೊನ್ನಹಳ್ಳಿಯ, ಮಂಜುನಾಥ ಬಸವಂತಪ್ಪ ನಾಯಕ (34) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಜನೆವರಿ 27 ರಂದು ಮಂಗಳವಾರ ಹೋರಬೀಡುವಿನ ದಿನ, ಮುಂಡಗೋಡ ಪಟ್ಟಣದ ಅಂಬೇಡ್ಕರ ಓಣಿಯಲ್ಲಿರುವ ಮನೆಯ ಮುಂದಿನ ಬಾಗಿಲನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಒಡೆದು ತೆಗೆದು ಒಳಗಡೆ...

Post
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!

ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!

ಮುಂಡಗೋಡ ತಾಲೂಕಿನ ತಟ್ಟಿಹಳ್ಳಿ ಶಿವಾನಂದನ ಕೊಲೆಯತ್ನ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ‌. ಘಟನೆ ನಡೆದ ಕೆಲವೇ ಕೆಲವು ಘಂಟೆಗಳಲ್ಲಿ ಆರೋಪಿಯನ್ನ ಹೆಡೆಮುರಿ ಕಟ್ಟಿದ್ದಾರೆ. ಕೃತ್ಯ ನಡೆಸಿ ಪರಾರಿಯಾಗಿದ್ದ ಶಿವರಾಜನನ್ನ ಎಳೆದು ತಂದಿದ್ದಾರೆ‌. ಹೀಗಾಗಿ, ಬೆಂಗಳೂರಿಗೆ ಪರಾರಿಯಾಗಲು ಹೊಂಚು ಹಾಕಿದ್ದವ, ಮುಂಡಗೋಡ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ಸಾರಥ್ಯದ ಕ್ರೈಂ ಟೀಮಿನ ಚಾಣಾಕ್ಷತನದ ಬಲೆಗೆ ರೋಚಕವಾಗಿ ಬಿದ್ದು ಬಿಟ್ಟಿದ್ದಾನೆ. ಅದು ಗುರುವಾರ ಸಂಜೆ..! ಯಸ್, ತಟ್ಟಿಹಳ್ಳಿಯಲ್ಲಿ ತನ್ನ ತಾಯಿಗೆ ಕಿರುಕುಳ ನೀಡುತ್ತಿದ್ದ ಶಿವಾನಂದನಿಗೆ ಒಂದು ಗತಿ...

Post
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!

ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!

ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ಗುರುವಾರ  ಸಂಜೆ ನಡೆದ ಭೀಕರ ಹತ್ಯೆ ಯತ್ನ ಕೇಸಿನ ಅಸಲೀಯತ್ತು ಬಟಾಬಯಲಾಗಿದೆ. ಅಂದಹಾಗೆ, ಅಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದವನ ಹೆಸರು ಶಿವಾನಂದ ರಾಮಣ್ಣ ಗುಡಿಯಾಳ, ವಯಸ್ಸು 48 ವರ್ಷ. ಅಷ್ಟಕ್ಕೂ, ಹಾಗೆ ರಕ್ತದ ಮಡುವಿನಲ್ಲಿ ಬೀಳುವಂತೆ ಕತ್ತಿಗೆ ಬಲವಾಗಿ ಮಚ್ಚಿನಿಂದ ಕತ್ತರಿಸಿದ್ದವನ ಹೆಸರು ಶಿವರಾಜ್ ಕಲಕಟ್ಟಿ..!       ಅನುಮಾನದ ಪಿಶಾಚಿ..! ಅಸಲು, ಮುಂಡಗೋಡ ತಾಲೂಕಿನ ತಟ್ಟಿಹಳ್ಳಿ ಗ್ರಾಮದ ಲಾರಿಚಾಲಕ ಶಿವಾನಂದ ರಾಮಣ್ಣ ಗುಡಿಯಾಳ(48) ಈ ಹಿಂದೆ ಎರಡೆರಡು ಮದುವೆಯಾಗಿದ್ದ. ಆದ್ರೆ, ಇಬ್ಬರು...

Post
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!

ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!

ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ವ್ಯಕ್ತಿಯೋರ್ವನ ಮೇಲೆ ಆತನ ಮಗನಿಂದಲೇ ಭೀಕರ ಹತ್ಯೆಗೆ ಯತ್ನ ನಡೆದಿದೆ. ಪರಿಣಾಮ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಲ್ಲೆ ನಡೆಸಿದ ಶಿವರಾಜ ಪರಾರಿಯಾಗಿದ್ದಾನೆ‌. ಇನ್ನು ನಾಗಮ್ಮ ಎಂಬುವವಳನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ‌. ಶಿವಾನಂದ (47) ಎಂಬುವವನ ಮೇಲೆ ಭೀಕರ ಹತ್ಯೆಗೆ ಯತ್ನ ನಡೆದಿದೆ. ಮಗನಿಂದಲೇ ಕಂದಲಿಯಿಂದ ಹಿಂದಿನಿಂದ ಬಂದು ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆಗೆ ಯತ್ನ ನಡೆದಿದೆ. ಸದ್ಯ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ...

Post
ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!

ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಕಾರಣ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಖಾಸಗಿ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಸೋನಿಯಾ ಗಾಂಧಿ ಅವರನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸೋನಿಯಾ ಗಾಂಧಿ ಅವರು ಬೇಗ ಗುಣಮುಖರಾಗಲಿ ಎಂದು ಕಾಂಗ್ರೆಸ್‌ ನಾಯಕರು ಪ್ರಾರ್ಥಿಸಿದ್ದಾರೆ.

Post
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!

ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!

 ಕಬ್ಬು ತುಂಬಿದ ಟ್ರಾಕ್ಟರ್ ಟ್ರೈಲರ್ ನ ಕೊಂಡಿ ಕಳಚಿ, ಹಿಂಬದಿಗೆ ಚಲಿಸಿ ಪಲ್ಟಿಯಾದ ಘಟನೆ ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯ ಪೊಸ್ಟ್ ಆಫೀಸ್ ಬಳಿ ನಡೆದಿದೆ. ರಸ್ತೆಯಲ್ಲೇ ಕಬ್ಬು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕಬ್ಬಿನ ಅಡಿ ಎರಡು ಮೂರು ಬೈಕ್ ಗಳು ಸಿಲುಕಿಕೊಂಡಿರೋ ಸಾಧ್ಯತೆ ಇದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅಂದಹಾಗೆ, ಡಬಲ್ ಟ್ರೈಲರ್ ನಲ್ಲಿ ಕಬ್ಬು ತುಂಬಿಕೊಂಡು ಸಾಗುವ ಟ್ರಾಕ್ಟರ್, ಯಲ್ಲಾಪುರ ರಸ್ತೆಯ ಮಸೀದಿ ಬಳಿಯಲ್ಲಿ ಚಲಿಸುತ್ತಿದ್ದಾಗ ಟ್ರೈಲರ್ ನ...