ಬೆಂಗಳೂರು : ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಅಂತಾ ತಿಳಿದು ಬಂದಿದೆ. ಬಿಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ(30) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: BIG BREAKING
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?
ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...
ವಿದ್ಯಾರ್ಥಿಗಳಿಗೂ ಕಾಡ್ತಿದೆ ಕೊರೋನಾ..!! ಮುಂಡಗೋಡ ತಾಲೂಕಿನಲ್ಲಿ ಇಂದು 53 ಪಾಸಿಟಿವ್, ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಇಂದು ಕೊರೋನಾ ಮಹಾ ಸ್ಪೋಟಗೊಂಡಿದೆ. ತಾಲೂಕಿನಲ್ಲಿ ಇಂದು 53 ಜನರಿಗೆ ಸೋಂಕು ದೃಢಪಟ್ಟಿದೆ. ಈ ಬಾರಿ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಮಾಣ ಗಣನೀಯವಾಗಿ ಏರಿದೆ. ಅದ್ರಲ್ಲೂ ಲೊಯೊಲಾ ಶಿಕ್ಷಣ ಕೇಂದ್ರದ ಪ್ರೌಢಶಾಲೆ, ಕಾಲೇಜು ವಿಭಾಗದ ಬರೋಬ್ಬರಿ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿದೆ. ಯಾವ್ಯಾವ ಶಾಲೆ, ಎಷ್ಟು ವಿದ್ಯಾರ್ಥಿಗಳು? ತಾಲೂಕಿನ ಬಡ್ಡಿಗೇರಿ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ, ಮಳಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಐವರು, ಪಾಳಾ ಉರ್ದು ಶಾಲೆಯ...
ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..!...
ಸನವಳ್ಳಿ ಜಲಾಶಯದ ಬಳಿ ಸ್ಕೂಟಿ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಜಲಾಶಯದ ಹತ್ತಿರ ಅಪಘಾತವಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಅಬ್ದುಲ್ ಗಫಾರ್(26) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಸನವಳ್ಳಿ ಜಲಾಶಯದ ಹತ್ತಿರ ಸ್ಕೂಟಿ ಸ್ಕಿಡ್ ಆಗಿರೋ ರೀತಿಯಲ್ಲಿ, ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಹೀಗಾಗಿ, ಮುಂಡಗೋಡ 108 ಅಂಬ್ಯುಲೆನ್ಸ್ ನ ಧನರಾಜ್ ಬಳೂರು ಸೇರಿದಂತೆ ಸಿಬ್ಬಂದಿಗಳು, ಗಾಯಾಳುಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ...
ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!
ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್‌ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು ಎನ್ನಲಾಗಿದೆ. ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ...
ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!
ಮುಂಡಗೋಡ; ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಕಂಡಿದ್ದಾನೆ. ಮುಂಡಗೋಡ ನಿವಾಸಿ ಮೆಹೆಬೂಬ್ ಸಾಬ್ ಜಮಖಂಡಿ(45) ಸಾವು ಕಂಡಿದ್ದಾನೆ. ತಾಲೂಕಿನ ಸುಳ್ಳಳ್ಳಿಯ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!
ಶಿರಸಿ: ನಿಡಗೋಡ ಬಳಿ ಸಿದ್ದಾಪುರ ಪೊಲೀಸ್ ಠಾಣೆಯ ಜೀಪ್ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ತೀವ್ರ ಗಾಯವಾಗಿದ್ದು, ವಾಹನದಲ್ಲೇ ಇದ್ದ ಪಿಎಸ್ ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಲ್ಲಿ ನಡೆಯುತ್ತಿರುವ ಪೊಲೀಸ್ ದೈಹಿಕ ಪರೀಕ್ಷೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎನ್ನಲಾಗಿದ್ದು. ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು, ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಪಿಎಸ್ಐ ಮಹಾಂತೇಶ ಕುಂಬಾರ ಸಿದ್ದಾಪುರ ಸರಕಾರಿ...





