ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?
ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...
ಮುಂಡಗೋಡಿನ ಅಮ್ಮಾಜಿ ಕೆರೆ ಮೇಲೆ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿರೂಪಾಕ್ಷಯ್ಯ ಜಂಬಯ್ಯನವರ್ (45) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!
ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ...
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?
ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...









