ಹಳಿಯಾಳ: ಬೈಕ್ ಕಳ್ಳತನ ಪ್ರಕರಣವೊಂದನ್ನು ಭೇದಿಸುವಲ್ಲಿ ಹಳಿಯಾಳ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳ್ಳತನವಾಗಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ನ್ನು ವಶಪಡಿಸಿಕೊಂಡಿದ್ದಾರೆ.

ಸೆ.29ರಂದು ರಾತ್ರಿ 11 ಗಂಟೆಯಿಂದ ಸೆ.30ರ ಬೆಳಗಿನ ಜಾವ 5.30ರ ನಡುವಿನ ಅವಧಿಯಲ್ಲಿ ದೂರುದಾರರ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಹಳಿಯಾಳ ಪೊಲೀಸರು ಅ.26ರಂದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ ಕಳ್ಳತನವಾಗಿದ್ದ ಸುಮಾರು 50,000 ರೂ. ಮೌಲ್ಯದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ದಾಂಡೇಲಿ ಡಿವೈಎಸ್ಪಿ ಗಿರೀಶ್ ಜಿ. ಹಾಗೂ ಹಳಿಯಾಳ ಪಿಐ ಭೀಮಣ್ಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.
ಪಿಎಸ್ಐಗಳಾದ ಕಿರಣ ಪಾಟೀಲ ಮತ್ತು ಕುಮಾರ ಕಾಂಬಳೆ ನೇತೃತ್ವದಲ್ಲಿ ಪೊಲೀಸ್ ಹಳಿಯಾಳ ಪೊಲೀಸ್ ಠಾಣೆಯ ಎಎಸ್ಐ ಪ್ರಶಾಂತ್, ಸಿಬ್ಬಂದಿಗಳಾದ ವಿನೋದ್ ಜಿ.ಬಿ. ಶ್ರೀಶೈಲ ಜಿ.ಎಂ., ಲಕ್ಷ್ಮಣ ಪೂಜಾರಿ, ಬಸವರಾಜ ಚವಡಿ, ಮಹಾಂತೇಶ ಮುಧೋಳ ಭಾಗವಹಿಸಿದ್ದರು.
