ಕಾರವಾರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ನೆರವೇರಿಸಿದ್ರು.

ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ರೂ. 34.21 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಉದ್ಘಾಟಿಸಿದರು.

