Bhimatheera Murder News;
ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್
ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ
ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ ಕಣ್ಣಿಗೆ ಕಾರದ ಪುಡಿ ಎರಚಿ, ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಹೀಗಾಗಿ, ಗುಂಡುಗಳು ತಲೆ ಹಾಗೂ ಎದೆಗೆ ತಗುಲಿದ್ದು ಭೀಮನಗೌಡ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹೀಗಾಗಿ, ಶವವನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹಳೆಯ ವೈಷಮ್ಯದ ಹಿನ್ನಲೆ ಗುಂಡು ಹಾರಿಸಿರೋ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ದೇವರನಿಂಬರಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.