ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಕಾರಣ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಖಾಸಗಿ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ.
ಸೋನಿಯಾ ಗಾಂಧಿ ಅವರನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸೋನಿಯಾ ಗಾಂಧಿ ಅವರು ಬೇಗ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.
