ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಅಗ್ನಿ ಅವಘಡ: ಕಬ್ಬು ಸಾಗಿಸಲು ಗದ್ದೆಗೆ ಬಂದಿದ್ದ ಲಾರಿ ಸಂಪೂರ್ಣ ಭಸ್ಮ..!

ಮುಂಡಗೋಡ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ಅವಘಡವೊಂದರಲ್ಲಿ ಕಬ್ಬು ಸಾಗಿಸಲು ಬಂದಿದ್ದ ಲಾರಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

​ಅಗಡಿ ಗ್ರಾಮದ ರೈತ ಶಿವಪ್ಪ ನೀಲಪ್ಪ ಲಮಾಣಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಈ ಘಟನೆ ನಡೆದಿದೆ. ಕಬ್ಬು ಕಡಿದು ಸಾಗಿಸಲು ಲಾರಿಯನ್ನು ಗದ್ದೆಗೆ ತರಲಾಗಿತ್ತು. ಈ ವೇಳೆ ಲಾರಿಯಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕಿಟ್ (ವೈಯರ್ ಸ್ಪಾರ್ಕ್) ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದುಬಂದಿದೆ.
​ಬೆಂಕಿಯ ಕೆನ್ನಾಲಿಗೆಯು ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿದ್ದು, ಪರಿಣಾಮವಾಗಿ ಲಾರಿ ಬೆಂಕಿಗಾಹುತಿಯಾಗಿ ಸಂಪೂರ್ಣವಾಗಿ ಸುಟ್ಟುಹೋಗಿದೆ.

​ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.