School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ, ನಾಳೆ ಸೋಮವಾರ, ಅಗಷ್ಟ 18 ರಂದು ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.