ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಕ್ರಾಸ್ ಬಳಿ ಮೊಬೈಲ್ ಅಂಗಡಿ ಕಳ್ಳತನವಾಗಿದೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಮೊಬೈಲ್ ಅಂಗಡಿ ಮೇಲಿನ ಸೀಟ್ ಕೊರೆದು ಕಳ್ಳರು ಒಳ ನುಗ್ಗಿದ್ದು ಬೆಲೆಬಾಳುವ ಮೊಬೈಲ್ ಗಳನ್ನು ಎಗರಿಸಿಕೊಂಡು ಹೋಗಿದ್ದಾರೆ. ಸುರೇಶ್ ಶೇಟ್ ಎಂಬುವವರಿಗೆ ಸೇರಿದ ಮೊಬೈಲ್ ಶಾಪ್ ನಲ್ಲಿ ಹತ್ತಕ್ಕೂ ಹೆಚ್ಚು ಬೆಲೆಬಾಳುವ ಮೊಬೈಲ್ ಗಳನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಏನಿಲ್ಲವೆಂದರೂ ಈ ಮೊಬೈಲ್ ಗಳ ಮೌಲ್ಯ ಒಂದು ಲಕ್ಷ ರೂ. ಗೂ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಕಾತೂರಿನ ಅಟ್ಟಣಗಿ ಬಳಿ ಬೈಕ್ ಅಪಘಾತ, ತಾಯಿ ಮಗನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಉಮ್ಮಚಗಿ ರಸ್ತೆಯ ಅಟ್ಟಣಗಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ತಾಯಿ ಮಗನಿಗೆ ಗಂಭೀರ ಗಾಯವಾಗಿದೆ. ಹಿಂದಿನಿಂದ ಬೈಕ್ ಗೆ ಲಾರಿ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಅಟ್ಟಣಗಿ ಗ್ರಾಮದ ಶಿವಪುತ್ರ ರಾಮಣ್ಣ ಹೋತ್ನಳ್ಳಿ (45) ಹಾಗೂ ಆತನ ತಾಯಿ ದೇವಕ್ಕ ರಾಮಣ್ಣ ಹೋತ್ನಳ್ಳಿ(70) ಗಾಯಗೊಂಡಿದ್ದಾರೆ. ಇನ್ನು, ಸ್ಥಳಕ್ಕೆ ಬಂದ 108 ಅಂಬ್ಯುಲೆನ್ಸ್ ಸಿಬ್ಬಂದಿ, ವೈದ್ಯಕೀಯ ತಂತ್ರಜ್ಞ ಧನರಾಜ್ ಮತ್ತು ಚಾಲಕ ಕೆಂಚೇಶ್ ತಕ್ಷಣ...
ಮುಂಡಗೋಡ PWD ಇಂಜಿನೀಯರ್ ಆಗಿದ್ದ ಎಂ.ರಾಮರಾವ್ ಹೃದಯಾಘಾತದಿಂದ ವಿಧಿವಶ..!
ಮುಂಡಗೋಡಿನ ಲೋಕೋಪಯೋಗಿ ಇಲಾಖೆಯ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸಿದ್ದ, ಸದ್ಯ ಕಲಘಟಗಿ PWD ಉಪವಿಭಾಗದ ಸಹಾಯಕ ಇಂಜಿನೀಯರ್ ಆಗಿ ಕಾರ್ಯ ನಿರ್ವಹಿಸ್ತಿದ್ದ ಎಂ.ರಾಮರಾವ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಹುಬ್ಬಳ್ಳಿಯ ಸನ್ಪೋಲ್ ಚರ್ಚ್ ಹತ್ತಿರ ಮೃತರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಎಂ.ರಾಮರಾವ್ ರವರ ಅಂತಿಮ ಸಂಸ್ಕಾರ ನಾಳೆ ದಿನಾಂಕ 28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಸನ್ ಪೀಟರ್ ಚರ್ಚನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಅಂತಾ ಕುಟುಂಬದವರು...
ಸಮಯಕ್ಕೆ ಬಾರದ ಬಸ್ ಹುನಗುಂದದಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ದಿಢೀರ್ ಪ್ರತಿಭಟನೆ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ನಿತ್ಯವೂ ಶಾಲಾ, ಕಾಲೇಜಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ಸುಮಾರು 3 ತಾಸಿಗೂ ಹೆಚ್ಚು ಕಾಲ ಬಸ್ ತಡೆದು ಪ್ರತಿಭಟಿಸಿದ್ದಾರೆ. ಸೋಮವಾರ ಮುಂಜಾನೆ 7 ಗಂಟೆಯಿಂದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಯಾವೊಂದು ಬಸ್ಸೂ ಕೂಡ ಸಮಯಕ್ಕೆ ಸರಿಯಾಗಿ ಬರುವುದೇ ಇಲ್ಲ. ಹೀಗಾಗಿ, ನಿತ್ಯವೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಕೆಲವು ಸಾರಿ ಸಮಯ ಮೀರಿ ಕಾಲೆಜುಗಳಿಗೆ ವಿದ್ಯಾರ್ಥಿಗಳು ಹೋಗದೇ ಮನೆಯಲ್ಲೇ ಉಳಿಯಬೇಕಾದ ಪರಿಸ್ಥಿತಿ...
ಅತ್ತಿವೇರಿ ಬಸವಧಾಮದಲ್ಲಿ ಡಿಸೆಂಬರ್ 3 ರಂದು ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ- ಮಾತೆ ಬಸವೇಶ್ವರಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ...
ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ದಂಧೆ, ಇಬ್ಬರು ಆರೆಸ್ಟ್..!
ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಗೋಮಾಂಸ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಓರ್ವ ಟಿಬೇಟಿಗನೂ ಸೇರಿದಂತೆ ಇಬ್ಬರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಟಿಬೇಟಿಯನ್ ಕಾಲೋನಿ ನಂಬರ್ 3 ರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಪಂಚ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ, ಮೋದಿ ಅಲೆ ಕೆಲಸ ಮಾಡಲಿದೆ- ಟಿಬೇಟಿಯನ್ ಕ್ಯಾಂಪ್ ಗೆ ಆಗಮಿಸಿದ ಅರುಣಾಚಲ ಸಿಎಂ ಪೇಮಾ ಖಂಡು ಹೇಳಿಕೆ
ಮುಂಡಗೋಡ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ, ಬಿಜೆಪಿ ಪರ ಫಲಿತಾಂಶ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಆಳ್ವಿಕೆಗೆ ಮೆಚ್ಚುಗೆ ಇದ್ದು ಬಿಜೆಪಿ ಸಕಾರಾತ್ಮಕ ಫಲಿತಾಂಶ ಸಿಗಲಿದೆ ಎಂಬ ಭರವಸೆ ಇದೆ ಅಂತಾ ಅರುಣಾಚಲ ಸಿಎಂ ಪೇಮಾ ಖಂಡು ಭವಿಷ್ಯ ನುಡಿದ್ರು. ಎರಡು ದಿನಗಳ ಕಾಲ ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ಗೆ ಭೇಟಿ ನೀಡಿರೋ ಅವ್ರು ಮಾತನಾಡಿದರು. ಇನ್ನು ಮಣಿಪುರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾತನಾಡಿದ ಅವ್ರು, ಅಲ್ಲಿ ಗಲಭೆ...
ಮುಂಡಗೋಡಿನಲ್ಲಿ ಖತರ್ನಾಕ ATM ವಂಚಕಿಯ ಬಂಧನ, ಹಣ ಡ್ರಾ ಮಾಡಿ ಕೊಡುವುದಾಗಿ ವಂಚಿಸಿದ್ದ ಲೇಡಿ..!
ಮುಂಡಗೋಡ: ಎಟಿಎಂ ನಿಂದ ಹಣ ಡ್ರಾ ಮಾಡಿ ಕೊಡುವುದಾಗಿ ಹೇಳಿ, ಬರೋಬ್ಬರಿ 69 ಸಾವಿರ ರೂ. ವಂಚಿಸಿದ್ದ ಖತರ್ನಾಕ ವಂಚಕಿಯನ್ನು ಮುಂಡಗೋಡ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಕಳೆದ ಸೆಪ್ಟೆಂಬರ್ 29 ರಂದು ನಡೆದಿದ್ದ ಎಟಿಎಂ ವಂಚನೆ ಪ್ರಕರಣವನ್ನು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಖಾರಿಪುರ ತಾಲೂಕಿನ ಶಿರಾಳಕೊಪ್ಪದ ಆರೋಪಿ ಮಹಿಳೆ ಕೌಸರಬಾನು ನಜೀರಸಾಬ ಹಿರೇಕರೂರು(35) ಎಂಬುವವಳನ್ನು ಬಂಧಿಸಿ, 12 ಸಾವಿರ ರೂ. ಹಣ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಮೈನಳ್ಳಿಯ ಸಹೀನಾಜ್ ಮಹಮ್ಮದ್ ಸಲೀಂ...
ಕಾತೂರು ಸಮೀಪದ ಗೋಟಗೋಡಿಕೊಪ್ಪದಲ್ಲಿ ಚಿರತೆ ದಾರುಣ ಸಾವು..! ಅಷ್ಟಕ್ಕೂ ಚಿರತೆಯ ಸಾವಿಗೆ ಎನು ಕಾರಣ..?
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪ ಸಮೀಪದ ಮುಕ್ತಿ ಮಠದ ಹತ್ತಿರ ಎರಡು ವರ್ಷದ ಗಂಡು ಚಿರತೆ ದಾರುಣ ಸಾವು ಕಂಡಿದೆ. ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿರತೆಯ ಸಾವು ಹೇಗಾಯ್ತು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಮದ್ಯಾಹ್ನವೇ..? ಶುಕ್ರವಾರ ಮದ್ಯಾಹ್ನವೇ ಗೋಟಗೋಡಿಕೊಪ್ಪದ ಮುಕ್ತಿ ಮಠದ ಹತ್ತಿರದ ಗದ್ದೆಗಳ ಪಕ್ಕದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ರೈತರು ಚಿರತೆಯ ಮೃತದೇಹ ಕಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಮೃತದೇಹದ...
ಅನಧಿಕೃತ ಇಟ್ಟಿಗೆ ಭಟ್ಟಿಗಳು ಬಾಲ ಬಿಚ್ಚಂಗಿಲ್ಲ, ಮತ್ತೆ ದಂಧೆಗಿಳಿದ್ರೆ ಹುಶಾರ್ ಅಂತಾ ಎಚ್ಚರಿಸಿದ್ರು ತಹಶೀಲ್ದಾರ್..!
ಮುಂಡಗೋಡ ತಾಲೂಕಿನಲ್ಲಿ ಅಕ್ರಮ ಇಟ್ಟಿಗೆ ಭಟ್ಟಿ ದಂಧೆಗೆ ಬಹುತೇಕ ಮೂಗುದಾರ ಬಿದ್ದಂತಾಗಿದೆ. ತಾಲೂಕಿನಲ್ಲಿ ಇನ್ಮೇಲೆ ಮತ್ತೆ ಇಟ್ಟಿಗೆ ಭಟ್ಟಿ ದಂಧೆ ಶುರು ಮಾಡಿದ್ರೆ ಸುಮ್ನೆ ಬಿಡಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತು ಪತ್ರಕರ್ತರು ಹಾಗೂ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ತಹಶೀಲ್ದಾರ್ ಸಂದೇಶ ರವಾನಿಸಿದ್ದಾರೆ. ಎಲ್ಲವೂ ಅನಧಿಕೃತವಂತೆ..! ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಎಲ್ಲವೂ ಅನಧಿಕೃತ ಇಟ್ಟಿಗೆ ಭಟ್ಟಿಗಳಂತೆ. ಇಲ್ಲಿ ಯಾರೊಬ್ರೂ ಅಧಿಕೃತ ಪರವಾನಗಿ ಪಡೆದು ದಂಧೆ ಮಾಡಿಯೇ ಇಲ್ಲ...









