ಕಲಬುರಗಿ:ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದ್ದು, ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಬೃಹತ್ ಮುನ್ನಡೆ ಸಾಧಿಸಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಆದ್ರೆ, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ತಾಜಾ ವರದಿಗಳ ಪ್ರಕಾರ, ಶಶೀಲ್ ನಮೋಶಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ್ ಅವರಿಗಿಂತ ಸುಮಾರು 3,000 ಮತಗಳ ಸ್ಪಷ್ಟ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ನಮೋಶಿ ಅವರ ಗೆಲುವು ಖಚಿತಗೊಂಡಿದೆ.

ಮತ ಎಣಿಕೆ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಚುನಾವಣಾಧಿಕಾರಿಗಳಿಂದ ಅಧಿಕೃತವಾಗಿ ಫಲಿತಾಂಶ ಘೋಷಣೆಯೊಂದೇ ಬಾಕಿಯಿದೆ.
