Home BIG BREAKING

Category: BIG BREAKING

Post
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ...

Post
ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ

ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ

ಕಾರವಾರ: ಜಿಲ್ಲೆಯಲ್ಲಿ ಅಪಾಯಕಾರಿ ಆಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ...

Post
ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ

ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ

ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ...

Post
ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!

ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!

ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್‌ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ...

Post
ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಈಗಾಗಲೇ ಎಂಟು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಆದೇಶಿಸಿದ್ದ ಡಿಸಿ ಮೇಡಮ್ಮು, ಈಗ ದಾಂಡೇಲಿ, ಯಲ್ಲಾಪುರ ಸೇರಿ ಮತ್ತೆರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಈಗ...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...

Post
ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ...

Post
ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ ಬಳಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

ಶಿಗ್ಗಾವಿ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಐದು ಜನರು ತೀವ್ರ ಗಾಯಗೊಂಡ ಘಟನೆ ಶಿಗ್ಗಾವಿ- ಹನುಮರಹಳ್ಳಿ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ ಮರಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತರು ಸವಣೂರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (19) ಮೃತ ದುರ್ದೈವಿಗಳಾಗಿದ್ದಾರೆ, ಐದು ಜನ ತೀವ್ರ ಗಾಯಗೊಂಡಿದ್ದು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇವನಹಳ್ಳಿ...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಅವಾಂತರಗಳು ಚಾಲ್ತಿಯಲ್ಲಿವೆ. ಅದ್ರಲ್ಲೂ, ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಹೀಗಾಗಿ, ಕರಾವಳಿ ಭಾಗದ ಎರಡು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ಕಾರಣಕ್ಕಾಗಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಹೊನ್ನಾವರ, ಕುಮಟಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9 ರಂದು ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..

Post
ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ಹಿರೇಕೆರೂರಿನ, ಮಾಜಿ ಸಚಿವ ಬಿಸಿ ಪಾಟೀಲ್‌ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರ್ ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಾಪಕುಮಾರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು * ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣ. * ದಾವಣಗೆರೆ ತಾಲೂಕಿನ ಕತ್ತಲಗೇರಿ ಗ್ರಾಮದ ನಿವಾಸಿ. * ಕಳೆದ...

error: Content is protected !!