Home BIG BREAKING

Category: BIG BREAKING

Post
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!

ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!

ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.

Post
ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!

ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!

ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್...

Post
ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!

ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!

ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಇಂದು ಬೆಳಿಗ್ಗೆ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಮ್ಮಾಜಿ ಕೆರೆಯಲ್ಲಿ ಧುಮುಕಿತ್ತು. ಹೀಗಾಗಿ, ಲಾರಿಯಲ್ಲಿದ್ದವರನ್ನು ಸಾರ್ವಜನಿಕರು ರಕ್ಷಣೆ‌ ಮಾಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಸದ್ಯ ಕೆರೆಯಲ್ಲಿ ಪಲ್ಟಿಯಾಗಿ ಅರ್ದಮರ್ದ ಮುಳುಗಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಈ ವೇಳೆ ಯಲ್ಲಾಪುರ ಮುಂಡಗೋಡ ರಸ್ತೆಯಲ್ಲಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.

Post
ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!

ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!

ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಮತ್ತೊಂದು ದುರಂತ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಜನರನ್ನ ಬಚಾವ್ ಮಾಡಲಾಗಿದೆ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ, ಅಮ್ಮಾಜಿ ಕೆರೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕೆರೆಯಲ್ಲೇ ಧುಮುಕಿದೆ. ಲಾರಿಯಲ್ಲಿದ್ದವರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ತಕ್ಷಣವೇ ಸಹಾಯಕ್ಕೆ ಬಂದ ಸಾರ್ವಜನಿಕರು ಲಾರಿಯಲ್ಲಿದ್ದವರನ್ನು ರಕ್ಷಿಸಿ ಹೊರ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಅಮ್ಮಾಜಿ ಕೆರೆಯಲ್ಲಿ ಇತ್ತಿಚೇಗಷ್ಟೇ ಕಾರು ಮುಳುಗಿ...

Post
ಮೇ 20 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಆ ಪಂಚಾಯತಿಯ 1ಸ್ಥಾನಕ್ಕೆ ಮತದಾನ..!

ಮೇ 20 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಆ ಪಂಚಾಯತಿಯ 1ಸ್ಥಾನಕ್ಕೆ ಮತದಾನ..!

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಮೇ 20 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಏಪ್ರಿಲ್ ನಿಂದ, 2022ರ ಜುಲೈ ತಿಂಗಳವರೆಗೆ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...

Post
ಇಂದೂರಿನಲ್ಲಿ ಸಿಡಿಲಾಘಾತ, ಹೊತ್ತಿ ಉರಿದ ತೆಂಗಿನ ಮರಗಳು..!

ಇಂದೂರಿನಲ್ಲಿ ಸಿಡಿಲಾಘಾತ, ಹೊತ್ತಿ ಉರಿದ ತೆಂಗಿನ ಮರಗಳು..!

ಮುಂಡಗೋಡ: ತಾಲೂಕಿನ ಹಲವೆಡೆ ಮಳೆ ಗಾಳಿ, ಸಿಡಿಲಿನ ಅರ್ಭಟ ಜೋರಾಗಿತ್ತು. ತಾಲೂಕಿನ ಇಂದೂರು ಗ್ರಾಮದಲ್ಲಿ ಭರಸಿಡಿಲು ಬಡಿದು ಎರಡು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ.   ಇಲ್ಲಿನ ಕಲ್ಮೇಶ್ ದುಗ್ಗಳ್ಳಿ ಎಂಬುವವರ ಮನೆಯ ಹಿತ್ತಲಿನಲ್ಲಿರೋ ತೆಂಗಿನ ಮರಕ್ಕೆ ಭರಸಿಡಿಲು ಬಡಿದು ಹೊತ್ತಿ ಉರಿದಿವೆ. ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿದೆ. ಹೀಗಾಗಿ ಆತಂಕಗೊಂಡ ಗ್ರಾಮಸ್ಥರು ನಿಬ್ಬೆರಗಾಗಿ ಆ ಸಿಡಿಲಾಘಾತದ ರೋಮಾಂಚಕ ಕ್ಷಣ ನೋಡಿದ್ದಾರೆ. ಸಿಡಿಲಿನ ಹೊಡೆತಕ್ಕೆ ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.

Post
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!

ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!

ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ‌. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...

Post
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ‌. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...

Post
ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾ‌ನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ‌ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...

Post
ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!

ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!

ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್...

error: Content is protected !!