ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೋರ್ವ ವಿದ್ಯುತ್ ಸ್ಪರ್ಶಿಸಿ ದಾರುಣ ಸಾವು ಕಂಡಿದ್ದಾನೆ. ಜೊತೆಗೆ ತನ್ನ ನೇತ್ರ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಈ ಮೂಲಕ ತಾಲೂಕಿನ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ನೇತ್ರದಾನ ಮಾಡಿದ ಯುವಕನಾಗಿ ಪ್ರೇರಕ ಶಕ್ತಿಯಾಗಿದ್ದಾನೆ. ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬುವ ಯುವಕನೇ ದಾರುಣ ಸಾವು ಕಂಡಿದ್ದು, ಇಂದು ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು ಹೋಗಿದ್ದ....
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ಸನವಳ್ಳಿಯ ಬಡ ಬಾಲಕರ ಕಷ್ಟಕ್ಕೆ ಹೃದಯವಂತರ ಸ್ಪಂಧನೆ, ಮಾನವೀಯತೆ ತೋರಿದ್ರು ಅಧಿಕಾರಿಗಳು..!
ನಿಜಕ್ಕೂ ನನ್ನ ಕಣ್ಣಂಚಲ್ಲಿ ಹನಿಗಳು ಜಿನುಗುತ್ತಿದೆ. ಸನವಳ್ಳಿಯ ಬಾಲಕರ ಕರುಣಾಜನಕ ಕತೆ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಪ್ರಸಾರ ಆಗಿದ್ದೇ ತಡ, ಹತ್ತಾರು ಪೋನ್ ಕಾಲ್ ಗಳು, ನೂರಾರು ಮೆಸೇಜ್ ಗಳು, ಅಣ್ಣಾ ಆ ಬಾಲಕರಿಗೆ ನಾವೂ ನಮ್ಮ ಕೈಲಾದಷ್ಟು ಸಹಾಯ ಮಾಡ್ತಿವಿ ದಯವಿಟ್ಟು ಅವ್ರ ಅಕೌಂಟ್ ನಂಬರ್ ಕಳಿಸಿ ಅಂತಾ ಬೆಂಗಳೂರು ಸೇರಿ ರಾಜ್ಯದ ಹಲವೆಡೆಯಿಂದ ಹೃದಯವಂತರು ಕೇಳಿಕೊಳ್ತಿದಾರೆ. ಆ ಬಡ ಬಾಲಕರ ಜೊತೆ ನಾವಿದ್ದೇವೆ ಏನು ಕಳಿಸಬೇಕು ಹೇಳಿ ಕಳಿಸಿ ಕೊಡ್ತಿವಿ ಅಂತಾ ಹೃದಯ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...
ಬಡ ಮಕ್ಕಳ ಗೋಳಿಗೆ ಸ್ಪಂಧಿಸಿದ್ರು ಸಿಡಿಪಿಓ ದೀಪಕ್ಕ, ಕಾರ್ಮಿಕರ ಮಕ್ಕಳಿಗೆ ದೊರೆಯಿತು ಆಸರೆ..!
ಮುಂಡಗೋಡ ತಾಲೂಕಿನ ಹುನಗುಂದ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದ್ದ ಬಡ ಕಾರ್ಮಿಕರ ಮಕ್ಕಳಿಗೆ ಅಂತೂ ಇಂತೂ ಆಸರೆ ಸಿಕ್ಕಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಸಿಡಿಪಿಓ ದೀಪಾ ಬಂಗೇರ್ ಮೇಡಮ್ಮು ಹುನಗುಂದಕ್ಕೆ ಧಾವಿಸಿ ಬಂದಿದ್ದಾರೆ. ಬಡಮಕ್ಕಳ ಗೋಳು ಕಣ್ಣಾರೆ ಕಂಡಿದ್ದಾರೆ. ಮಮ್ಮಲ ಮರುಗಿದ್ದಾರೆ. ಇಲಾಖೆಯಿಂದ ಅದೇನೇನು ಸೌಲಭ್ಯ ಇದೆಯೋ ಅದನ್ನೇಲ್ಲ ಯಥಾವತ್ತಾಗಿ ಪೂರೈಸಲು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ, ಪುಟ್ಟ ಕಂದಮ್ಮಗಳ ಮುಖದಲ್ಲಿ ಈಗ ಮಂದಹಾಸ ಮೂಡಿದೆ. ಹೀಗಾಗಿ, ದೀಪಕ್ಕನ ಕರ್ತವ್ಯಪರತೆಗೆ ಧನ್ಯವಾದ ಹೇಳಲೇಬೇಕಿದೆ....
ಈ ಮಕ್ಕಳು ಬಡವರ ಹೊಟ್ಟೆಯಲ್ಲಿ ಹುಟ್ಟಿದ್ದೇ ತಪ್ಪಾ..? ಮಕ್ಕಳ ಕಲ್ಯಾಣದ ಹೊಣೆ ಹೊತ್ತ ಅಧಿಕಾರಿಗಳೇ ಗಮನಿಸಿ, ಒಣಗುತ್ತಿವೆ ಕಂದಮ್ಮಗಳು..!
ಮುಂಡಗೋಡ: ಸರ್ಕಾರ ಬಡ ಮಕ್ಕಳಿಗೆ ಅಂತಾ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲೂ ಹಳ್ಳಿಗಾಡಿನ ಕಂದಮ್ಮಗಳಿಗೆ ಯಾವುದೇ ಅಪೌಷ್ಟಿಕತೆ ಬರದೆ ಇರಲಿ ಅಂತಾ ಅಂಗನವಾಡಿಗಳ ಮೂಲಕ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಅಲ್ಲದೇ ವಲಸೆ ಬರುವ ಕುಟುಂಬಗಳ ಮಕ್ಕಳಿಗಾಗೇ ಆಯಾ ವ್ಯಾಪ್ತಿಯ ಅಂಗನವಾಡಿಗಳ ಮೂಲಕ ವಿಶೇಷ ಕಾಳಜಿಗಳನ್ನೂ ವ್ಯವಸ್ಥೆ ಮಾಡಿದೆ. ಒಣಗುತ್ತಿವೆ ಕಂದಮ್ಮಗಳು..! ಆದ್ರೆ ಮುಂಡಗೋಡ ತಾಲೂಕಿನ ಅಧಿಕಾರಿಗಳಿಗೆ ಮಾತ್ರ ಇದೇಲ್ಲ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ತಾಲೂಕಿನಲ್ಲಿ ಸದ್ಯ ಕಬ್ಬು ಕಟಾವು ಮಾಡಲು ದೂರದ ಜಿಲ್ಲೆಗಳಿಂದ ಬಂದ ಆ...
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕಾಲೋನಿ ಬಳಿ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು...
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ...
ಮುಂಡಗೋಡ ಪೊಲೀಸ್ ಪೇದೆ ಅಣ್ಣಪ್ಪ ಬುಡಗೇರಗೆ “ತಿಂಗಳ ಅತ್ಯುತ್ತಮ ಸಾಧಕ” ಗೌರವ
ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅಣ್ಣಪ್ಪಾ ಬುಡಗೇರ್ ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಬಳಗದಿಂದ ಗೌರವ ದೊರೆತಿದೆ. ಶಿರಸಿ ವಿಭಾಗದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದ ಕಾರಣ “ತಿಂಗಳ ಅತ್ಯುತ್ತಮ ಸಾಧಕ” ಪ್ರಮಾಣಪತ್ರ ಲಭಿಸಿದೆ. ಶಿರಸಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಪೇದೆ ಅಣ್ಣಪ್ಪ ಬುಡಗೇರ್ ಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ...









