ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%
Top Stories
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
Category: BIG BREAKING
ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!
ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!
ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ...
ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!
ಕೊಪ್ಪಳ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ಬಿಜೆಪಿ ಸಂಸದ ಕರಡಿ ಸಂಗಣ್ಣ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ದೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಗೆ ಸಂಸದ ಸ್ಥಾನಕ್ಕೆ ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹುತೇಕ ಕರಡಿ ಸಂಗಣ್ಣ ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲೇ ಸಿಎಂ, ಡಿಸಿಎಂ ಜೊತೆಗೆ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ, ಕಾಂಗ್ರೆಸ್ ನಾಯಕರ...
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಬ್ಬಾರ್ ಬೆಂಬಲಿಗರು ಬಿಜೆಪಿ ತೊರೆಯುವ ಮುಹೂರ್ತ ಫಿಕ್ಸ್..! ನಾಳೆ ಗುರುವಾರ ಮದ್ಯಾನ ಕೈ ಸೇರ್ತಾರಂತೆ ಸಾವಿರಾರು ಕಾರ್ಯಕರ್ತರು..!!
ಮುಂಡಗೋಡ: ಕೊನೆಗೂ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಹೆಬ್ಬಾರ್ ಬಳಗ ಕೈ ಪಡೆಗೆ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಅಂದ್ರೆ ಗುರುವಾರ ಎಪ್ರಿಲ್ 11 ರಂದು, ಮದ್ಯಾನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಂತೆ ಸಾವಿರಾರು ಬೆಂಬಲಿಗರು. ಆದ್ರೆ, ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ಸುಪುತ್ರ ವಿವೇಕ್ ಹೆಬ್ಬಾರ್ ಕೈಗೆ ಸೇರ್ಪಡೆಯಾಗಲ್ಲವಂತೆ. ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನ ರಾಜ್ಯ ನಾಯಕರ ಸಮ್ಮುಖದಲ್ಲಿ ವಿವೇಕ್ ಸೇರ್ಪಡೆ ಆಗ್ತಾರಂತೆ. ಪಟ್ಟಣ ಪಂಚಾಯತಿ 6 ಸದಸ್ಯರು “ಕೈ”ಗೆ..!? ಅಂದಹಾಗೆ, ನಾಳೆ ಗುರುವಾರ ಮುಂಡಗೋಡಿನಲ್ಲಿ ನಡೆಯುವ...
ಮುಂಡಗೋಡಿನಲ್ಲಿ ನೆಲಕ್ಕುರುಳಿದ ಬೃಹತ್ ಆಲದ ಮರ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಬಂಕಾಪುರ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂದೆ ಬೃಹತ್ ಆಲದ ಮರ ಏಕಾಏಕಿ ನೆಲಕ್ಕುರುಳಿದೆ. ಪರಿಣಾಮ ಮರದ ಕೆಳಗಡೆ ನಿರ್ಮಿಸಿಕೊಂಡಿದ್ದ ಗ್ಯಾರೇಜ್ ಹಾಗೂ ವೆಲ್ಡಿಂಗ್ ವರ್ಕ್ ಶಾಪ್ ಗೆ ಹಾನಿಯಾಗಿದೆ. ನಾಲ್ಕೈದು ಬೈಕ್ ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದುಗಡೆ ಇರೋ ಪುರಾತನ ಆಲದ ಮರ ಮೂರು ಭಾಗಗಳಾಗಿ ನೆಲಕ್ಕುರಿಳಿದ್ದು. ಪ್ರಮೋದ್ ಎಂಬುವವರಿಗೆ ಸೇರಿದ ಗ್ಯಾರೇಜು ಸಂಪೂರ್ಣ ಜಖಂ ಗೊಂಡಿದೆ. ಇದ್ರಿಂದ ಗ್ಯಾರೇಜಿನಲ್ಲಿ ರಿಪೇರಿಗೆಂದು ಬಂದಿದ್ದ ಬೈಕ್...
ಮುಂಡಗೋಡಿನಿಂದ ಹಜ್ ಯಾತ್ರೆಗೆ ತೆರಳಿದ್ದ ಮೂವರು ಕಾರ್ ಅಪಘಾತದಲ್ಲಿ ಸಾವು..! ಮತ್ತೆ ಮೂವರಿಗೆ ಗಾಯ..!
ಮುಂಡಗೋಡಿನಿಂದ ಮೆಕ್ಕಾ( ಹಜ್ ಯಾತ್ರೆಗೆ) ತೆರಳಿದ್ದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನ ರೋಣ್ಸ್ ಮೆಡಿಕಲ್ ಮಾಲೀಕ ಫಯಾಜ್ ಅಹ್ಮದ್ ರೋಣ್, ಅವ್ರ ಧರ್ಮಪತ್ನಿ ಆಫೀನಾ ಬಾನು ಹಾಗೂ ಅಣ್ಣನ ಮಗ ಆಯಾನ್ ರೋಣ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮೆಕ್ಕಾದ ದರ್ಶನ ಮುಗಿಸಿಕೊಂಡು ಕಾರಿನಲ್ಲಿ ಮದಿನಾಕ್ಕೆ ಹೊರಟಿದ್ದ ವೇಳೆ, ಕಾರಿನ ಟೈಯರ್ ಸ್ಪೋಟಗೊಂಡ ಪರಿಣಾಮ ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇನ್ನುಳಿದಂತೆ ಹೆಚ್ಚಿನ...
ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ..!
ಹಾವೇರಿ: ಸಹಸ್ರಾರು ಅಭಿಮಾನಿಗಳನ್ನು ಹೊಂದಿದ್ದ ಹಾವೇರಿಯ ನಾಗೇಂದ್ರನಮಟ್ಟಿಯ ಚಿಕ್ಕಪ್ಪ ಅಜ್ಜಪ್ಪ ದೊಡ್ಡ ತಳವಾರ ಅವರ ನೆಚ್ಚಿನ ರಾಕ್ ಸ್ಟಾರ್ ಕೊಬ್ಬರಿ ಹೋರಿ ಏ.6ರಂದು ಶನಿವಾರ ರಾತ್ರಿ 9ರ ಸುಮಾರಿಗೆ ಸಾವನ್ನಪ್ಪಿದೆ. ಅನಾರೋಗ್ಯದ ಸಮಸ್ಯೆಯಿಂದ ಹೋರಿ ಅಸುನೀಗಿದೆ. ಕಳೆದ ಹಲವಾರು ದಿನಗಳಿಂದ ನೆಲಕಟ್ಟಿದ್ದ ಹೋರಿಯನ್ನು ಜೋಪಾನವಾಗಿ ಕಾಪಾಡುತ್ತಾ ಬಂದಿದ್ದ ಹೋರಿಯ ಮಾಲೀಕ ಚಿಕ್ಕಪ್ಪ ಅವರ ಸಹೋದರರು, ಮನೆಯ ಮಂದಿ ನಿತ್ಯ ಹೋರಿಯ ಕಾಳಜಿಮಾಡುತ್ತಾ ಬಂದಿದ್ದರು. ನೂರಾರು ಹೋರಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆಲುವು ಮೂಲಕ ತನ್ನ ಸೌಮ್ಯ...









