ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಮಹಾಲೆ ಮಿಲ್ ಹತ್ತಿರ ಭೀಕರ ಅಪಘಾತವಾಗಿದೆ. PWD ಇಲಾಖೆಯ ಬೇಜವಾಬ್ದಾರಿ ಹಾಗೂ ಸರ್ಕಾರದ ಖಬರಗೇಡಿತನಕ್ಕೆ ಈ ರಸ್ತೆ ಅನ್ನೋದು ಯಮರೂಪಿಯಾಗಿದೆ. ನಿತ್ಯವೂ ಹಲವರು ಇಲ್ಲಿ ಎದ್ದು, ಬಿದ್ದು ಓಡಾಡುವಂತಾಗಿದೆ. ಅಂತದ್ದರಲ್ಲಿ ಇವಾಗ ಮತ್ತೊಂದು ಅಪಘಾತಕ್ಕೆ ಇದೇ ರಸ್ತೆಯ ಗುಂಡಿಗಳು ಕಾರಣವಾಗಿವೆ. ಅಂದಹಾಗೆ, ಮುಂಡಗೋಡ ಪಟ್ಟಣದ ಹೊರ ವಲಯದ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಹೀಗಾಗಿ, ಗಂಭೀರ ಗಾಯಗೊಂಡಿರೋ ಬೈಕ್ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಟಾಟಾ ಎಸ್ ನಲ್ಲಿ ಸಾಗಿಸುತ್ತಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಚೇಸ್ ಮಾಡಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ತಾಲೂಕಿನ ಬಡ್ಡಿಗೇರಿಯಿಂದ ಹಾನಗಲ್ಲಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಟಾಟಾ ಎಸ್ ನಲ್ಲಿ ಆರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ತಿಳಿದ ಪೊಲೀಸರು ತಕ್ಷಣವೇ ಅಲರ್ಟ್ ಆಗಿದ್ದಾರೆ. ಹಾನಗಲ್ಲಿನ ಕಡೆಗೆ ವಾಹನ ಹೊರಟಿದೆ ಅನ್ನೊ ಮಾಹಿತಿ ತಿಳಿದ ಪೊಲೀಸ್ರು, ಪಟ್ಟಣದ ಹೊರ ವಲಯದ...
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಮುಂಡಗೋಡ: ಕೊಲ್ಕತ್ತಾದಲ್ಲಿ ಇತ್ತೀಚಿಗೆ ನಡೆದ ಮೆಡಿಕಲ್ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರದ ಕರೆಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ನಾಳೆ ಮುಷ್ಕರ ನಡೆಯುತ್ತಿದೆ. ಆದ್ರೆ ಮುಂಡಗೋಡಿನಲ್ಲಿ ಮಾತ್ರ ಮುಷ್ಕರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಳೆ ಶನಿವಾರ ಮುಂಜಾನೆ 6 ಗಂಟೆಯಿಂದ ರವಿವಾರ ಮುಂಜಾನೆ 6 ಗಂಟೆಯವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ದಂತ ಚಿಕಿತ್ಸಾ...
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ವಿಡಿಯೋ ಸಾರ್ವಜನಿಕರಲ್ಲಿ ಅನಗತ್ಯ ಭಯ ಮತ್ತು ಆತಂಕ ಮೂಡಿಸಿದೆ. ಸದರಿ ವಿಷಯದ ಕುರಿತು ಜಿಲ್ಲಾಡಳಿತವು ಕೂಡಲೇ ಈ ಬಗ್ಗೆ ತನಿಖೆ ನಡೆಸಿ ವಿವರವಾದ ವರದಿ ನೀಡುವಂತೆ ಐ.ಆರ್.ಬಿ. ಗೆ ಸೂಚಿಸಿದ್ದು, ಸಂಪೂರ್ಣ ಪರಿಶೀಲನೆಯ ನಂತರ ವೀಡಿಯೊದಲ್ಲಿ ತೋರಿಸಿರುವ ಪ್ರದೇಶವು ನಿರ್ಮಾಣ ಹಂತದಲ್ಲಿ ಕಾಂಕ್ರೀಟ್ ಸ್ಲರಿಯ ಅತಿಕ್ರಮಿಸುವಿಕೆ (Concrete Stary Overlapping)ಯಿಂದ ಆಗಿರುವುದು ಎಂದು...
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನದ ಆಯ್ಕೆ ಹಿನ್ನೆಲೆ ಅಸಲೀ ಮಜಕೂರಗಳು ಜಾರಿಯಲ್ಲಿವೆ. ಆಗಷ್ಟ 20 ರಂದು ನಡೆಯಲಿರೋ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಎರಡೂ ಪಕ್ಷಗಳಲ್ಲೂ ಒಳಗೊಳಗಿನ ಲೆಕ್ಕಾಚಾರಗಳು ಗರಿಗೆದರಿವೆ. ಇಲ್ಲಿ ಮೇಲ್ನೋಟಕ್ಕೆ ಕೈ ಪಡೆಗೆ ಆಡಳಿತದ ಚುಕ್ಕಾಣಿ ಅನಾಯಾಸವಾಗಿ ದಕ್ಕುವ ಎಲ್ಲಾ ಸಾಧ್ಯತೆಗಳಿದ್ದರೂ ಬಿಜೆಪಿಯ ಒಳಗೊಳಗಿನ ಮಸಲತ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ಬಹುದೊಡ್ಡ ಗೇಮ್ ಪ್ಲ್ಯಾನ್ “ಕೈ”ಗೆತ್ತಿಗೊಂಡಿದೆ. 19 ಸಂಖ್ಯೆಯ ಆಟ..! ಅಸಲು, 19 ಸದಸ್ಯ ಬಲದ ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಸದ್ಯ ಬಿಜೆಪಿಗೆ 7 ಜನ...
ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!
ಮುಂಡಗೋಡ ತಾಲೂಕಿನ ಬಾಚಣಕಿ, ಅರಶಿಣಗೇರಿ, ಹುನಗುಂದ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಗೆ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಕೆಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಶಿರಸಿ- ಹುಬ್ಬಳ್ಳಿ ರಸ್ತೆಯ ಬಾಚಣಕಿ ಡ್ಯಾಂ ಬಳಿ ರಸ್ತೆಯ ಮೇಲೆ ನೀರು ತುಂಬಿ ಜಲಾವೃತವಾಗಿದೆ. ಅಲ್ಲದೇ ವಡಗಟ್ಟಾ ಬಳಿಯೂ ರಸ್ತೆಯ ಮೇಲೆ ನೀರಿ ಹರಿದು ಸಂಚಾರಕ್ಕೆ ಅಡಚಣೆಯಾಗಿದೆ.
“ಹರ್ ಘರ್ ತಿರಂಗಾ” ಪ್ರಯುಕ್ತ ಕಾರವಾರದಲ್ಲಿ “ಸೈಕ್ಲೊತಾನ್” ಕಾರ್ಯಕ್ರಮ..!
ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಕಾರವಾರ ಬೈಸಿಕಲ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ಹರ್ ಘರ್ ತಿರಂಗ” ಕಾರ್ಯಕ್ರಮದ ಅಡಿಯಲ್ಲಿ “ಸೈಕ್ಲೊತಾನ್” ಕಾರ್ಯಕ್ರಮ ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾದ “ಸೈಕ್ಲೊತಾನ್” ಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಚಾಲನೆ ನೀಡಿದ್ರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ...
ಮುಂಡಗೋಡ ಬಸವನ ಹೊಂಡದಲ್ಲಿ ವ್ಯಕ್ತಿಯ ಶವ ಪತ್ತೆ, ಆತ್ಮಹತ್ಯೆ ಮಾಡಿಕೊಂಡನಾ ಕಂಬಾರಗಟ್ಟಿಯ ಶಿವಾಜಿ..?
ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ವ್ಯಕ್ತಿಯೋರ್ವನ ಶವ ದೊರೆತಿದೆ. ಬೆಳ್ಳಂ ಬೆಳಿಗ್ಗೆ ಹೊಂಡದಲ್ಲಿ ಶವ ತೇಲುತ್ತಿರುವುದನ್ನು ಕಂಡ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪಿಎಸ್ಐ ಪರಶುರಾಮ್ ಟೀಂ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ. ಇನ್ನು ಹೊಂಡದಲ್ಲಿ ಪತ್ತೆಯಾಗಿರೋ ಶವ ಮುಂಡಗೋಡ ಪಟ್ಟಣದ ಕಂಬಾರಗಟ್ಟಿಯ ಶಿವಾಜಿ ಬಿಸೆಟ್ಟಿ (60) ಅಂತಾ ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತಾ ಶಂಕಿಸಲಾಗಿದೆ. ಸದ್ಯ ಶವ ಹೊರತೆಗೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿರಸಿ ಸಮೀಪ ಸ್ಕೂಟಿ, ಕಾರು ಅಪಘಾತ, ನಂದಿಗಟ್ಟಾ ಮೂಲದ ಗ್ರಾಪಂ ಕಾರ್ಯದರ್ಶಿ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನಂದಿಗಟ್ಟಾದ ಮಾರುತಿ ರಾಧಾಪುರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿರಸಿ ಸಮೀಪದ ಕೋಳಿಗಾರ್ ಬಳಿ ನಡೆದ ಸ್ಕೂಟಿ ಹಾಗೂ ಕಾರ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಶಿರಸಿ ತಾಲೂಕಿನ ಸಾಲ್ಕಣಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ ರಾದಾಪುರ, ಗುರುವಾರ ಬೆಳಿಗ್ಗೆ ಕರ್ತವ್ಯಕ್ಕಾಗಿ ಆಫೀಸಿಗೆ ತೆರಳುತ್ತಿದ್ದ ವೇಳೆ, ಕೋಳಿಗಾರ ಸಮೀಪ ಸ್ಕೂಟಿ ಹಾಗು ಕಾರು ಮುಖಾಮುಕಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲು ರವಾನಿಸುವ ಸಂದರ್ಭದಲ್ಲೇ ದಾರಿ...
ಗ್ರಾಮಕ್ಕೆ ಬಾರದ ಬಸ್, ಹುನಗುಂದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ..!
ಕಳೆದ ಒಂದು ವಾರದಿಂದ ಮುಂಡಗೋಡ ತಾಲೂಕಿನ ಹುನಗುಂದಕ್ಕೆ ಸಾರಿಗೆ ಬಸ್ ಸಂಚಾರ ಬಹುತೇಕ ಸ್ಥಗಿತವಾಗಿದೆ. KSRTC ಬಸ್ ಚಾಲಕ ಹಾಗೂ ನಿರ್ವಾಹಕರ ಬೇಜವಾಬ್ದಾರಿಗಳಿಂದ ನಿತ್ಯವೂ ವಿದ್ಯಾಭ್ಯಾಸಕ್ಕಾಗಿ ಮುಂಡಗೋಡ ಸೇರಿದಂತೆ ವಿವಿದೆಡೆ ಪ್ರಯಾಣಿಸುವ ನೂರಾರು ವಿದ್ಯಾರ್ಥಿಗಳ ಜೀವನ ಅತಂತ್ರವಾಗಿದೆ. ಹೀಗಾಗಿ, ಗುರುವಾರ ಬೆಳಿಗ್ಗೆ ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿಭಟನೆ ನಡೆಸಿದ್ರು. ಹುನಗುಂದ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ವಿದ್ಯಾರ್ಥಿಗಳು ಬೆಳಗ್ಗಿನಿಂದಲೂ ಕಾಯ್ದು ಕುಳಿತಿದ್ದರು. ಆದ್ರೆ, ಬಸ್ ಬರಲೇ ಇಲ್ಲ. ಹೀಗಾಗಿ, ವಿದ್ಯಾರ್ಥಿಗಳಿಗೆ ಬಸ್ ಬರದೇ ಇರುವ ಕಾರಣಕ್ಕೆ...









