Farmer death News;
ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಮುಖ ಸುದ್ದಿ; ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
