Drawing competition ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ.
ಜೂ.4 ರಂದು ಬೆಳಗ್ಗೆ 11 ಗಂಟೆಗೆ ಹಾಗೂ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವನಮಹೋತ್ಸವ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಹಿಂದೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರಾಮಾನಿ ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.