ಮುಂಡಗೋಡ ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಚಾಲನೆ ಪಡೆದಿದೆ. ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಇಲ್ಲಿನ ಗ್ರಾಮ ಪಂಚಾಯತಿ ಅದ್ಯಕ್ಷೆ ರೇಣುಕಾ ಮಾಯಣ್ಣವರ್ ಉದ್ಘಾಟಿಸಿದ್ರು. ಈ ವೇಳೆ ಸಂತೋಷ ಶೇಟ್ ರಾಯ್ಕರ್, ಆಶಾ ರಾಯ್ಕರ್, ಪಕ್ಕೀರಪ್ಪ, ಶಿವಾಜಿ ಸಿಂಧೆ, ಪ್ರಕಾಶ ಅಜ್ಜಮನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು..
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ..!
ಮುಂಡಗೋಡ; ತಾಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುತ್ತ ಮುತ್ತಲ ತಾಲೂಕು ಜಿಲ್ಲೆಗಳಿಂದ ಬಂದಿದ್ದ ಸ್ಪರ್ಧಾ ಹೋರಿಗಳು ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾದವು. ಜಿಲ್ಲೆ ಹೊರಜಿಲ್ಲೆಗಳಿಂದ ಬಂದಿದ್ದ ನೂರಾರು ಹೋರಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹೋರಿಗಳ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ರು. ತಮ್ಮ ನೆಚ್ಚಿನ ಹೋರಿಗಳು ಕಣದಲ್ಲಿ ಇಳಿಯುತ್ತಲೇ ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಹಾಗೆ ಕಣದಲ್ಲಿ ಬಿಟ್ಟ ಹೋರಿಗಳನ್ನು ಹಿಡಿಯಲು ಯುವಕರ ದಂಡೇ ಅಲ್ಲಿ ನೆರೆದಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿಗಳಿಗೆ ಬಹುಮಾನ ನೀಡಲಾಯಿತು.
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
ಶಿರಸಿಯಲ್ಲಿ ಒಂಟಿ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!
ಶಿರಸಿ: ನಗರದ ಭತ್ತದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಚಿನ್ನ ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಉಷಾ ದಾಮೋದರ ಪೈ ಎಂಬುವ ಮಹಿಳೆಯೇ ಚಿನ್ನ ಕಳೆದುಕೊಂಡವರು. ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು, ಕುಮಟಾಕ್ಕೆ ಹೋಗುವ ಮಾರ್ಗ ಕೇಳಿ ಮಹಿಳೆಯ ಕುತ್ತಿಗೆಯಲ್ಲಿನ ಸರ ಹರಿದು ಪರಾರಿಯಾಗಿದ್ದಾರೆ. ಸುಮಾರು 1,10,000 ರೂಪಾಯಿ ಮೌಲ್ಯದ ಚಿನ್ನದ ಸರ ದೋಚಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ***************************************
ಕಾರವಾರದಲ್ಲಿ ಸಂಭ್ರಮದ ರಾಜ್ಯೋತ್ಸವ, ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಹೆಬ್ಬಾರ್..!
ಕಾರವಾರ: 66 ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದ್ರು. ತೆರೆದ ವಾಹನದಲ್ಲಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ಸಚಿವ ಹೆಬ್ಬಾರ್, ಸಮಾರಂಭದಲ್ಲಿ ಭಾಷಣ ಮಾಡಿದ್ರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ್ , ಜಿಲ್ಲಾಧಿಕಾರಿ ಮುಲೈ ಮುಹಿಲಿನ್, ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಸೇರಿ ಹಲವರು ಉಪಸ್ಥಿತರಿದ್ದರು. ಇನ್ನು, ಇಂದಿನ 66 ನೇ ರಾಜ್ಯೋತ್ಸವದ ಸಂಭ್ರಮ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ...
ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ ಮಿಡಿದ ಯುವಕರು..!!
ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮರವಣಿಗೆ ನಡೆಸಿದ್ರು.. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು..









