Best Teacher Award; ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನ ಮೂವರು ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗ ಸೇರಿ ಒಟ್ಟೂ ಮೂರು ವಿಭಾಗಗಳಲ್ಲೂ ತಲಾ 6 ಜನರಂತೆ ಒಟ್ಟೂ 18 ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಅದ್ರಲ್ಲಿ ಮುಂಡಗೋಡ ತಾಲೂಕಿನ ಮೂವರಿಗೆ ಪ್ರಶಸ್ತಿ ಲಭಿಸಿದೆ.
ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುನೀತಾ ಕೃಷ್ಣಪ್ಪ ಪವಾರ್ ಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಇನ್ನು, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹಿರೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಕೈಟಕರ್ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಮಳಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದೈಹಿಕ ಶಿಕ್ಷಕ ಅಶೋಕ ಸಂಕ್ರಿಕೊಪ್ಪ ಆಯ್ಕೆಯಾಗಿದ್ದಾರೆ.