Home BIG BREAKING

Category: BIG BREAKING

Post
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...

Post
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...

Post
ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ..!

ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ..!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ (Coastal Karnataka) ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ (Heay Rain) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ....

Post
ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!

ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ‌. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.

Post
ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ,  ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?

ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ, ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?

  ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದೆ ಅನ್ನೋ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಹತ್ಯೆ ಕೇಸಿನಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿರೋ ಬೆಳಗಾವಿ ಪೊಲೀಸರು, ಜೈನ ಮುನಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅದು ನಂದಿ ಪರ್ವತ ಆಶ್ರಮ..! ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಜೈನ ಮುನಿಯ ಹತ್ಯೆಯ...

Post
ದಾಂಡೇಲಿಯ DRFO ಯೋಗೇಶ್ ನಾಯ್ಕ್ ಕೊನೆಗೂ ಬದುಕಲೇ ಇಲ್ಲ..! ಕಾರ್ಕೋಟಕ “ವಿಷ” ವರ್ತುಲದಲ್ಲಿ ಅರಣ್ಯ ಅಧಿಕಾರಿಯ ದುರಂತ ಸಾವು..! ಅಷ್ಟಕ್ಕೂ ಯಾರು ಹೊಣೆ..?

ದಾಂಡೇಲಿಯ DRFO ಯೋಗೇಶ್ ನಾಯ್ಕ್ ಕೊನೆಗೂ ಬದುಕಲೇ ಇಲ್ಲ..! ಕಾರ್ಕೋಟಕ “ವಿಷ” ವರ್ತುಲದಲ್ಲಿ ಅರಣ್ಯ ಅಧಿಕಾರಿಯ ದುರಂತ ಸಾವು..! ಅಷ್ಟಕ್ಕೂ ಯಾರು ಹೊಣೆ..?

ಈ ಸಾವನ್ನು ನಿಜಕ್ಕೂ ಯಾರ್ ಅಂದ್ರೆ ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ಕೆಲವೇ ದಿನಗಳ ಹಿಂದೆ ಲವಲವಿಕೆಯಿಂದ ಕಾರ್ಯ ನಿರ್ವಹಿಸ್ತಿದ್ದ ಅರಣ್ಯ ಅಧಿಕಾರಿಯೊಬ್ಬ ಹೀಗೆ ವಯಸ್ಸಲ್ಲದ ವಯಸ್ಸಲ್ಲಿ ಜೀವ ಕಳೆದುಕೊಂಡು ಬಿದ್ದಿದ್ದಾನೆ. ಹಾಗಿದ್ರೆ, ಇದನ್ನು ಆತನ ಹಣೆಬರಹ ಅನ್ನ ಬೇಕೋ..? ಅಥವಾ ನಿರ್ಲಜ್ಜ, ಅಮಾನುಷ ವ್ಯವಸ್ಥೆಯ, ಮದವೇರಿದ ಅಧಿಕಾರಿಗಳ ನಿರ್ಲಕ್ಷ ಅನ್ನಬೇಕೋ ಒಂದೂ ಅರ್ಥವಾಗ್ತಿಲ್ಲ. ಒಟ್ನಲ್ಲಿ ದಾಂಡೇಲಿಯ ಅವನೊಬ್ಬ ಅರಣ್ಯ ಅಧಿಕಾರಿ ಸದ್ಯ ಇಂತದ್ದೇ ವ್ಯವಸ್ಥೆಗೆ ತನ್ನ ಜೀವ ಬಲಿ ಕೊಟ್ನಾ..? ಅರ್ಥವೇ ಆಗ್ತಿಲ್ಲ. ಆತನ ಹೆಸ್ರು ಯೋಗೇಶ್..!...

Post
ನಿಲ್ಲದ ಮಳೆ ಅಬ್ಬರ, ಗದ್ದೆಯಲ್ಲಿ ಹೋಗುತ್ತಿದ್ದ ಇಬ್ಬರು ನೀರಲ್ಲಿ ಕೊಚ್ಚಿ ಹೋಗಿ ದಾರುಣ ಸಾವು..!

ನಿಲ್ಲದ ಮಳೆ ಅಬ್ಬರ, ಗದ್ದೆಯಲ್ಲಿ ಹೋಗುತ್ತಿದ್ದ ಇಬ್ಬರು ನೀರಲ್ಲಿ ಕೊಚ್ಚಿ ಹೋಗಿ ದಾರುಣ ಸಾವು..!

ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ‌ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ. ಭಾರೀ ಮಳೆಯಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಸಾವು ಕಂಡಿದ್ದಾರೆ. ಕುಮಟ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂಬುವವರು ದಾರುಣ ಸಾವು ಕಂಡಿದ್ದಾರೆ. ಭಾರೀ ಮಳೆಯಿಂದ ಗದ್ದೆಗಳು ಅಕ್ಷರಶಃ ಕೆರೆಯಂತಾಗವೆ. ಇಂತಹ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ...

Post
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?

ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?

  ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...

Post
ಶಿಗ್ಗಾವಿಯಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಮಹಿಳೆ ಶವ ಎಸೆದ, ಮುಂಡಗೋಡಿನ  ಆರೋಪಿಯೂ ಸೇರಿ ಐವರು ಅಂದರ್..!

ಶಿಗ್ಗಾವಿಯಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಮಹಿಳೆ ಶವ ಎಸೆದ, ಮುಂಡಗೋಡಿನ ಆರೋಪಿಯೂ ಸೇರಿ ಐವರು ಅಂದರ್..!

 ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಸಿಕ್ಕಿದ್ದ ಮಹಿಳೆಯ ಶವ ಕೇಸ್ ಖುಲ್ಲಂ ಖುಲ್ಲಾ ಆದಂತಾಗಿದೆ. ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರಿನಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಹೆಣ ಎಸೆದು ಹೋಗಿದ್ದ ಹಂತಕರನ್ನು ಕುಮಟಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಸಲು, ಇಲ್ಲಿ ಖುದ್ದು ಪತಿಯ ಸಹೋದರನೇ ತನ್ನ ತಾಯಿ, ಸಹೋದರಿ, ದೊಡ್ಡಮ್ಮಳ ಜೊತೆ ಸೇರಿಕೊಂಡು ತಮ್ಮನ ಪತ್ನಿಯನ್ನ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಕೇಸಲ್ಲಿ ಈಗ ಮುಂಡಗೋಡ ತಾಲೂಕಿನ ಇಂದೂರಿನ ಓರ್ವ ಆರೋಪಿ ಸೇರಿ...

Post
ಕುಮಟಾ ದೇವಿಮನೆ ಘಟ್ಟದಲ್ಲಿ ಸಿಕ್ಕ ಮಹಿಳೆಯ ಹೆಣ ಶಿಗ್ಗಾವಿಯದ್ದು, ಅಷ್ಟಕ್ಕೂ ಆ ಹೆಣ ಸಾಗಿಸಿದ್ದು ಮುಂಡಗೋಡ ತಾಲೂಕಿನ ಆ ಕ್ರೂಸರ್ ಚಾಲಕನಾ..?

ಕುಮಟಾ ದೇವಿಮನೆ ಘಟ್ಟದಲ್ಲಿ ಸಿಕ್ಕ ಮಹಿಳೆಯ ಹೆಣ ಶಿಗ್ಗಾವಿಯದ್ದು, ಅಷ್ಟಕ್ಕೂ ಆ ಹೆಣ ಸಾಗಿಸಿದ್ದು ಮುಂಡಗೋಡ ತಾಲೂಕಿನ ಆ ಕ್ರೂಸರ್ ಚಾಲಕನಾ..?

ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಮಹಿಳೆಯ ಮರ್ಡರ್ ಗೂ ಮುಂಡಗೋಡ ತಾಲೂಕಿಗೂ ನಂಟಿನ ಗಂಟು ಬಿದ್ದಿದೆಯಂತೆ. ಮುಂಡಗೋಡ ಪಟ್ಟಣದಿಂದ ಕಲಘಟಗಿಗೆ ಹೋಗುವ ಮಾರ್ಗದಲ್ಲಿ ಜಸ್ಟ್ 10 ಕಿಮೀ ದಾಟಿದ್ರೆ ಸಿಗುವ ಊರಿನ ಚಾಲಕನೊಬ್ಬ ಮಹಿಳೆಯ ಮರ್ಡರ್ ಮಿಸ್ಟ್ರಿಯಲ್ಲಿ ತಗಲಾಕ್ಕೊಂಡಿದ್ದಾನಾ..? ಹಾಗಂತ ಅನುಮಾನ ಶುರುವಾಗಿದೆ. ಹೀಗಾಗಿ, ಮುಂಡಗೋಡ ಪೊಲೀಸರ ಸಹಕಾರದಲ್ಲಿ ಕುಮಟೆಯ ಖಾಕಿಗಳು ಆರೋಪಿಯ ಬೆನ್ನು ಬಿದ್ದಿದ್ದಾರೆ ಎನ್ನಲಾಗಿದೆ. ಇನ್ನೇನು ಕನ್ಪರ್ಮ ಅನ್ನೋ ಕಾರಣ ಸಿಕ್ರೆ ಆತನ ಅರೆಸ್ಟ್ ಗ್ಯಾರಂಟಿ ಎನ್ನಲಾಗಿದೆ. ಹೀಗಾಗಿ, ಆ ಚಾಲಕನ ಬಗ್ಗೆ...