ಮುಂಡಗೋಡ ಪಟ್ಟಣದ ಹೊರವಲಯದ APMC ಹತ್ತಿರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾವುದೋ ಕಾರಣಕ್ಕೆ ಕಾಡಿನಲ್ಲಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಕೊಳೆತು ನಾರುವ ಸ್ಥಿತಿಯಲ್ಲಿರೋ ಶವ, ಕನಿಷ್ಟ ಸುಮಾರು ಹತ್ತು ದಿನಗಳ ಹಿಂದೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ಮೈನಳ್ಳಿ ಯುವಕನಿಂದ ಲವ್, ಸೆಕ್ಸ್, ದೋಖಾ ಆರೋಪ, ಆತನ ಮನೆ ಎದುರೇ ಧರಣಿ ಕುಳಿತ ಯುವತಿ..! ಅಷ್ಟಕ್ಕೂ ಏನಿದು ಘಟನೆ..?
ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ಯುವತಿಯೋರ್ವಳು ತನಗೆ ಅನ್ಯಾಯವಾಗಿದೆ ಅಂತಾ ಯುವಕನ ಮನೆಯೆದುರು ನಿನ್ನೆ ಸೋಮವಾರದಿಂದಲೂ ಸತ್ಯಾಗ್ರಹ ನಡೆಸ್ತಿದಾಳೆ. ಇಲ್ಲಿನ ಯುವಕನೊಬ್ಬ ನಂಗೆ ಪುಸಲಾಯಿಸಿ, ಪ್ರೀತಿಯ ಬಲೆ ಹೆಣೆದು, ಬಳಸಿಕೊಂಡು ಇವಾಗ ಮದುವೆ ಅಂತಾ ಮಾತಾಡಿದ್ರೆ ಆಗಲ್ಲ ಅಂತಾ ದ್ರೋಹ ಮಾಡ್ತಿದಾನೆ ಎಂದು ಅಲವತ್ತುಕೊಂಡಿದ್ದಾಳೆ.. ಘಟನೆ ಏನು..? ಯುವತಿ ಹೇಳೋ ಪ್ರಕಾರ, ಮೈನಳ್ಳಿ ಗ್ರಾಮದ ಅದೊಬ್ಬ ಯುವಕ, ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಅದೇಂತದ್ದೋ ಟ್ರೇನಿಂಗ್ ಗೆ ಹೋದಾಗ, ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ...
ಮೈನಳ್ಳಿ ಕಳಕೀಕಾರೆಯ ಪ್ರಭಾವಿ ಮುಖಂಡನ ತೋಟದ ಶೆಡ್ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಸಿಕ್ಕಿದ್ದೇನು..? ನಡೆದದ್ದೇನು..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಇವತ್ತಿಗೂ ಪ್ರಾಮಾಣಿಕ, ಖಡಕ್ ಅಧಿಕಾರಿಗಳು ಫಿಲ್ಡಿನಲ್ಲಿ ಇದ್ದಾರೆ ಅನ್ನೋದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಪ್ರಭಾವಿಗಳ ದರ್ಪ ದೌಲತ್ತುಗಳ ನಡುವೆ ಅರಣ್ಯ ಇಲಾಖೆಯ ಅದೇಷ್ಟೋ ಸಂಪತ್ತು ಬರ್ಬಾದಾಗ್ತಿರೊ ಸಮಯದಲ್ಲಿ, ಅದೇಂತದ್ದೇ ಪ್ರಭಾವ ಇದ್ರೂ ತಮ್ಮ ನಿಯತ್ತಿನ ಕಾರ್ಯ ನಿರ್ವಹಿಸಿದ್ದಾರೆ ಇಲ್ಲಿನ ಅರಣ್ಯ ಅಧಿಕಾರಿಗಳು. ಅದಕ್ಕಾಗಿ ಅಂತವರಿಗೊಂದು ಹ್ಯಾಟ್ಸ್ ಅಪ್..! ಅದು ಮೈನಳ್ಳಿ ಭಾಗ..! ಅಂದಹಾಗೆ, ಮೈನಳ್ಳಿ ಭಾಗದ ಕಳಕಿಕಾರೆಯಲ್ಲಿ ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಕ್ರಮಿತ ತೋಟದ ಶೆಡ್...
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ. ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ.....
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!
ಛತ್ತೀಸಗಡದಲ್ಲಿ ಸಂಭವಿಸಿದ್ದ ಬಾಂಬ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹಾನಗಲ್ ತಾಲೂಕಿನ CRPF ಯೋಧ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ದುರಂತ ಅಂದ್ರೆ, ತನ್ನ ಮದುವೆ ವಾರ್ಷಿಕೋತ್ಸವದ ದಿನವೇ ಇಹಲೋಕ ತ್ಯಜಿಸಿರೋ ವೀರಯೋಧನ ಪತ್ನಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ತಂದೆ ತಾಯಿಗೆ ಸುದ್ದಿ ತಿಳಿಸಿಲ್ಲ..! ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ, 26 ವರ್ಷ ವಯಸ್ಸಿನ ರವಿ ಕೆಳಗಿನಮನಿ ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಮತ್ತೊಂದು ಮನಕಲಕುವ ಸಂಗತಿಯೆಂದ್ರೆ, ತನ್ನ ಮಗನ ಸಾವಿನ ಸುದ್ದಿ ಆತನ...
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!
ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....
ಯಲ್ಲಾಪುರದಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್..!
ಯಲ್ಲಾಪುರ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಇಂದು ಸಾವಿರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ಸೇರಿ ನಾಮಪತ್ರ ಸಲ್ಲಿಸಿದ್ರು. ಪತ್ನಿ ಸಮೇತ ಆಗಮಿಸಿದ್ದ ವಿ.ಎಸ್.ಪಾಟೀಲ್ ಯಲ್ಲಾಪುರದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ರು. ಯಲ್ಲಾಪುರದ ಗ್ರಾಮದೇವತೆಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ಬಂದ ಪಾಟೀಲರು, ಅಲ್ಲಿ 12 ಗಂಟೆಯ ನಂತರ ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಸಿದ ನಂತರ ಮತ್ತೆ ಮೆರವಣಿಗ ಮೂಲಕ ಕಾಂಗ್ರೆಸ್ ಕಾರ್ಯಾಲಯಕ್ಕೆ ಆಗಮಿಸಿದ ವಿ.ಎಸ್.ಪಾಟೀಲ್, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು....
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ....
ಬಿಎಸ್ ವೈ ಪುತ್ರ ವಿಜಯೇಂದ್ರರಿಗೆ ಬಂಜಾರಾ ತಾಂಡಾದಲ್ಲಿ ಬಹಿಷ್ಕಾರ, ಧಿಕ್ಕಾರ ಕೂಗಿ ಆಕ್ರೋಶ..!
ಶಿಕಾರಿಪುರ: ಯಡಿಯೂರಪ್ಪ ಅವರ ಮಗ ವಿಜಯೇಂದ್ರರವರು ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆಂದು ಬಂದಿದ್ದಾಗ ತಾಂಡಾದ ಜನರಿಂದ ಬಹಿಷ್ಕರಿಸಲಾಯಿತು, ಹಾಗೂ ತಾಂಡಾ ಬಚಾವೋ ಬಿಜೆಪಿ ಹಟಾವೋ ಎಂದು ಘೊಷಣೆ ಕೂಗಲಾಯಿತು. ಪ್ರಚಾರಕ್ಕೆಂದು ತಾಂಡಾಕ್ಕೆ ಬಂದಿದ್ದ ಬಿ.ವೈ. ವಿಜಯೇಂದ್ರರವರಿಗೆ ತಾಂಡಾದಲ್ಲಿ ಮಹಿಳೆಯರೂ ಸೇರಿದಂತೆ ಯುವಕರು ಧಿಕ್ಕಾರಗಳ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ರು. ರಾಜ್ಯದ ಎಲ್ಲಾ ಲಂಬಾಣಿ ತಾಂಡಾಗಳಲ್ಲೂ ಈ ರೀತಿ ಮಾಡಿದರೆ ಮಾತ್ರ ನಮ್ಮ ಬಂಜಾರರ ಒಗ್ಗಟ್ಟು ಏನೆಂಬುದನ್ನು ಅರ್ಥೈಸಬಹುದು. ನಮ್ಮ ಏಳಿಗೆಗೆ ಮುಂದಿನ...









