ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!

ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅದರ ಜೊತೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. ಕೇರಳಂ ರಾಜ್ಯದಲ್ಲಿ ಹಾಗೂ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಹಿನ್ನೆಲೆಯಲ್ಲಿ ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ರು‌.

ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷಗಳನ್ನು ಕೂಗಿ ಸಂಭ್ರಮಿಸಿದ್ರು.