Home BIG BREAKING

Category: BIG BREAKING

Post
ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!

ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!

 ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ನೋಡಲು ಬಂದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ರಕ್ಷಣೆ ಮಾಡಿರೋ ಘಟನೆ ನಡೆದಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಸದ್ಯ ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಕೊಚ್ಚಿಕೊಂಡು ಹೋಗುತ್ತಿದ್ದಾಗ ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಫೀರಪ್ಪ ಹರಿಜನ್(25) ರಕ್ಷಣೆಗೊಳಗಾದ ಯುವಕನಾಗಿದ್ದಾನೆ. ಮಳಗಿ ಧರ್ಮಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ, ಮೂಡಸಾಲಿ ಗ್ರಾಮದಿಂದ ಆರು ಜನ ಸ್ನೇಹಿತರು ನೋಡಲು...

Post
ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!

ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!

ಮುಂಡಗೋಡ ತಾಲೂಕಿನ ಕಲಕೇರಿಯಲ್ಲಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಎತ್ತು ಸಾವನ್ನಪ್ಪಿದ ಘಟನೆ ನಡೆದಿದೆ.. ಗದ್ದೆಯಲ್ಲಿ ಭತ್ತದ ನಾಟಿ ಕೆಲಸದ ತಯಾರಿ ನಡೆದಿತ್ತು. ಎತ್ತುಗಳ ಜೊತೆಯಲ್ಲಿ ರೈತ ರಾಜಣ್ಣ ಮುಕ್ಕನಕಟ್ಟಿ ಎಂಬುವವರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಎತ್ತು ವಿದ್ಯುತ್ ಕಂಬದ ಹತ್ತಿರ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ತಗುಲಿದೆ. ಹೀಗಾಗಿ, ತಕ್ಷಣವೇ ವಿದ್ಯುತ್ ಪ್ರವಹಿಸಿ ಹೋರಿ ಮೃತಪಟ್ಟಿದೆ. ಬಚಾವ್ ಮಾಡಲು ಹೋದ ರೈತನಿಗೂ ವಿದ್ಯುತ್ ಸಂಚಾರದ ಅನುಭವವಾಗಿದೆ. ಅದೃಷ್ಟವಶಾತ್ ರೈತನ ಸಮಯ ಪ್ರಜ್ಞೆಯಿಂದ ಅವ್ರಿಗೆ ಏನೂ...

Post
ಮುಂಡಗೋಡ ಬಸವನ ಹೊಂಡದಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು..! ಪೊಲೀಸರಿಂದ ರಕ್ಷಣೆ, ಆದ್ರೂ ಬದುಕಲಿಲ್ಲ ಜೀವ.!

ಮುಂಡಗೋಡ ಬಸವನ ಹೊಂಡದಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು..! ಪೊಲೀಸರಿಂದ ರಕ್ಷಣೆ, ಆದ್ರೂ ಬದುಕಲಿಲ್ಲ ಜೀವ.!

 ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ಆತ್ನಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸ್ಥಳೀಯರ ಸಮಯಪ್ರಜ್ಞೆಯಿಂದ ರಕ್ಷಣೆ ಮಾಡಲಾಗಿತ್ತು. ಆದ್ರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ದುರಂತ ಅಂದ್ರೆ, ಅದೇಷ್ಟೇ ಚಿಕಿತ್ಸೆ ನೀಡಿದ್ರೂ ಮಹಿಳೆ ಬದುಕುಳಿಯಲಿಲ್ಲ. ಅಂದಹಾಗೆ, ಮುಂಡಗೋಡ ಅಂಬೇಡ್ಲರ ಓಣಿಯ ರುಕ್ಮೀಣಿ ವಡ್ಡರ್ ಎನ್ನುವ 45 ವರ್ಷದ ಮಹಿಳೆ, ಮಂಗಳವಾರ ಬೆಳಿಗ್ಗೆ ಅದ್ಯಾವುದೋ ಕಾರಣಕ್ಕೆ ಮನನೊಂದು ಬಸವನ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೀಗಾಗಿ ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ...

Post
ಕಾರವಾರದಲ್ಲಿ ಸಿಎಂ ಅಧ್ಯಕ್ಷತೆಯ ಸಭೆ,  ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಖಡಕ್ ಸೂಚನೆಗಳೇನು ಗೊತ್ತಾ..?

ಕಾರವಾರದಲ್ಲಿ ಸಿಎಂ ಅಧ್ಯಕ್ಷತೆಯ ಸಭೆ, ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಖಡಕ್ ಸೂಚನೆಗಳೇನು ಗೊತ್ತಾ..?

ಕಾರವಾರ: ಮುಖ್ಯಮಂತ್ರಿ ಅವರು ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.‌ ತಕ್ಷಣ ಹಾನಿಯ ವರದಿ ನೀಡಿ..! ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಪರಿಹಾರ ಒದಗಿಸಲು ತಕ್ಷಣ ಹಾನಿಯ ವರದಿ ಸಲ್ಲಿಸಿ. ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಿ....

Post
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!

ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ...

Post
ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ

ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ

ಕಾರವಾರ: ಜಿಲ್ಲೆಯಲ್ಲಿ ಅಪಾಯಕಾರಿ ಆಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ...

Post
ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ

ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ

ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ...

Post
ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!

ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಸಾವು ಶಂಕೆ, ಮಣ್ಣಿನಡಿ ಕೆಲವರು ಸಿಲುಕಿರೊ ಅನುಮಾನ..!

ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್‌ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ...

Post
ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಳೆ ಅವಾಂತರ ಹಿನ್ನೆಲೆ, ಮತ್ತೆ ಎರಡು ತಾಲೂಕುಗಳಿಗೂ ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಈಗಾಗಲೇ ಎಂಟು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಆದೇಶಿಸಿದ್ದ ಡಿಸಿ ಮೇಡಮ್ಮು, ಈಗ ದಾಂಡೇಲಿ, ಯಲ್ಲಾಪುರ ಸೇರಿ ಮತ್ತೆರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಈಗ...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...