ಮುಂಡಗೋಡ: ತಾಲೂಕಿನಲ್ಲಿ ಇಂದು ಕೂಡ (ಜುಲೈ 7, 2026) ಅತಿ ಹೆಚ್ಚು ಮಳೆ ಬರುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಆಯ್ದ 5 ಗ್ರಾಮಗಳ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಿಸಿ ಮುಂಡಗೋಡ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಆದೇಶ ಹೊರಡಿಸಿದ್ದಾರೆ.
ಮುಂಡಗೋಡ ತಹಶೀಲ್ದಾರರ ಗಮನಕ್ಕೆ ತಂದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕೆಳಗಿನ ಶಾಲೆಗಳಿಗೆ ಮಾತ್ರ ಇಂದು ರಜೆ ನೀಡಲಾಗಿದೆ ಅಂತ ಬಿಇಒ ಸುಮಾ ಜಿ. ಪಬ್ಲಿಕ್ ಫಸ್ಟ್ ನ್ಯೂಸ್ ಗೆ ತಿಳಿಸಿದ್ದಾರೆ..
ಇಂದು ರಜೆ ಇರುವ ಶಾಲೆ, ಅಂಗನವಾಡಿ..!
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿಕೊಪ್ಪ,
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಂಬಿ,
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುರ್ಲಿ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ (ಮಳಗಿ),
ನಿತ್ಯಜ್ಯೋತಿ ಪಬ್ಲಿಕ್ ಶಾಲೆ, ಕಾತೂರ
ಹಾಗೂ ಈ ಎಲ್ಲಾ ಗ್ರಾಮಗಳ ಅಂಗನವಾಡಿಗಳಿಗೆ ಇಂದು ರಜೆ ನೀಡಲಾಗಿದೆ.
ಇನ್ನು, ತಾಲೂಕಿನ ಉಳಿದ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಪ್ರಕಟಣೆಯನ್ನು ಗಮನಿಸಬೇಕಾಗಿ ಕೋರಲಾಗಿದೆ.
