ಮುಂಡಗೋಡ- ತಾಲೂಕಿನಲ್ಲಿ ಮಳೆಯ ಅವಾಂತರಗಳು ಶುರುವಾಗಿದೆ. ಶುಕ್ರವಾರ ತಾಲೂಕಿನ ಹುಲಿಹೊಂಡ ಗ್ರಾಮದ ಗದ್ದೆಯಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ಪರಿಣಾಮ, ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದ 9 ಜನರಿಗೆ ಸಿಡಿಲಿನ ಶಾಖ ತಟ್ಟಿ ಚಿಕ್ಕ ಪುಟ್ಟ ಗಾಯವಾದ ಘಟನೆ ನಡೆದಿದೆ. ಹುಲಿಹೊಂಡ ಗ್ರಾಮದ ರಾಮಪ್ಪ ಬಸಪ್ಪ ಕಬ್ಬೇರ್ ಎಂಬುವವರು ತಮ್ಮ ಜಮೀನಿನಲ್ಲಿ ನಿನ್ನೆ ಶುಕ್ರವಾರ ಗೋವಿನ ಜೋಳ ಬೀಜ ಬಿತ್ತನೆ ಮಾಡುತ್ತಿದ್ದರು. ಈ ವೇಳೆ ಮಳೆ ಬಂದ ಕಾರಣ ಮಳೆಯ ಹನಿಯಿಂದ ತಪ್ಪಿಸಿಕೊಳ್ಳಲು ಬೀಜ ಬಿತ್ತನೆಯಲ್ಲಿ ತೊಡಗಿದ್ದ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
VRDM ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸೆಪ್ಟಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದೇಶಪಾಂಡೆ ರೂಡ್ ಸೆಟಿ ವತಿಯಿಂದ ಇಂದು ಮೆಡಿಕಲ್ ಸೆಪ್ಟಿ ಕಿಟ್ ವಿತರಿಸಲಾಯಿತು. ತಾಲೂಕಿನ ಹುನಗುಂದ ಗ್ರಾಮದ ವಿರಕ್ತ ಮಠದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ಉದ್ಘಾಟಿಸಿ ಮಾತನಾಡಿದ್ರು. ಹುನಗುಂದ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಕುನ್ನೂರ್, ಉಪಾಧ್ಯಕ್ಷ ತುಕಾರಾಮ್ ಹೊನ್ನಳ್ಳಿ, ಕಾಂಗ್ರೆಸ್ ಯುವ ಮುಖಂಡ ಧರ್ಮರಾಜ್ ನಡಗೇರಿ, ಗ್ರಾಪಂ ಸದಸ್ಯರಾದ ಈಶ್ವರಗೌಡ ಅರಳಿಹೊಂಡ ಸೇರಿ ದೇಶಪಾಂಡೆ ರೂಡಸೆಟಿಯ ಸಂಚಾಲಕರು ಉಪಸ್ತಿತರಿದ್ದರು.
ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!
ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ದೇಹಳ್ಳಿ, ಆನಗೋಡ ಹಾಗೂ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳ, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ,ಗ್ರಾಮಗಳಲ್ಲಿ ಕೊರೊನಾ ಸೋಂಕನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಸ್ಥರನ್ನು ಭೇಟಿಯಾಗಿ ಕೋವಿಡ್ 19 ಸೋಂಕಿನ ಕುರಿತು ಜಾಗೃತಿ ಮೂಡಿಸಿ,ಕೋವಿಡ್ ನ...
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.
12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು. ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.
ಕಾರವಾರ ಡಿಸಿ ಕಛೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಹೆಬ್ಬಾರ್ ಸಭೆ..!
ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ...
ಜಿಲ್ಲಾಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ..!
ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಅಸಲಿ ನೋಟಿಗೆ ಕೋಟಾನೋಟು ಮಾರಾಟ ಜಾಲ: 6 ಜನ ದಂಧೆಕೋರರ ಬಂಧನ..!
ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ...
ನಂದಿಕಟ್ಟಾದಲ್ಲಿ ಕೊರೋನಾ ಸೋಂಕಿತರಿಗೆ ಔಷಧಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ರೈತ ಮೂರ್ಚಾ ಅಧ್ಯಕ್ಷರಾದ ಕಲ್ಲನಗೌಡ ಬಸನ ಗೌಡ್ರ, ತಾಲೂಕ ಎಪಿಎಮ್ ಸಿ ಸದಸ್ಯರು ನಿಂಗಪ್ಪಾ ಕವಟೆ, ಪರಶುರಾಮ್ ಮೇಂತೆಕಾರ, ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ...
ಮುಂಡಗೋಡ: ತಾಲೂಕಿನಲ್ಲಿಂದು 58 ಪಾಸಿಟಿವ್ ದೃಢ, 87 ಗುಣಮುಖ, ಒಂದು ಸಾವು..!
ಮುಂಡಗೋಡ-ತಾಲೂಕಿನಲ್ಲಿ ಇಂದು 58 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 87 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 384 ಸಕ್ರೀಯ ಪ್ರಕರಣಗಳಿದ್ದು, 114 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 227 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 43 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ತಾಲೂಕಿನ ಇಂದಿರಾನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58 ಕ್ಕೆ...





