ಮುಂಡಗೋಡ ತಾಲೂಕಿನಲ್ಲಿ ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ತಹಶೀಲ್ದಾರ್ ಮಾಹಿತಿ

ಮುಂಡಗೋಡ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (S.I.R.) ಕಾರ್ಯವು ಪ್ರಗತಿಯಲ್ಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಮತದಾರರ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಂಡಗೋಡ ತಹಶೀಲ್ದಾರರು ಹಾಗೂ ಸಹಾಯಕ ಮತದಾರ ನೊಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಚುನಾವಣಾ ಆಯೋಗದ ವೇಳಾಪಟ್ಟಿಯ ಪ್ರಕಾರ, ಕಳೆದ ಜೂನ್ 30ರಿಂದಲೇ ಮುಂಡಗೋಡ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ‘Enumeration Form’ಗಳನ್ನು ತಲುಪಿಸಿದ್ದಾರೆ.

​ಪ್ರಸ್ತುತ ಈ ನಮೂನೆಯನ್ನು ತುಂಬುವಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲಗಳಿದ್ದಲ್ಲಿ ಅಥವಾ ಅಪೂರ್ಣ ಮಾಹಿತಿ ಇದ್ದಲ್ಲಿ, ಆಯೋಗದ ಮಾರ್ಗಸೂಚಿಗಳನ್ವಯ ಮಾಹಿತಿ ಪಡೆಯಲು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಈ ಕೆಳಗಿನಂತೆ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ..

​ನಗರ ವ್ಯಾಪ್ತಿ: ಮುಂಡಗೋಡದ ಪಟ್ಟಣ ಪಂಚಾಯತ ಕಾರ್ಯಾಲಯ ಹಾಗೂ ತಹಶೀಲ್ದಾರ ಕಾರ್ಯಾಲಯ.

​ಗ್ರಾಮೀಣ ವ್ಯಾಪ್ತಿ: ಆಯಾ ವ್ಯಾಪ್ತಿಯ ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಾರ್ಯಾಲಯಗಳು.

​ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು (BLO) ಅಥವಾ ಈ ಮೇಲ್ಕಂಡ ಸಹಾಯ ಕೇಂದ್ರಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಈ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸಬೇಕಾಗಿ ತಹಶೀಲ್ದಾರರು ಸಾರ್ವಜನಿಕರಲ್ಲಿ ಕೋರಿದ್ದಾರೆ.