ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!
ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ. ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ...
ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ- ಅಪಾರ ಹಾನಿ, ಒಟ್ಟೂ ಹಾನಿಯ ವಿವರ ಇಲ್ಲಿದೆ ನೋಡಿ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ಮಾಹೆಯಲ್ಲಿ ವಾಡಿಕೆ ಮಳೆಯ ಪ್ರಮಾಣ 993. 4 ಮಿಮಿ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ.81 ರಷ್ಟು ಅತ್ಯಧಿಕ ಮಳೆ ದಾಖಲಾಗಿದ್ದು, ಜನವರಿ 2024 ರಿಂದ ಇಲ್ಲಿಯವರೆಗೆ 1882.3 ಮಿಮಿ ವಾಡಿಕೆ ಮಳೆ ಇದ್ದು, 2745.7 ಮಿಮೀ...
ಉ. ಕನ್ನಡ ಜಿಲ್ಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಅಗಷ್ಟ 3 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ...
ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ...
ಜಿಲ್ಲೆಯಲ್ಲಿ ಇಂದು ಗುರುವಾರ ಶಾಲಾ ಕಾಲೇಜುಗಳಿಗೆ ಮಳೆಯ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಗುರುವಾರ ಅಗಷ್ಟ 1 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!
ನಿರಂತರ ಮಳೆ ಹಿನ್ನೆಲೆಯಲ್ಲಿ, ಮುಂಡಗೋಡ ತಾಲೂಕಿನ ಯರೆಬೈಲು ಬೇಡ್ತಿ ಹಳ್ಳದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡ ತಹಶಿಲ್ದಾರ ಶಂಕರ್ ಗೌಡಿ ಹಾಗೂ ಜಿಪಂ ಇಂಜಿನಿಯರ್ ಪ್ರದೀಪ್ ಭಟ್ಟ ಯರೆಬೈಲಿನ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡ್ರು. ಇನ್ನು, ಸ್ಥಳೀಯರಿಗೆ ಈ ಬಗ್ಗೆ ಸೂಚನೆ ನೀಡಿದ ತಹಶೀಲ್ದಾರರು, ನೀರಿನ ಪ್ರಮಾಣ ಹೆಚ್ಚಾದರೆ ತಾಲೂಕಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದ್ರು. ದನಕರುಗಳನ್ನು ಹಳ್ಳದ ನೀರಲ್ಲಿ ಬಿಡದಂತೆ ಹಾಗೂ ಜನರು ಹಳ್ಳದಲ್ಲಿ ಇಳಿಯದಂತೆ ಸೂಚಿಸಿದ್ರು. ಸ್ಥಳೀಯ ಪಿಡಿಓ ಸೇರಿದಂತೆ...
ಶಿರಸಿ ನಗರ ಠಾಣೆ ASI ಅಶೋಕ್ ರಾಥೋಡ್ ಗೆ ಪದೋನ್ನತಿ, PSI ಆಗಿ ಚಿಕ್ಕಮಗಳೂರಿಗೆ ವರ್ಗಾವಣೆ..!
ಶಿರಸಿ ನಗರ ಠಾಣೆಯ ASI ಆಗಿ ಕಾರ್ಯನಿರ್ವಹಿಸುತ್ತಿದ್ದ, ಅಶೋಕ ರಾಥೋಡ ಇವರು ಪದೋನ್ನತಿಯೊಂದಿಗೆ PSI ಆಗಿ ಚಿಕ್ಕಮಗಳೂರಿನ ಜೈಪುರ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಈ ಮೊದಲು ಅಶೋಕ್ ರಾಥೋಡ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿಯೂ ASI ಆಗಿ ಕಾರ್ಯನಿರ್ವಹಿಸಿದ್ದರು.
ಚಿಗಳ್ಳಿಯ ಸಂಗೂರಮಠರ ಮನೆಗೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಆರೋಗ್ಯ ವಿಚಾರಣೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಗೆ ಇಂದು ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ನೀಡಿದ್ರು. ಹಿರಿಯ ರಾಜಕೀಯ ಧುರೀಣ ಪಿ.ಎಸ್.ಸಂಗೂರ್ ಮಠ್ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಬ್ಬಾರ್, ಸಂಗೂರಮಠರ ಆರೋಗ್ಯ ವಿಚಾರಿಸಿದ್ರು. ಈ ವೇಳೆ ಎಚ್.ಎಂ.ನಾಯ್ಕ್, ಸಿದ್ದಪ್ಪ ಹಡಪದ, ಫಣಿರಾಜ್ ಹದಳಗಿ, ಗುಡ್ಡಪ್ಪ ಕಾತೂರು ಸೇರಿದಂತೆ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು.









