ರವಿವಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪ್ರವಾಸ..!

ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 12.45 ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಪ್ರವಾಸ..!

ಕಾರವಾರ; ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಮಧ್ಯಾಹ್ನ 12.45 ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50 ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.